ಪ್ಲಾಸ್ಟಿಕ್ ಧ್ವಜ ನಿಷೇಧ

Vijayanagara Vani
ಪ್ಲಾಸ್ಟಿಕ್ ಧ್ವಜ ನಿಷೇಧ
ಶಿವಮೊಗ್ಗ, ಆಗಸ್ಟ್ 09: ಭಾರತ ಸರ್ಕಾರದ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಮತ್ತು ಗೃಹ ಮಂತ್ರಾಲಯವು ಎಲ್ಲಾ ರಾಜ್ಯ ಸರ್ಕಾರಗಳಿಗೆ ಪ್ಲಾಸ್ಟಿಕ್‌ನಿಂದ ತಯಾರಿಸಿದ ರಾಷ್ಟ್ರೀಯ ಧ್ವಜಗಳನ್ನು ಬಳಸದಂತೆ ನಿರ್ದೇಶನ ನೀಡಿದೆ.
ರಾಷ್ಟ್ರೀಯ ಗೌರವ ಕಾಯ್ದೆ, 1971 ಮತ್ತು ಭಾರತ ಧ್ವಜ ಸಂಹಿತೆ 2002 ರಡಿ ಎಲ್ಲಾ ಸರ್ಕಾರಿ ಸಂಸ್ಥೆಗಳು, ಖಾಸಗಿ ಸಂಸ್ಥೆಗಳು ಮತ್ತು ಸಾರ್ವಜನಿಕ ಪ್ರಮುಖ ರಾಷ್ಟ್ರೀಯ ಸಾಂಸ್ಕೃತಿಕ ಮತ್ತು ಕ್ರೀಡಾಕೂಟಗಳಲ್ಲಿ ಹಾಗೂ ಸ್ವಾತಂತ್ರ್ಯ ದಿನಾಚರಣೆಯ ದಿನ ನಿಷೇಧಿತ ಪ್ಲಾಸ್ಟಿಕ್ ಧ್ವಜವನ್ನು ಬಳಸದಂತೆ ಹಾಗೂ ಈ ನಿರ್ದೇಶನವನ್ನು ಉಲ್ಲಂಘಿಸಿದವರ ವಿರುದ್ಧ ಅಪರಾಧ ಸ್ವರೂಪಕ್ಕೆ ಅನುಗುಣವಾಗಿ ಕರ್ನಾಟಕ ಸರ್ಕಾರದ ಅಧಿಸೂಚನೆ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ರಮೇಶ್ ವಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
WhatsApp Group Join Now
Telegram Group Join Now
Share This Article
error: Content is protected !!