ಎಂ.ಕೆ.ಹಟ್ಟಿ ಗ್ರಾ.ಪಂ ಅಧ್ಯಕ್ಷ ಆರ್.ಗಣೇಶ್ ಸಾಂಕ್ರಾಮಿಕ ರೋಗ ನಿರ್ವಹಣೆಯಲ್ಲಿ ಗ್ರಾ.ಪಂ ಕೈಜೋಡಿಸಲಿದೆ

Vijayanagara Vani
ಎಂ.ಕೆ.ಹಟ್ಟಿ ಗ್ರಾ.ಪಂ ಅಧ್ಯಕ್ಷ ಆರ್.ಗಣೇಶ್ ಸಾಂಕ್ರಾಮಿಕ ರೋಗ ನಿರ್ವಹಣೆಯಲ್ಲಿ ಗ್ರಾ.ಪಂ ಕೈಜೋಡಿಸಲಿದೆ
ಚಿತ್ರದುರ್ಗ:
ಸಾಂಕ್ರಾಮಿಕ ರೋಗ ನಿರ್ವಹಣೆಯಲ್ಲಿ ಗ್ರಾಮ ಪಂಚಾಯಿತಿ ಆರೋಗ್ಯ ಇಲಾಖೆಯೊಂದಿಗೆ ಕೈಜೋಡಿಸಲಿದೆ ಎಂದು ಎಂ.ಕೆ.ಹಟ್ಟಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಆರ್.ಗಣೇಶ್ ಹೇಳಿದರು.
ಇಲ್ಲಿನ ಮಠದ ಕುರುಬರಹಟ್ಟಿ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಬುಧವಾರ ಡೆಂಗ್ಯೂ ಅಡ್ವಕೆಸಿ (ಸಮರ್ಥನಾ) ಸಭೆ ಉದ್ಘಾಟಿಸಿ ಅವರು ಮಾತನಾಡಿದರು.
ಸಾಂಕ್ರಮಿಕ ರೋಗ ತಡೆಗಟ್ಟಲು ಶುದ್ಧ ಕುಡಿಯುವ ನೀರಿನ ಪೂರೈಕೆ, ಪರಿಸರ ನೈರ್ಮಲ್ಯ ಫನತ್ಯಾಜ್ಯ ಸರಿಯಾದ ವಿಲೇವಾರಿ, ಸೊಳ್ಳೆ ಸಂತಾನೋತ್ಪತ್ತಿ ತಾಣ ನಾಶಪಡಿಸಲು ಗ್ರಾಮ ಪಂಚಾಯಿತಿ ಆರೋಗ್ಯ ಇಲಾಖೆಯೊಂದಿಗೆ ಅಗತ್ಯ ಸಹಕಾರ ನೀಡಲಿದೆ ಎಂದು ಹೇಳಿದರು.
ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ ಮಾಹಿತಿ ಶಿಕ್ಷಣ ನೀಡಿ, ಸಾಂಕ್ರಾಮಿಕ ರೋಗಗಳು ಕಲುಷಿತ ನೀರು ಆಹಾರ ಸೇವನೆಯಿಂದ, ವೈಯಕ್ತಿಕ ಸ್ವಚ್ಚತಾ ಕೊರತೆ, ಕೀಟಗಳಿಂದ ಹರಡುತ್ತವೆ. ಸಾಮಾನ್ಯವಾಗಿ ಸೊಳ್ಳೆಗಳ ಕಡಿತ ಮಲೇರಿಯಾ ಡೆಂಗ್ಯೂ, ಚಿಕನ್ ಗುನಿಯ, ಮೆದುಳ ಜ್ವರ ಹರಡುತ್ತವೆ. ಈಗ ಡೆಂಗ್ಯೂ ಜ್ವರ ರಾಜ್ಯಾದ್ಯಂತ ಹೆಚ್ಚು ಪ್ರಕರಣಗಳು ಕಂಡು ಬಂದಿದೆ. ಚಿತ್ರದುರ್ಗ ನಗರದಲ್ಲಿ ಜುಲೈ-2024 ರಲ್ಲಿ 5 ಪ್ರಕರಣ ಮತ್ತು ಜನವರಿ 2024 ರಿಂದ ಜುಲೈ 10 ರವರೆಗೆ ಒಟ್ಟು 85 ಪ್ರಕರಣಗಳು ವರದಿಯಾಗಿವೆ. ಯಾವುದೇ ಸಾವು ನೋವು ಸಂಭವಿಸಿರುವುದಿಲ್ಲ. ಈ ಬಗ್ಗೆ ಗ್ರಾಮ ಪಂಚಾಯತಿ ಸದಸ್ಯರು ಮಾಹಿತಿ ಪಡೆದು ನಿಯಂತ್ರಣಕ್ಕೆ ಸಹಕರಿಸಬೇಕು ಎಂದು ಮನವಿ ಮಾಡಿದರು.
ಆರೋಗ್ಯ ಇಲಾಖೆ ಮಾರ್ಗದರ್ಶನದಂತೆ ಪ್ರತಿ ಶುಕ್ರವಾರ ಎಲ್ಲಾ ಮನೆಗಳಲ್ಲಿ ಒಣ ದಿನ ಆಚರಣೆ ಮಾಡುವುದು. ಅಂದರೆ ಶುಕ್ರವಾರದಂದು ಎಲ್ಲಾ ಮನೆಗಳಲ್ಲಿ ನೀರು ಸಂಗ್ರಹಿಸುವ ಪರಿಕರಗಳು ಡ್ರಮ್, ಬ್ಯಾರೆಲ್, ತೊಟ್ಟಿ ಇವುಗಳನ್ನು ಸ್ವಚ್ಛವಾಗಿ ತೊಳೆದು ಒಣಗಿಸಿ ನಂತರ ನೀರು ಸಂಗ್ರಹಿಸಿ ಮುಚ್ಚಳ ಮುಚ್ಚಿ ನೀರು ಸಂಗ್ರಹಿಸುವುದರಿಂದ ಸೊಳ್ಳೆಗಳ ಸಂತಾನೋತ್ಪತ್ತಿ ಕಡಿಮೆಯಾಗುತ್ತದೆ. ಡೆಂಗ್ಯೂ ಪ್ರಕರಣಗಳು ಕಡಿಮೆಯಾಗುತ್ತವೆ ಎಂದರು.
ಪರಿಸರ ಸ್ವಚ್ಛತೆ, ನೈರ್ಮಲ್ಯ ಕಾಪಾಡುವ ಜವಾಬ್ದಾರಿ, ಘನ ತ್ಯಾಜ್ಯ ವಸ್ತುಗಳ ಸರಿಯಾದ ನಿರ್ವಹಣೆಯ ಆರೋಗ್ಯಕರ ಅಭ್ಯಾಸಗಳು ನಿಮ್ಮದಾಗಲಿ ಎಂದರು.
ಆರೋಗ್ಯ ನಿರೀಕ್ಷಣಾಧಿಕಾರಿ ಗಂಗಾಧರ ರೆಡ್ಡಿ ಮಾತನಾಡಿ, ಸೊಳ್ಳೆಗಳ ಜೀವನ ಚಕ್ರ ಸೊಳ್ಳೆಗಳ ನಿಯಂತ್ರಣದಲ್ಲಿ ಇಲಾಖೆಯಲ್ಲಿ ದೊರೆಯುವ ಸೇವಾ ಸೌಲಭ್ಯಗಳನ್ನು ಸಭೆಯಲ್ಲಿ ವಿವರಿಸಿದರು.
ಇದೇ ಸಂದರ್ಭದಲ್ಲಿ ಡೆಂಗ್ಯೂ ನಿಯಂತ್ರಣ ಮಾಹಿತಿ ಕರಪತ್ರ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ವೀರಮ್ಮ, ಪಿ.ಡಿ.ಓ ಸಂತೋμï, ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ನಾಗರಾಜ್, ನವೀನ್, ಪ್ರವೀಣ್, ಸಮುದಾಯ ಆರೋಗ್ಯಾಧಿಕಾರಿ ಜಯಲತಾ, ಮಹಿಳಾ ಮಕ್ಕಳ ಇಲಾಖೆಯ ಮೇಲ್ವಿಚಾರಕರಾದ ಮಧುಮಾಲತಿ, ಗ್ರಾಮ ಪಂಚಾಯಿತಿ ಸದಸ್ಯರು, ಸಿಬ್ಬಂದಿ, ಸಾರ್ವಜನಿಕರು ಭಾಗವಹಿಸಿದ್ದರು.
WhatsApp Group Join Now
Telegram Group Join Now
Share This Article
error: Content is protected !!