Ad image

ವಿದ್ಯಾರ್ಥಿ ನಿಲಯಕ್ಕೆ ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯ ಎಸ್.ಕೆ.ವೆಂಟಿಗೋಡಿ ಭೇಟಿ ಪಠ್ಯದ ಜತೆಗೆ ಸ್ಪರ್ಧಾತ್ಮಕ ಪರೀಕ್ಷೆಗೂ ತಯಾರಾಗಿ

Vijayanagara Vani
ವಿದ್ಯಾರ್ಥಿ ನಿಲಯಕ್ಕೆ ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯ ಎಸ್.ಕೆ.ವೆಂಟಿಗೋಡಿ ಭೇಟಿ ಪಠ್ಯದ ಜತೆಗೆ ಸ್ಪರ್ಧಾತ್ಮಕ ಪರೀಕ್ಷೆಗೂ ತಯಾರಾಗಿ
ಚಿತ್ರದುರ್ಗಜುಲೈ.03:
ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ಹೆಚ್ಚಿನ ಮಟ್ಟದಲ್ಲಿ ತಯಾರಾಗಬೇಕು ಎಂದು ರಾಜ್ಯ ಮಾನವ ಹಕ್ಕುಗಳ ಆಯೋಗದ ನ್ಯಾಯಾಂಗದ ಸದಸ್ಯ ಎಸ್.ಕೆ.ವೆಂಟಿಗೋಡಿ ಸಲಹೆ ನೀಡಿದರು.
ನಗರದ ಸರ್ಕಾರಿ ಕಲಾ ಕಾಲೇಜು ಹಿಂಭಾಗದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಈಚೆಗೆ ಅನಿರೀಕ್ಷಿತವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ವಿದ್ಯಾರ್ಥಿನಿಯರೊಂದಿಗೆ ಸಂವಾದ ನಡೆಸಿ ನಿಲಯದಲ್ಲಿನ ವ್ಯವಸ್ಥೆಯ ಬಗ್ಗೆ ಹಾಗೂ ಉಟೋಪಚಾರದ ಬಗ್ಗೆ ಮಾಹಿತಿ ಪಡೆದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳು ನಿಲಯದ ಸೌಲಭ್ಯಗಳು ಹಾಗೂ ಊಟೋಪಚಾರ ಉತ್ತಮ ರೀತಿಯಲ್ಲಿರುವುದಾಗಿ ತಿಳಿಸಿದರು.
ಸರ್ಕಾರ ನೀಡುತ್ತಿರುವ ಅವಕಾಶಗಳನ್ನು ವಿದ್ಯಾರ್ಥಿಗಳು ಸಂಪೂರ್ಣವಾಗಿ ಸದುಪಯೋಗಪಡಿಸಿಕೊಳ್ಳಬೇಕು. ವಿದ್ಯಾರ್ಥಿಗಳ ಸುರಕ್ಷತೆಯ ಕುರಿತು ನಿಲಯಗಳಲ್ಲಿ ಕಾರ್ಯಕ್ರಮಗಳನ್ನು ಮಾಡಿ ಜಾಗೃತಿ ಮೂಡಿಸಲು ಅಧಿಕಾರಿಗಳಿಗೆ ಸೂಚಿಸಿದರು.
ನಿಲಯದ ಸ್ವಚ್ಛತೆ, ವಿದ್ಯಾರ್ಥಿಗಳ ವ್ಯಾಸಂಗ, ವಿದ್ಯಾರ್ಥಿಗಳ ಆರೋಗ್ಯ, ನಿಲಯದ ಸುತ್ತಮುತ್ತಲಿನ ವಾತಾವರಣ ಸ್ವಚ್ಚವಾಗಿಟ್ಟುಕೊಳ್ಳಲು ಸೂಚಿಸಿದರು. ನಿಲಯದ ಅಡುಗೆಮನೆ, ಉಗ್ರಾಣ ಮತ್ತು ವಿದ್ಯಾರ್ಥಿಗಳ ಕೊಠಡಿಗಳನ್ನು ಪರಿಶೀಲಿಸಿ ನಿಲಯ ನಿರ್ವಹಣೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ನಂತರ ಸಮಾಜಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವೃತ್ತಿಪರ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಉತ್ತಮ ಗಾಳಿ ಬೆಳಕಿನ ವ್ಯವಸ್ಥೆ ಮಾಡಲು ಅಧಿಕಾರಿಗಳಿಗೆ ತಿಳಿಸಿದರು. ನಿಲಯ ನಿರ್ವಹಣೆಯು ಉತ್ತಮವಾಗಿರುವುದಾಗಿ ಅಭಿಪ್ರಾಯಿಸಿ, ಸಂಬಂಧಪಟ್ಟ ಅಧಿಕಾರಿಗಳು ಮೇಲಿಂದ ಮೇಲೆ ವಿದ್ಯಾರ್ಥಿ ನಿಲಯಗಳಿಗೆ ಭೇಟಿ ಪರಿಶೀಲಿಸಲು ಸೂಚಿಸಿದರು.
ಜಿಲ್ಲಾ ಕಾರಾಗೃಹಕ್ಕೆ ಭೇಟಿ: ಚಿತ್ರದುರ್ಗ ಜಿಲ್ಲಾ ಕಾರಾಗೃಹಕ್ಕೆ ಭೇಟಿ ನೀಡಿದ ರಾಜ್ಯ ಮಾನವ ಹಕ್ಕುಗಳ ಆಯೋಗದ ನ್ಯಾಯಾಂಗದ ಸದಸ್ಯ ಎಸ್.ಕೆ.ವೆಂಟಿಗೋಡಿ ಅವರು ಅಲ್ಲಿನ ಖೈದಿಗಳೊಂದಿಗೆ ಸಂವಾದಿಸಿ ಯೋಗ ಕ್ಷೇಮದ ಕುರಿತು ವಿಚಾರಿಸಿದರು. ಕಾರಾಗೃಹದಲ್ಲಿ ನೀಡುವಂತಹ ಊಟದ ವ್ಯವಸ್ಥೆಯ ಕುರಿತು ಪರಿಶೀಲಿಸಿದರು. ಶೌಚಾಲಯ, ಸ್ನಾನಗೃಹಗಳಲ್ಲಿ ಸ್ವಚ್ಚತೆ ಕುರಿತು ಪರಿಶೀಲಿಸಿದರು. ಸಂದರ್ಶಕರ ಪುಸ್ತಕ, ಕೈದಿಗಳ ರಿಜಿಸ್ಟರ್, ಸಿ.ಸಿ.ಕ್ಯಾಮೆರಾ ಕುರಿತು ಹಾಗೂ ಇತರೆ ಸೌಲಭ್ಯಗಳ ಬಗ್ಗೆ ಮತ್ತು ಭದ್ರತೆ ಕುರಿತು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಚಿತ್ರದುರ್ಗ ತಹಶೀಲ್ದಾರ್ ಡಾ.ಕೆ.ನಾಗವೇಣಿ, ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪುಷ್ಪಲತಾ ಭಾವಿಮಠ, ತಾಲ್ಲೂಕು ಸಮಾಜಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಕೃಷ್ಣಮೂರ್ತಿ ಮತ್ತಿತರರು ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.
Share This Article
error: Content is protected !!
";