ಮೆಟ್ರಿಕ್ ನಂತರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ”

Vijayanagara Vani
ಮೆಟ್ರಿಕ್ ನಂತರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ”
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ (ಸಾಮಾನ್ಯ ಪದವಿ ಮಟ್ಟದ ಕೋರ್ಸುಗಳ ವಿದ್ಯಾರ್ಥಿಗಳಿಗೆ ಮಾತ್ರ ) ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಬಾಲಕ ಮತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ (ಸಾಮಾನ್ಯ ಪದವಿ ಮಟ್ಟದ ಕೋರ್ಸುಗಳ ವಿದ್ಯಾರ್ಥಿಗಳಿಗೆ ಮಾತ್ರ ) ಉಚಿತ ಪ್ರವೇಶಾಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಬೌದ್ದ, ಸಿಖ್, ಪಾರ್ಸಿ, ಇತರೆ ವರ್ಗದ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ಪಂಗಡ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2024-25ನೇ ಸಾಲಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳು https://shp.Karnataka.gov.in ಅನ್ನು ಸಂಪರ್ಕಿಸಿ ಆನ್‌ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸಲು ಸೆಪ್ಟೆಂಬರ್ 12 ಕೊನೆಯ ದಿನವಾಗಿರುತ್ತದೆ.
ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರಕ್ಕಾಗಿ ಇಲಾಖೆಯ ವೆಬ್ ಸೈಟ್ https://dom.Karnataka.gov.in/bengaluru rural/public ಅನ್ನು ವೀಕ್ಷಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಸಹಾಯವಾಣಿ ಸಂಖ್ಯೆ 8277799990 ಹಾಗೂ ಈ ಕೆಳಕಂಡ ತಾಲ್ಲೂಕು ನಿಲಯಪಾಲಕರನ್ನು ಸಂಪರ್ಕಿಸುವುದು.
ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯ ಕಂಟನಕುಂಟೆ, ದೊಡ್ಡಬಳ್ಳಾಪುರ ತಾಲ್ಲೂಕು- ರಾಧಾಮಣಿ 9886400832,
ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯ ಜಯನಗರ,‌ ನೆಲಮಂಗಲ ತಾಲ್ಲೂಕು- ಕೃಷ್ಣ.ಎಂ.ಆರ್ 8317403213, ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯ ದಂಡುಪಾಳ್ಯ ಹೊಸಕೋಟೆ ತಾಲ್ಲೂಕು- ಅಕ್ರಂ ಪಾಷ 8310397004,
ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯ ದೇವನಹಳ್ಳಿ ಟೌನ್, ದೇವನಹಳ್ಳಿ ತಾಲ್ಲೂಕು- ತಿಪ್ಪೇಸ್ವಾಮಿ ಎನ್. 9731017483 ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
WhatsApp Group Join Now
Telegram Group Join Now
Share This Article
error: Content is protected !!