ಕಾಡುಗೊಲ್ಲ ಅಭಿವೃದ್ಧಿ ನಿಗಮ; ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ

Vijayanagara Vani
ಕಾಡುಗೊಲ್ಲ ಅಭಿವೃದ್ಧಿ ನಿಗಮ; ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ
ರಾಯಚೂರು,ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ 2024-25ನೇ ಸಾಲಿಗೆ ಅನುಷ್ಠಾನಗೊಂಡಿರುವ ವಿವಿಧ ಯೋಜನೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಸೇವಾಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿಗಳ ಆಹ್ವಾನಿಸಲಾಗಿದೆ.
ನಿಗಮದ ಯೋಜನೆಗಳು; ಸ್ವಯಂ ಉದ್ಯೋಗ ನೇರಸಾಲ ಯೋಜನೆ. ಅರಿವು-ಶೈಕ್ಷಣಿಕ ನೇರಸಾಲ ಯೋಜನೆ (ಹೊಸದು). ಗಂಗಾ ಕಲ್ಯಾಣ ಯೋಜನೆ. ಸ್ವಯಂ ಉದ್ಯೋಗ ನೇರಸಾಲ (ಬ್ಯಾಂಕ್‌ಗಳ ಸಹಯೋಗದೊಂದಿಗೆ). ಸ್ವಾವಲಂಬಿ ಸಾರಥಿ ಯೋಜನೆ. ವಿದೇಶಿ ವ್ಯಾಸಂಗ ಯೋಜನೆಯಡಿ ಆಸಕ್ತರು ಸೇವಾಸಿಂಧು ಪೋರ್ಟಲ್ http://sevasindhu.karnataka.gov.in ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಇದೇ 2024ರ ಆಗಸ್ಟ್ 31ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಅರ್ಹತೆಗಳು; ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ನಿಗಮದ ಯೋಜನೆಗಳಲ್ಲಿ ಸೌಲಭ್ಯಗಳನ್ನು ಪಡೆಯಲು ಇಚ್ಛಿಸುವವರು ಸರ್ಕಾರದ ಆದೇಶ ಸಂಖ್ಯೆ:ಹಿವಕ /155/ಬಿಸಿಎ/2020, ದಿನಾಂಕ:28/09/2020ರನ್ವಯ ಕಾಡುಗೊಲ್ಲ ಜಾತಿಗೆ ಸೇರಿರಬೇಕು. ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಕಡ್ಡಾಯವಾಗಿರುತ್ತದೆ. ವಯೋಮಿತಿ 18 ವರ್ಷಗಳಿಂದ 55 ವರ್ಷಗಳ ಮಿತಿಯಲ್ಲಿರಬೇಕು.
ನಿಗಮದ ಅಥವಾ ಸರ್ಕಾರದ ಯಾವುದಾದರೂ ಯೋಜನೆಗಳಡಿ ಈ ಹಿಂದೆ ಸೌಲಭ್ಯ ಪಡೆದಿರಬಾರದು. ಕುಟುಂಬದ ಒಬ್ಬರಿಗೆ ಮಾತ್ರ ಸೌಲಭ್ಯ ಒದಗಿಸಲಾಗುವುದು. ಅರಿವು ಯೋಜನೆಯಡಿ ವಯೋಮಿತಿ 18 ವರ್ಷಗಳಿಂದ 30 ವರ್ಷಗಳ ಮಿತಿಯಲ್ಲಿರಬೇಕು ವಾರ್ಷಿಕ ವರಮಾನ 3.50/-ಲಕ್ಷ ರೂ.ಗಳು. ಸ್ವಾವಲಂಬಿ ಸಾರಥಿ ಯೋಜನೆಯಡಿ ಅರ್ಜಿದಾರರು 21 ವರ್ಷ ಮೇಲ್ಪಟ್ಟು 45 ವರ್ಷದ ಮಿತಿಯಲ್ಲಿರಬೇಕು.
ಅರ್ಜಿದಾರರು ತಮ್ಮ ಮೊಬೈಲ್ ಸಂಖ್ಯೆಯನ್ನು ಹಾಗೂ ಬ್ಯಾಂಕ್ ಖಾತೆಯನ್ನು ತಮ್ಮ ಆಧಾರ್ ಸಂಖ್ಯೆಗೆ ಜೋಡಣೆ ಮಾಡಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ 98,000/- ರೂ. ಮತ್ತು ನಗರ ಪ್ರದೇಶದವರಿಗೆ 1,20,000/-ರೂ.ಗಳ ಮಿತಿಯೊಳಗಿರಬೇಕು. ಆಯ್ಕೆ ಮಾಡುವಾಗ ಮಹಿಳೆಯರಿಗೆ 33%, ವಿಕಲಚೇತನರಿಗೆ 5% ಹಾಗೂ ತೃತೀಯ ಲಿಂಗಿಗಳಿಗೆ ಶೇ1% ಮೀಸಲಾತಿ ಇರಿಸಿದೆ.
ಈ ಎಲ್ಲಾ ಯೋಜನೆಗಳಡಿಯಲ್ಲಿ ಸೌಲಭ್ಯ ಒದಗಿಸಲು ಸೇವಾ ಸಿಂಧು ತಂತ್ರಾoಶದಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್ನಲ್ಲಿರುವಂತೆ ಅರ್ಜಿದಾರರ ಹೆಸರು, (ಶ್ರೀ/ಶ್ರೀಮತಿ ಕುಮಾರಿ ಮುಂತಾದ ಮಾಹಿತಿಗಳೆಲ್ಲವು) ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಇದ್ದು ಹೊಂದಾಣಿಕೆಯಾಗಬೇಕು.
ಹೆಚ್ಚಿನ ಮಾಹಿತಿ ನಿಗಮದ ಸಹಾಯವಾಣಿ ಸಂಖ್ಯೆ: 080-22374848 ಮತ್ತು 7899899039ಗೆ ಸಂಪರ್ಕಿಸುವoತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
WhatsApp Group Join Now
Telegram Group Join Now
Share This Article
error: Content is protected !!