ಚಿತ್ರದುರ್ಗಜುಲೈ31:
ಚಿತ್ರದುರ್ಗ ತಾಲ್ಲೂಕಿನ ಬಚ್ಚಬೋರನಹಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಗೋನೂನು ಕ್ಲಸ್ಟರ್ ಹಂತದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಿಕ್ಷಣ ಸಂಯೋಜಕ ರಮೇಶ್ ರೆಡ್ಡಿ, ಪಠ್ಯದ ಜೊತೆಗೆ ಮಕ್ಕಳಲ್ಲಿ ಹುದುಗಿರುವ ಪ್ರತಿಭೆಗಳನ್ನು ಹೊರತರಲು ಇದೊಂದು ಸೂಕ್ತ ವೇದಿಕೆ ಎಂದು ತಿಳಿಸಿದರು.
ಬಿ.ಆರ್.ಪಿ ವಿದ್ಯಾ ಮಾತನಾಡಿ, ಮಗು ಶಾಲೆಯಲ್ಲಿ ಕಲಿತ ಪಠ್ಯ ವಿಷಯಗಳನ್ನು ಅಭಿವ್ಯಕ್ತಿಗೊಳಿಸಿಕೊಂಡು ಸಮಾಜಮುಖಿಯಾಗಿ ಬೆಳೆಯಲು ಸಹಕಾರಿ ಎಂದು ತಿಳಿಸಿದರು.
ಎಸ್.ಡಿ.ಎಂ.ಸಿ ಅಧ್ಯಕ್ಷೆ ನಿರ್ಮಲಾ ಮಾತನಾಡಿ, ಶಾಲೆಗಳಲ್ಲಿ ಮಕ್ಕಳ ಪ್ರತಿಭೆಗಳನ್ನು ಹೊರತರುವ ಪ್ರತಿಭಾ ಕಾರಂಜಿಯ0ತಹ ಕಾರ್ಯಕ್ರಮಗಳು ಹೆಚ್ಚು ಹೆಚ್ಚು ನಡೆಯಬೇಕು ಎಂಬ ತಿಳಿಸಿದರು.
ಕಾರ್ಯಕ್ರಮದಲ್ಲಿ ಸಿ.ಆರ್.ಪಿ ರಮೇಶ್, ಬಚ್ಚಬೋರನಹಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಜಿ.ರಂಗಸ್ವಾಮಿ, ಎಸ್ಡಿಎಂಸಿ ಉಪಾಧ್ಯಕ್ಷೆ ಗಾಯತ್ರಿ, ಸದಸ್ಯರಾದ ಮಂಜುಳಾ, ತಾಯಮ್ಮ, ಗ್ರಾಮದ ಮುಖಂಡರು ಮತ್ತು ಕ್ಲಸ್ಟರ್ ವ್ಯಾಪ್ತಿಯ ಶಾಲಾ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಹಾಗೂ ಶಾಲಾ ಮಕ್ಕಳು ಭಾಗವಹಿಸಿದ್ದರು.