Ad image

ಕರ್ನಾಟಕ ಸಾಹಿತ್ಯ ಅಕಾಡೆಮಿ; ಕೃತಿಗಳ ಬಹುಮಾನಕ್ಕಾಗಿ ಅರ್ಜಿ ಆಹ್ವಾನ

Vijayanagara Vani
ಕರ್ನಾಟಕ ಸಾಹಿತ್ಯ ಅಕಾಡೆಮಿ; ಕೃತಿಗಳ ಬಹುಮಾನಕ್ಕಾಗಿ ಅರ್ಜಿ ಆಹ್ವಾನ
ರಾಯಚೂರು,ಜು.31 ಕರ್ನಾಟಕ ಸಾಹಿತ್ಯ ಅಕಾಡೆಮಿಯು 2023ನೇ ವರ್ಷದ ಪುಸ್ತಕ ಬಹುಮಾನಕ್ಕಾಗಿ 2023ನೇ ವರ್ಷದಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡಿರುವ ಸಾಹಿತ್ಯದ ವಿವಿಧ ಪ್ರಕಾರಗಳ ಕೃತಿಗಳನ್ನು ಬಹುಮಾನಕ್ಕಾಗಿ ಆಹ್ವಾನಿಸಲಾಗಿದೆ.
2023ನೇ ಅವಧಿಯಲ್ಲಿ ಪ್ರಕಟವಾದ ಕಾವ್ಯ, ನವಕವಿಗಳ ಪ್ರಥಮ ಕವನಸಂಕಲನ, ಕಾವ್ಯ ಹಸ್ತಪ್ರತಿ, ಕಾದಂಬರಿ, ಸಣ್ಣಕತೆ, ನಾಟಕ, ಲಲಿತಪ್ರಬಂಧ, ಪ್ರವಾಸ ಸಾಹಿತ್ಯ, ಜೀವನ ಚರಿತ್ರೆ/ ಆತ್ಮಕಥೆ, ಸಾಹಿತ್ಯ ವಿಮರ್ಶೆ, ಗ್ರಂಥ ಸಂಪಾದನೆ, ಮಕ್ಕಳ ಸಾಹಿತ್ಯ, ವಿಜ್ಞಾನ ಸಾಹಿತ್ಯ, ಮಾನವಿಕ, ಸಂಶೋಧನೆ, ವೈಚಾರಿಕ / ಅಂಕಣಬರಹ, ಅನುವಾದ-1 ಮತ್ತು 2, ಲೇಖಕರ ಮೊದಲ ಸ್ವತಂತ್ರ ಕೃತಿ, ಕನ್ನಡದಿಂದ ಇಂಗ್ಲೀಷಿಗೆ ಅನುವಾದ, ದಾಸ ಸಾಹಿತ್ಯ, ಸಂಕೀರ್ಣ ಕೃತಿಗಳ ತಲಾ 4 ಪ್ರತಿಗಳನ್ನು ರಿಜಿಸ್ಟಾರ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು-02 ಇವರಿಗೆ ರಿಜಿಸ್ಟರ್ ಅಂಚೆ/ ಕೊರಿಯರ್ ಮೂಲಕ ಅಥವಾ ಖುದ್ದಾಗಿ ಆಗಸ್ಟ್ 31 ರೊಳಗಾಗಿ ಸಲ್ಲಿಸುವುದು. ಕಳುಹಿಸುವ ಕೃತಿಯ ಮೇಲೆ ತಿಳಿಸಿದ ಪ್ರಕಾರಗಳಲ್ಲಿ ಯಾವ ಸಾಹಿತ್ಯದ ಪ್ರಕಾರಕ್ಕೆ ಸೇರುತ್ತದೆ ಎನ್ನುವುದನ್ನು ಸ್ಪಷ್ಟವಾಗಿ ಪುಸ್ತಕದ ಶೀರ್ಷಿಕೆ ಪುಟದಲ್ಲಿ ಬರೆದಿರಬೇಕು

Share This Article
error: Content is protected !!
";