Ad image

ಸಮಾಜ ಕಲ್ಯಾಣ ಇಲಾಖೆ; ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

Vijayanagara Vani
ಸಮಾಜ ಕಲ್ಯಾಣ ಇಲಾಖೆ; ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
ಬಳ್ಳಾರಿ,ಜು.02
ಪ್ರಸ್ತಕ ಸಾಲಿಗೆ ಬಳ್ಳಾರಿ ಜಿಲ್ಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಆರ್ಜಿ ಆಹ್ವಾನಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ ಅವರು ತಿಳಿಸಿದ್ದಾರೆ.
ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶ ಪಡೆಯಲು ಸಮಾಜ ಕಲ್ಯಾಣ ಇಲಾಖೆಯ ಅಧಿಕೃತ ವೆಬ್ಸೈಟ್ sw.kar.nic.in ಲಿಂಕ್ನಲ್ಲಿ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಅನಾನುಕೂಲವಾದಲ್ಲಿ ಸಂಬಂಧಿಸಿದ ತಾಲ್ಲೂಕು ಮಟ್ಟದ ಸಮಾಜ ಕಲ್ಯಾಣ ಇಲಾಖೆಯ ಕಚೇರಿಯಲ್ಲಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ನಗರದ ಕೋಟೆ ಪ್ರದೇಶದ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿ ಅಥವಾ ದೂ.08392-267932 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Share This Article
error: Content is protected !!
";