Ad image

ಸ್ವಾತಂತ್ರ್ಯೋಸವದ ಆಚರಣೆ : ಸಕಲ ಸಿದ್ದತೆಗೆ ಡಿಸಿ ಸೂಚನೆ

Vijayanagara Vani
ಸ್ವಾತಂತ್ರ್ಯೋಸವದ ಆಚರಣೆ : ಸಕಲ ಸಿದ್ದತೆಗೆ ಡಿಸಿ ಸೂಚನೆ

ಗಸ್ಟ್ 15 ರಂದು ನಗರದ ಡಿಎಆರ್ ಕವಾಯತು ಮೈದಾನದಲ್ಲಿ ಏರ್ಪಡಿಸಲಾಗಿರುವ ಸ್ವಾತಂತ್ರ್ಯೋಸವದ ದಿನಾಚರಣೆ ಸಮಾರಂಭಕ್ಕೆ ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಂಡು, ಯಶಸ್ವಿಯಾಗಿ ಸ್ವಾತಂತ್ರೋತ್ಸವ ಜರುಗುವಂತೆ ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅಧಿಕಾರಿಗಳಿಗೆ ಸೂಚಿಸಿದರು.

- Advertisement -
Ad imageAd image

ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಇಂದು ಆಯೋಜಿಸಲಾಗಿದ್ದ ಸ್ವಾತಂತ್ರ್ಯೋಸವದ ದಿನಾಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಯನ್ನು ಮುದ್ರಿಸಿ, ವಿತರಿಸಲು ಕ್ರಮವಹಿಸುವಂತೆ ಅಪರ ಜಿಲ್ಲಾಧಿಕಾರಿಗಳು, ಪಾಲಿಕೆ ಆಯುಕ್ತರು, ಜಿ.ಪಂ ಉಪಕಾರ್ಯದರ್ಶಿಗಳು ಹಾಗೂ ತಹಶೀಲ್ದಾರರಿಗೆ ತಿಳಿಸಿದರು.

ಪೆರೇಡ್ ಆವರಣ ಹಾಗೂ ಸುತ್ತಮುತ್ತಲಿನ ಜಾಗವನ್ನು ಮುಂಚಿತವಾಗಿ ಸ್ವಚ್ಚಗೊಳಿಸಿ ಸಿದ್ದಗೊಳಿಸುವುದು, ನೀರಿನ ವ್ಯವಸ್ಥೆ, ಆಸನ ವ್ಯವಸ್ಥೆ, ವೇದಿಕೆ ಸಿದ್ದತೆ, ವೇದಿಕೆ ಅಲಂಕಾರ ಮಾಡುವಂತೆ ಪಾಲಿಕೆ, ಸಶಸ್ತç ಮೀಸಲು ಪಡೆ, ಲೋಕೋಪಯೋಗಿ ಇಲಾಖೆ, ತೋಟಗಾರಿಕೆ ಇಲಾಖೆ ಮತ್ತು ಕ್ರೀಡಾ ಯುವಜನ ಸಬಲೀಕರಣ ಇಲಾಖೆಗಳ ಅಧಿಕಾರಿಗಳಿಗೆ ತಿಳಿಸಿದರು.

ಸರ್ಕಾರದ ಸುತ್ತೋಲೆಯಂತೆ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಮತ್ತು ಕಚೇರಿಗಳಲ್ಲಿ ಪ್ರತಿ ವರ್ಷದಂತೆ ಧ್ವಜಾರೋಹಣಕ್ಕೆ ಸಿದ್ದತೆ ಮಾಡಿಕೊಳ್ಳಬೇಕು.ಹಾಗೂ ಧ್ವಜಸ್ತಂಭದ ಕೆಳಗೆ ಡಾ.ಬಿ.ಆರ್.ಅಂಬೇಡ್ಕರ್‌ರವರ ಭಾವಚಿತ್ರವನ್ನು ಇರಿಸಿ ನಮನ ಸಲ್ಲಿಸಬೇಕೆಂದರು.

ವಿದ್ಯುದೀಪ ಅಲಂಕಾರ ವ್ಯವಸ್ಥೆ, ಪೊಲೀಸ್ ಭದ್ರತೆ, ಕುಡಿಯುವ ನೀರಿನ ವ್ಯವಸ್ಥೆ, ಆಂಬುಲೆನ್ಸ್, ಅಗ್ನಿಶಾಮಕ ವಾಹನದ ವ್ಯವಸ್ಥೆ, ಮಕ್ಕಳಿಗೆ ಸಿಹಿ ಹಂಚಿಕೆ ಹಾಗೂ ಆಸ್ಪತ್ರೆ ಮತ್ತು ಇತರೆ ಸಂಸ್ಥೆಗಳಲ್ಲಿ ಹಣ್ಣು, ಸಿಹಿ ಹಂಚಿಕೆ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಜವಾಬ್ದಾರಿ ವಹಿಸಿದರು.

ನಗರದ ಶಾಲಾ, ಕಾಲೇಜು, ಪೊಲೀಸ್ ಇಲಾಖೆ, ಸ್ಕೌಟ್ಸ್ ಮತ್ತು ಗೈಡ್ಸ್, ಭಾರತ ಸೇವಾದಳ, ಎನ್‌ಸಿಸಿ, ಅಗ್ನಿ ಶಾಮಕ ದಳ, ಹೋಂಗಾರ್ಡ್ಸ್ ವತಿಯಿಂದ ಸಾಮೂಹಿಕ ಕವಾಯಿತು ಏರ್ಪಡಿಸಲಾಗುವುದು. ಮಳೆಯಿಂದ ರಕ್ಷಣೆ ಪಡೆಯಲು ಕವಾಯಿತು ಮೈದಾನದಲ್ಲಿ ಜರ್ಮನ್ ಟೆಂಟ್ ಹಾಕಿಸಲು ಪಿಡಬ್ಲುöಯಡಿ ಇಲಾಖೆಗೆ ಸೂಚಿಸಿದರು.

ಧ್ವಜಾರೋಹಣದ ನಂತರ 03 ತಂಡಗಳಿ0ದ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಬೇಕು. ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ಆಯೋಜಿಸಿ, ನಿಗದಿತ ವೇಳೆಯಲ್ಲಿ ಮುಗಿಯುವಂತೆ ಕ್ರಮ ಕೈಗೊಳ್ಳಲು ಡಿಡಿಪಿಐ ಅವರಿಗೆ ಸೂಚನೆ ನೀಡಿದರು. ಅಂದು ಸಂಜೆ ನಗರದ ಕುವೆಂಪು ರಂಗಮ0ದಿರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಳನ್ನು ಆಯೋಜಿಸುವಂತೆ ಡಿಡಿಪಿಐ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗೆ ಸೂಚಿಸಿದರು.

ಸನ್ಮಾನ : ಸ್ವಾತಂತ್ರೋತ್ಸವದ ಅಂಗವಾಗಿ ಸ್ವತಂತ್ರ್ಯಯ ಹೋರಾಟಗಾರರು, ಆರೋಗ್ಯ ಮತ್ತು ವಿವಿಧ ಕ್ಷೇತ್ರದಲ್ಲಿ ಸಾಧನೆ ತೋರಿದ ಸಾಧಕರನ್ನು ಸನ್ಮಾನಿಸುವ ಜೊತೆಗೆ ಈ ಬಾರಿ ಉತ್ತಮವಾಗಿ ಸೇವೆ ಸಲ್ಲಿಸಿದ 5 ರಿಂದ 8 ಸರ್ಕಾರಿ ಅಧಿಕಾರಿ/ನೌಕರರನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿದರು.

Share This Article
error: Content is protected !!
";