ಆಗಸ್ಟ್ 1ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪರಿಣಾಮ ಬಗ್ಗೆ ಅರಿವು ಮೂಡಿಸಿ: ಎಡಿಸಿ ಮೊಹಮ್ಮದ್ ಝುಬೇರ್ ಸೂಚನೆ

Vijayanagara Vani
ಆಗಸ್ಟ್ 1ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪರಿಣಾಮ ಬಗ್ಗೆ ಅರಿವು ಮೂಡಿಸಿ: ಎಡಿಸಿ ಮೊಹಮ್ಮದ್ ಝುಬೇರ್ ಸೂಚನೆ
ಬಳ್ಳಾರಿ,ಜು.29
ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದ್ದು, ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿಯೂ ವ್ಯಸನ ಮುಕ್ತ ದಿನಾಚರಣೆ ಹಾಗೂ ಜಾಗೃತಿ ಜಾಥಾ ಕಾರ್ಯಕ್ರಮ ಆಯೋಜಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರ್ ಅವರು ಹೇಳಿದರು.
ಸೋಮವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ವ್ಯಸನ ಮುಕ್ತ ದಿನಾಚರಣೆ ಹಾಗೂ ವ್ಯಸನ ಮುಕ್ತ ಶಿಬಿರ ಕಾರ್ಯಕ್ರಮ ಆಯೋಜಿಸುವ ಸಂಬAಧ ಏರ್ಪಡಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆಯನ್ನು ವ್ಯಸನಮುಕ್ತ ದಿನಾಚರಣೆಯನ್ನಾಗಿ ಆಚರಿಸಲು ಸರ್ಕಾರ ಆದೇಶ ಹೊರಡಿಸಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಮಟ್ಟದಲ್ಲಿ ವ್ಯಸನಮುಕ್ತ ದಿನಾಚರಣೆ ಕಾರ್ಯಕ್ರಮವನ್ನು ಆಗಸ್ಟ್ 01ರಂದು ಬೆಳಿಗ್ಗೆ 10.30 ಕ್ಕೆ ನಗರದ ಸಾಂಸ್ಕೃತಿಕ ಸಮುಚ್ಛಯ ಆವರಣದ ಹೊಂಗಿರಣದಲ್ಲಿ ಅರ್ಥಪೂರ್ಣವಾಗಿ ಆಯೋಜಿಸಲು ಅಗತ್ಯ ಪೂರ್ವಸಿದ್ಧತೆ ಕೈಗೊಳ್ಳಬೇಕು. ಶಿಷ್ಟಾಚಾರದನ್ವಯ ಆಹ್ವಾನ ಮುದ್ರಿಸಿ, ಗಣ್ಯರನ್ನು ಆಹ್ವಾನಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದ ಅಂಗವಾಗಿ ಶಿಕ್ಷಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅಂದು ಬೆಳಿಗ್ಗೆ 9 ಗಂಟೆಗೆ ನಗರದ ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರ್‌ವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮೈದಾನದಿಂದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ ಏರ್ಪಡಿಸಬೇಕು. ಜಾಗೃತಿ ಜಾಥಾವು ಕಾಲೇಜು ಮೈದಾನದಿಂದ ಆರಂಭವಾಗಿ ಸಂಗಮ್ ವೃತ್ತ, ನೂತನ ಜಿಲ್ಲಾಡಳಿತ ಭವನದ ಮುಂಭಾಗದಿAದ ಸಾಂಸ್ಕೃತಿಕ ಸಮುಚ್ಛಯ ಆವರಣದ ಹೊಂಗಿರಣದವರೆಗೆ ನಡೆಸಬೇಕು ಎಂದರು.
ಜಾಥಾ ಕಾರ್ಯಕ್ರಮದಲ್ಲಿ ಭಿತ್ತಿಪತ್ರ, ಜಾಗೃತಿ ಘೋಷವಾಕ್ಯಗಳ ಫಲಕಗಳನ್ನು ಪ್ರದರ್ಶಿಸಿ, ಜನರಲ್ಲಿ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಸೂಚನೆ ನೀಡಿದರು.
ಕಾರ್ಯಕ್ರಮದಲ್ಲಿ ಡಾ.ಮಹಾಂತ ಶಿವಯೋಗಿಗಳ ಭಾವಚಿತ್ರವನ್ನು ಅನಾವರಣಗೊಳಿಸಿ ಗೌರವ ಸಲ್ಲಿಸಬೇಕು. ಮದ್ಯ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮ ಕುರಿತು ಎಲ್ಲ ಸರ್ಕಾರಿ ಕಚೇರಿ ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಬೇಕು ಹಾಗೂ ಸಂಪನ್ಮೂಲ ವ್ಯಕ್ತಿಯಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮ ಆಯೋಜಿಸಬೇಕು ಎಂದು ಹೇಳಿದರು.
ಪ್ರತಿ ವರ್ಷ ಆಗಸ್ಟ್ 01 ರಂದು ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆಯನ್ನು ವ್ಯಸನಮುಕ್ತ ದಿನಾಚರಣೆಯನ್ನಾಗಿ ಆಚರಿಸಲು ಸರ್ಕಾರ ಆದೇಶ ಹೊರಡಿಸಿದೆ. ಅದರನ್ವಯ ಜಿಲ್ಲಾ ಮಟ್ಟದಲ್ಲಿ ವ್ಯಸನಮುಕ್ತ ದಿನಾಚರಣೆಯನ್ನು ಆಗಸ್ಟ್ 01 ರಂದು ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಆಚರಿಸಲಾಗುತ್ತಿದೆ. ವಿವಿಧ ಇಲಾಖೆ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಕೋರಿದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ನಾಗರಾಜ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರದಸ ವಿ.ಸಿ.ಗುರುರಾಜ ಸೇರಿದಂತೆ ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
WhatsApp Group Join Now
Telegram Group Join Now
Share This Article
error: Content is protected !!