Ad image

ಹೈನುಗಾರಿಕೆಗಾಗಿ ಸಾಲ ಪಡೆದ ರೈತ ಮಹಿಳೆಯರಿಗೆ ಶೇ.6ರ ಬಡ್ಡಿ ಸಹಾಯಧನ

Vijayanagara Vani
ಹೈನುಗಾರಿಕೆಗಾಗಿ ಸಾಲ ಪಡೆದ ರೈತ ಮಹಿಳೆಯರಿಗೆ ಶೇ.6ರ ಬಡ್ಡಿ ಸಹಾಯಧನ
ಶಿವಮೊಗ್ಗ, ಜುಲೈ 20,  ಪಶುಪಾಲನಾ ಮತ್ತು ಪಶುವೈದ್ಯಕಿಯ ಸೇವಾ ಇಲಾಖೆಯು 2024-25ನೇ ಸಾಲಿನಲ್ಲಿ ರೈತ ಮಹಿಳೆಯರಲ್ಲಿ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಹಸು/ಎಮ್ಮೆ ಖರೀದಿಗೆ ಪಡೆಯುವ ಸಾವನ್ನು ಸಕಾಲದಲ್ಲಿ ಮರುಪಾವತಿ ಮಾಡಿದರೆ ರಾಜ್ಯ ಸರ್ಕಾರದಿಂದ ಶೇ. 6ರ ಬಡ್ಡಿ ಸಹಾಯಧನ ನೀಡಲಾಗುವುದು.
ಈ ಸಾಲಿನಲ್ಲಿ ಹೈನುಗಾರಿಕೆಗಾಗಿ ವಿವಿಧ ಬ್ಯಾಂಕ್ಗಳಲ್ಲಿ ಸಾಲ ಪಡೆಯುವ ಪ್ರತಿ ಫಲಾನುವಿಗಳಿಗೆ ಗರಿಷ್ಟ ರೂ. 65,000/- ಸಾಲದ ಮೊತ್ತಕ್ಕೆ ಶೇ. 6ರ ಬಡ್ಡಿ ಸಹಾಯಧನ ನೀಡಲಾಗುತ್ತಿದ್ದು, ರೈತ ಮಹಿಳೆಯರು ಈ ಯೋಜನೆಯ ಸದುಪಯೋಗಪಡೆದುಕೊಳ್ಳುವಂತೆ ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ|| ಬಾಬುರತ್ನ ಎ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಯನ್ನು ಆಯಾ ತಾಲೂಕು ಮುಖ್ಯ ಪಶುವೈದ್ಯಾಧಿಕಾರಿಗಳನ್ನು ಹಾಗೂ ಹತ್ತಿರದ ಪಶು ವೈದ್ಯಕೀಯ ಸಂಸ್ಥೆಗಳನ್ನು ಸಂಪರ್ಕಿಸುವುದು.
Share This Article
error: Content is protected !!
";