Ad image

ಅಡುಗೆ ತಯಾರಿಸುವ ಮತ್ತು ಸ್ವಚ್ಚತೆ ಕಾಪಾಡುವ ಕುರಿತು ಕಾರ್ಯಾಗಾರದ ಸಮಾರೋಪ ಸಮಾರಂಭಕೈ ತೊಳೆಯುವ ನಿಯಮಗಳನ್ನು ಪಾಲಿಸಿ; ಡಾ.ಗಣೇಶ್

Vijayanagara Vani
ಅಡುಗೆ ತಯಾರಿಸುವ ಮತ್ತು ಸ್ವಚ್ಚತೆ ಕಾಪಾಡುವ ಕುರಿತು ಕಾರ್ಯಾಗಾರದ ಸಮಾರೋಪ ಸಮಾರಂಭಕೈ ತೊಳೆಯುವ ನಿಯಮಗಳನ್ನು ಪಾಲಿಸಿ; ಡಾ.ಗಣೇಶ್

ರಾಯಚೂರು,ಜು.15- ಜಿಲ್ಲೆಯ ಹಾಸ್ಟೆಲ್‌ಗಳ ಅಡುಗೆ ತಯಾರಿಸುವ ಸಿಬ್ಬಂದಿಗಳು ಸರಿಯಾಗಿ ಕೈ ತೊಳೆಯುವ ನಿಯಮಗಳನ್ನು ಪಾಲಿಸುವ ಮೂಲಕ ಮಕ್ಕಳ ಆರೋಗ್ಯದ ಕಡೆ ಹೆಚ್ಚಿನ ಗಮನಹರಿಸಬೇಕೆಂದು ಜಿಲ್ಲಾ ಸರ್ವಕ್ಷಣಾಧಿಕಾರಿ ಡಾ.ಗಣೇಶ ಅವರು ಹೇಳಿದರು.      ಅವರು ಜು.14ರ ರವಿವಾರ ದಂದು ನಗರದ ಸಮಾಜ ಕಲ್ಯಾಣ ಇಲಾಖೆಯ ಡಾ.ಬಿ.ಆರ್.ಅಂಬೇಡ್ಕರ್  ಹಾಗೂ ಡಾ.ಬಾಬು ಜಗಜೀವನ್ ರಾಮ್ ಅವರು ಸಮುದಾಯ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸಮಾಜ ಕಲ್ಯಾಣ ಇಲಾಖೆ ಮತ್ತು ಅಧೀನದಲ್ಲಿರುವ ಕ್ರೆöÊಸ್ತ ವಸತಿ ಶಾಲೆಗಳ ಖಾಯಂ ಅಥವಾ ಹೊರಸಂಪನ್ಮೂಲ ಡಿ-ಗ್ರೂಪ್ ಸಿಬ್ಬಂದಿಗಳಿಗೆ ಅಡುಗೆ ತಯಾರಿಸುವ ಮತ್ತು ಸ್ವಚ್ಚತೆಯನ್ನು ಕಾಪಾಡುವ ಕುರಿತು ಎರಡು ದಿನಗಳ ತರಬೇತಿ ಕಾರ್ಯಾಗಾರದ ಸಮಾರೂಪ ಸಮಾರಂಭದ ಕಾರ್ಯಕ್ರಮದಲ್ಲಿ ಮಾತನಾಡಿ, ಕೈ ತೊಳೆಯುವ ನಿಯಮಗಳನ್ನು ಪ್ರಾಯೋಗಿಕವಾಗಿ ತೋರಿಸುವದರೊಂದಿಗೆ ಮಕ್ಕಳ ಆರೋಗ್ಯದ ಕಡೆ ಹೇಗೆ ಗಮನಹರಿಸಬೇಕು ಎಂದರು.   

ಡೆಂಗ್ಯೂ ಜ್ವರವನ್ನು ನಿಯಂತ್ರಿಸಲು ಯಾವುದೇ ಜ್ವರವಿದ್ದರೂ ಮೊದಲು ರಕ್ತ ಪರೀಕ್ಷೆ ಮಾಡಿಸಬೇಕು. ಹಾಸ್ಟೆಲ್‌ನ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ನಾಲೆಗಳಲ್ಲಿ ಕಸಕಡ್ಡಿಗಳನ್ನು ಎಸೆಯದೇ ನೀರಿನ ಸರಾಗವಾದ ಹರಿಯುವಿಕೆಗೆ ತಡೆಯಾಗದಂತೆ ನೋಡಿಕೊಳ್ಳಬೇಕು. ಹಾಸ್ಟೆಲ್‌ನಲ್ಲಿ ನೀರು ಸಂಗ್ರಹಣಾ ಪಾತ್ರೆಗಳು ಮತ್ತು ಡ್ರಮ್‌ಗಳನ್ನು ಸರಿಯಾದ ಮುಚ್ಚಳದಿಂದ ಮುಚ್ಚಿರಿ ಹಾಗೂ ದೊಡ್ಡ ತೊಟ್ಟಿಗಳನ್ನು ವಾರಕ್ಕೊಮ್ಮೆ ಸಂಪೂರ್ಣವಾಗಿ ಖಾಲಿ ಮಾಡಿ, ಸರಿಯಾಗಿ ಮುಚ್ಚಿರಿ ಅಥವಾ ಸೊಳ್ಳೆ ನಿಯಂತ್ರಣ ಜಾಲರಿಗಳನ್ನು ಅಳವಡಿಸಬೇಕೆಂದು ಹಾಸ್ಟೆಲ್ ಸಿಬ್ಬಂದಿಗಳಿಗೆ ತಿಳಿಸಿದರು.

ಈ ವೇಳೆ ಜಿಲ್ಲಾ ಆಹಾರ ಸುರಕ್ಷಿತಾ ಅಧಿಕಾರಿ ಗುರುರಾಜ ಅವರು ಮಾತನಾಡಿ, ನಾನು ವಿದ್ಯಾರ್ಥಿಯಾಗಿದಾಗ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯದಲ್ಲಿ ಓದಿ ಈ ಮಟ್ಟದಕ್ಕೆ ಬಂದಿದ್ದೇನೆ ಎಂದರು.

ಜಿಲ್ಲಾ ಕಾರ್ಮಿಕ ಇಲಾಖೆಯ ಅಧಿಕಾರಿ ಮಂಜುನಾಥ್ ಅವರು ಮಾತನಾಡಿ,  ಕಾರ್ಮಿಕರಿಗೆ ಇರುವ ವಿವಿಧ ಸೌಲಭ್ಯಗಳ ಕುರಿತು ವಿವರಿಸಿದರು.  ಈ ವೇಳೆ ಮಧ್ಯಾಹ್ನ ಉಪಹಾರ ಯೋಜನೆಯ ಅಧಿಕಾರಿ ಈರಣ್ಣ ಕೋಸಗಿ ಅವರು ಮಾತನಾಡಿ, ಅಡುಗೆ ಸಿಬ್ಬಂದಿಯವರು ಸಾಮಾನ್ಯವಾಗಿ ಮಾಡುವ ತಪ್ಪುಗಳು ಮತ್ತು ಅದಕ್ಕೆ ಪರಿಹಾರ ಉಪಾಯಗಳನ್ನು ನೀಡಿದರು. ಈ ವೇಳೆ ಮಧ್ಯಾಹ್ನ ಅವಧಿಯಲ್ಲಿ ಅಡುಗೆ ತಯಾರಿಸುವ ತಜ್ಞರಿಂದ ಎಲ್ಲ ಸಿಬ್ಬಂದಿಗಳಿಗೆ ಪ್ರಾಯೋಗಿಕ ತರಬೇತಿಯನ್ನು ನೀಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಮಹೇಶ್ ಪೋತದಾರ್ ಅವರು ವಹಿಸಿ ಮಾತನಾಡಿ, ಅಡುಗೆಯವರು, ಅಡುಗೆ ಸಹಾಯಕರು ಮತ್ತು ರಾತ್ರಿ ಕಾವಲುಗಾರರ  ಕರ್ತವ್ಯಗಳ ಬಗ್ಗೆ ಸಮಗ್ರವಾಗಿ ವಿವರಿಸಿ, ಶುಚಿ-ರುಚಿಯಾಗಿ ಅಡುಗೆ ತಯಾರಿಸುವ ವಿಧಾನಗಳನ್ನು ಮನಮುಟ್ಟುವಂತೆ ವಿವರಿಸಿದರು.   

ಇದೇ ಸಂದರ್ಭದಲ್ಲಿ ಪತ್ರಾಂಕಿತ ವ್ಯವಸ್ಥಾಪರಾದ ಬೇಬಿ ಹುಲ್ಸ್ವಾರ, ಸಮಾಜ ಕಲ್ಯಾಣ ಇಲಾಖೆಯ ತಾಲೂಕ ಮಟ್ಟದ ಅಧಿಕಾರಿಗಳು, ವಸತಿ ನಿಲಯ ಪಾಲಕರು ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಇದ್ದರು. ಕಾರ್ಯಕ್ರಮದ ನಿರೂರ್ಪಣೆಯನ್ನು ಶ್ರೀಶೈಲ್ ಅವರು ಮಾಡಿದರು.

Share This Article
error: Content is protected !!
";