ಬೆಂಗಳೂರು ಗ್ರಾಮಾಂತರ ಜಿಲ್ಲೆ ಆಗಸ್ಟ್ 02 ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದಡಿಯಲ್ಲಿ ಆಗಸ್ಟ್ 01 ರಿಂದ 07 ರವರೆಗೆ ‘ವಿಶ್ವ ಸ್ತನ್ಯಪಾನ ಸಪ್ತಾಹ 2024’ ರ ಕಾರ್ಯಕ್ರಮವು ಹಮ್ಮಿಕೊಳ್ಳಲಾಗಿದೆ.
ಕೊರತೆಗಳನ್ನು ಕೊನೆಗೊಳಿಸಿ ಸರ್ವರಿಗೂ ಸ್ತನ್ಯಪಾನದ ಬೆಂಬಲ ನೀಡಿ ಎಂಬದು ಈ ವರ್ಷದ ಘೋಷ ವಾಕ್ಯ ವಾಗಿದ್ದು ಇದರ ಅಂಗವಾಗಿ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು ವಿಶ್ವ ಸ್ತನ್ಯಪಾನ ಸಪ್ತಾಹ-2024 ರ ಪೋಸ್ಟರ್ ಬಿಡುಗಡೆಗೊಳಿಸಿದರು.
ನಂತರ ಮಾತನಾಡಿ ಮಗು ಜನಿಸಿದ ಒಂದು ಗಂಟೆಯ ಒಳಗೆ ತಾಯಿಯ ಎದೆ ಹಾಲು ಮಗುವಿಗೆ ಕುಡಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದ್ದು, ಎದೆ ಹಾಲುಣಿಸುವುದರಿಂದ ಮಗುವಿನ ಆರೋಗ್ಯ ಹಾಗೂ ತಾಯಿಯ ಆರೋಗ್ಯ ಕಾಪಾಡಿಕೊಳ್ಳಬಹುದು. ಈ ಬಗ್ಗೆ ಸಾರ್ವಜನಿಕರಿಗೆ ಹೆಚ್ಚಿನ ಜಾಗೃತಿ ಮೂಡಿಸಲು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಸುನಿಲ್ ಕುಮಾರ್, ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ.ಸೀಮಾ ರುದ್ರಪ್ಪ ಮಹಾಬಳೆ ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.