ಬಳ್ಳಾರಿ,ಆ.16
ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ ವತಿಯಿಂದ 2024-25ನೇ ಸಾಲಿಗೆ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯ ನೀಡಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಸೌಲಭ್ಯ ಪಡೆಯಲು ಇಚ್ಛಿಸುವವರು ಆನ್ಲೈನ್ ಮೂಲಕ ಆ.31 ರೊಳಗಾಗಿ ಅರ್ಜಿ ಸಲ್ಲಿಸಬೇಕು (ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆ ದಿನಾಂಕ ಇರುವುದಿಲ್ಲ).
ಅರ್ಹತೆ:
ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ ವಿವಿಧ ಎಲ್ಲಾ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಪ್ರವರ್ಗ-3-ಬಿ ಅಡಿಯಲ್ಲಿ 2(ಎ) ಯಿಂದ 2(ಎಫ್)ವರೆಗೆ ಬರುವ ಸಮುದಾಯಕ್ಕೆ ಸೇರಿರಬೇಕು.
ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ-3ಬಿ ಯಲ್ಲಿ ಪಡೆದಿರಬೇಕು (ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು). ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ತಮ್ಮ ಮೊಬೈಲ್ ಸಂಖ್ಯೆ ಜೋಡಣೆ ಮಾಡಿರಬೇಕು. ಸರ್ಕಾರಿ ಸೌಲಭ್ಯವನ್ನು (ಸಾಲ-ಸಹಾಯಧನ) ಪಡೆಯುವ ಸಂಬoಧ ಅರ್ಜಿದಾರರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆ ಸೀಡ್ ಮಾಡಿಸಿರಬೇಕು.
ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ.33, ವಿಕಲಚೇತನರಿಗೆ ಶೇ.5 ಹಾಗೂ ತೃತೀಯ ಲಿಂಗಿಗಳಿಗೆ ಶೇ.1 ರಷ್ಟು ಮೀಸಲಾತಿ ಇದೆ. ಒಂದು ಕುಟುಂಬದಲ್ಲಿ ಒಬ್ಬರು ಮಾತ್ರ ಸಾಲ ಸೌಲಭ್ಯ ಪಡೆಯಲು ಅರ್ಹರು (ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಮಾತ್ರ ಇಬ್ಬರಿಗೆ ಅವಕಾಶವಿರುತ್ತದೆ).
ಯೋಜನೆಗಳು:
ಶಹಜೀರಾಜೇ ಸಮೃದ್ಧಿ ಯೋಜನೆ (ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ) ಯೋಜನೆ:
ಈ ಯೋಜನೆಯಲ್ಲಿ ಕನಿಷ್ಠ ರೂ.1 ಲಕ್ಷಗಳಿಂದ ಗರಿಷ್ಠ ರೂ.2 ಲಕ್ಷಗಳ ಸಾಲ ಒದಗಿಸಲಾಗುವುದು. ಈ ಮೊತ್ತದಲ್ಲಿ ಶೇ.15ರಷ್ಟು ಕನಿಷ್ಠ ರೂ.20 ಸಾವಿರಗಳಿಂದ ಗರಿಷ್ಠ ರೂ.30 ಗಳವರೆಗೆ ಸಹಾಯಧನ ಹಾಗೂ ಶೇ.85ರಷ್ಟು ಸಾಲವನ್ನು ವಾರ್ಷಿಕ ಶೇ.4ರ ಬಡ್ಡಿ ದರದಲ್ಲಿ ಮಂಜೂರು ಮಾಡಲಾಗುವುದು, 2 ತಿಂಗಳ ವಿರಾಮ ಅವಧಿ ಇರುತ್ತದೆ ನಂತರ ಸಾಲವನ್ನು 34 ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು.
ಜೀಜಾವು ಜಲಭಾಗ್ಯ ಯೋಜನೆ (ಗಂಗಾ ಕಲ್ಯಾಣ ನೀರಾವರಿ ಯೋಜನೆ):
ಒಂದೇ ಸ್ಥಳದಲ್ಲಿ ಹೊಂದಿಕೊoಡoತೆ ಕನಿಷ್ಠ 2 ಎಕರೆ ಹಾಗೂ ಗರಿಷ್ಠ 5 ಎಕರೆ ಜಮೀನು ಹೊಂದಿರಬೇಕು.
ಯಾವುದೇ ಮೂಲದಿಂದ ನೀರಾವರಿ ಸೌಲಭ್ಯ ಹೊಂದಿಲ್ಲದೆ ಇರುವ ಸಣ್ಣ ಮತ್ತು ಅತಿ ಸಣ್ಣ ರೈತರಾಗಿರಬೇಕು. ಈ ಯೋಜನೆಯಡಿ ಘಟಕ ವೆಚ್ಚ ರೂ.3.75 ಲಕ್ಷ (ವಿದ್ಯುದ್ದೀಕರಣ ಸೇರಿ) ಹಾಗೂ ಅವಶ್ಯವಿದ್ದಲ್ಲಿ ರೂ.50 ಸಾಲ ಶೇ.4 ಬಡ್ಡಿದರದಲ್ಲಿ ಮಂಜೂರು ಮಾಡಲಾಗುವುದು.
ಅರಿವು ಶೈಕ್ಷಣಿಕ ಸಾಲ ಯೋಜನೆ(ಹೊಸದು):
ಸಿಇಟಿ ಮತ್ತು ಎನ್ಇಇಟಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವೃತ್ತಿಪರ ಕೋರ್ಸ್ ಹಾಗೂ ಪಿ.ಹೆಚ್.ಡಿನಲ್ಲಿ ವ್ಯಾಸಂಗ ಮಾಡುವ ಮರಾಠ ಸಮುದಾಯಗಳ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ.1 ಲಕ್ಷ ಸಾಲವನ್ನು ಶೇ.2ರ ಬಡ್ಡಿದರದಲ್ಲಿ ಶೈಕ್ಷಣಿಕ ಸಾಲ ನೀಡಲಾಗುವುದು. ವ್ಯಾಸಂಗ ಪೂರ್ಣಗೊಂಡ ನಂತರ 04 ತಿಂಗಳ ವಿರಾಮಾವಧಿ ಇರುತ್ತದೆ. ನಂತರ ಸಾಲವನ್ನು 36 ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು.
ಅರಿವು ಶೈಕ್ಷಣಿಕ ಸಾಲ ಯೋಜನೆಯ (ಹಳೆಯದು):
2022-23 ಹಾಗೂ 2023-24 ನೇ ಸಾಲಿನಲ್ಲಿ ಸಾಲ ಪಡೆದ ವಿದ್ಯಾರ್ಥಿಗಳಿಗೆ 2024-25ನೇ ಸಾಲಿಗೆ 2 ಹಾಗೂ 3 ನೇ ಕಂತಿನ ನವೀಕರಣ ಸಾಲ ಮಂಜೂರು ಮಾಡಲು 2 ಮತ್ತು 3 ನೇ ವರ್ಷದ ವ್ಯಾಸಂಗ ದೃಢೀಕರಣ ಮತ್ತು ಕಳೆದ ವರ್ಷದ ಅಂಕಪಟ್ಟಿಯೊAದಿಗೆ ಅರ್ಜಿ ಸಲ್ಲಿಸುವುದು.
ರಾಜಶ್ರೀ ಶಾಹುಮಹಾರಾಜ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ (ಹೊಸದು):
ವಿದೇಶ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ ಮರಾಠ ಸಮುದಾಯದ ವಿದ್ಯಾರ್ಥಿಗಳು ವಿದೇಶದಲ್ಲಿನ ಕ್ಯೂಸ್ ವರ್ಲ್ಡ್ ರ್ಯಾಂಕಿoಗ್ 500 ರೊಳಗೆ ಬರುವ ವಿಶ್ವವಿದ್ಯಾಲಯಗಳಲ್ಲಿ ಪೋಸ್ಟ್ ಡಾಕ್ಟೋರಲ್ ಪಿಹಚ್ಡಿ, ಮಾಸ್ಟರ್ ಡಿಗ್ರೀ, ಕೋರ್ಸುಗಳಲ್ಲಿ ಉನ್ನತ ವ್ಯಾಸಂಗಕ್ಕೆ ಪ್ರವೇಶ ಪಡೆಯುವ ಅಭ್ಯರ್ಥಿಗಳಿಗೆ ವಾರ್ಷಿಕ ಗರಿಷ್ಠ ರೂ.10 ಲಕ್ಷ ಅಥವಾ ವಿದ್ಯಾರ್ಥಿಗಳ ಕೋರ್ಸ್ನ ಪೂರ್ಣ ಅವಧಿಗೆ ಗರಿಷ್ಠ ರೂ.20 ಲಕ್ಷಗಳವರೆಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಮಂಜೂರು ಮಾಡಲು ಅರ್ಜಿಗಳನ್ನು ಅಹ್ವಾನಿಸಿದೆ.
ರಾಜಶ್ರೀ ಶಾಹುಮಹಾರಾಜ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ(ಹಳೆಯದು):
2023-24ನೇ ಸಾಲಿನಲ್ಲಿ ಸಾಲ ಪಡೆದ ವಿದ್ಯಾರ್ಥಿಗಳಿಗೆ 2024-25 ನೇ ಸಾಲಿಗೆ 2ನೇ ಕಂತಿನ ನವೀಕರಣ ಸಾಲ ಮಂಜೂರು ಮಾಡಲು 2ನೇ ವರ್ಷದ ವ್ಯಾಸಂಗ ದೃಢೀಕರಣ ಮತ್ತು ಮೊದಲನೇ ವರ್ಷದ ಅಂಕಪಟ್ಟಿಯೊoದಿಗೆ ಅರ್ಜಿ ಸಲ್ಲಿಸುವುದು.
ಮರಾಠ ಮಿಲ್ಟಿç ಹೋಟೆಲ್ ಯೋಜನೆ:
ಈ ಯೋಜನೆಯ ಘಟಕ ವೆಚ್ಚ ಗರಿಷ್ಠ ರೂ.5 ಲಕ್ಷ ಸಾಲ, ರೂ.40 ಸಹಾಯಧನ ಆಗಿರುತ್ತದೆ. ಸಾಲವನ್ನು ವಾರ್ಷಿಕ ಶೇ.4ರ ಬಡ್ಡಿ ದರದಲ್ಲಿ ಮಂಜೂರು ಮಾಡಲಾಗುವುದು. 03 ವರ್ಷಗಳಲ್ಲಿ ಮಾಸಿಕ ಕಂತುಗಳಲ್ಲಿ ಮಂಜೂರಾತಿ ಆದೇಶದಲ್ಲಿ ನಿಗದಿ ಪಡಿಸಿರುವಂತೆ ಅಸಲು ಮತ್ತು ಬಡ್ಡಿಯನ್ನು ಮರುಪಾವತಿಸುವುದು.
ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕ್ಗಳ ಸಹಯೋಗದೊಂದಿಗೆ):
ಈ ಯೋಜನೆಯಡಿ ಉದ್ಯೋಗ ಪ್ರಾರಂಭಿಸಲು ಬ್ಯಾಂಕ್, ಸಹಕಾರಿ ಸಂಘಗಳಿ0ದ ಸಾಲ ಪಡೆಯಬೇಕು ಹಾಗೂ ನಿಗಮದಿಂದ ಶೇ.20ರಷ್ಟು ಅಥವಾ ಗರಿಷ್ಠ ರೂ.1 ಲಕ್ಷ ನಿಗಮದಿಂದ ಸಹಾಯಧನ ಮಂಜೂರು ಮಾಡಲಾಗುವುದು. ಬ್ಯಾಂಕ್ಗಳು ಮಂಜೂರು ಮಾಡುವ ಸಾಲಕ್ಕೆ ಬ್ಯಾಂಕ್ಗಳು ಚಾಲ್ತಿಯಲ್ಲಿರುವ ಬಡ್ಡಿಯನ್ನು ವಿಧಿಸಲಾಗುತ್ತದೆ.
ಸ್ವಾವಲಂಬಿ ಸಾರಥಿ ಯೋಜನೆ:
ಈ ಯೋಜನೆಯಲ್ಲಿ ಆರ್ಥಿಕ ಸಹಾಯ ಪಡೆಯಲು ಇಚ್ಚಿಸುವ ಅರ್ಜಿದಾರರು ಲಘುವಾಹನ ಚಾಲನಾ ಪರವಾನಿಗೆಯನ್ನು ಹೊಂದಿರಬೇಕು. ನಿರುದ್ಯೋಗಿಯಾಗಿರಬೇಕು. ಸ್ವಾವಲಂಬಿ ಸಾರಥಿ ಯೋಜನೆಯಡಿ ನಾಲ್ಕುಚಕ್ರಗಳ ವಾಹನವನ್ನು (ಟ್ಯಾಕ್ಸಿ, ಟಾಟಾಎಸಿ, ಗೂಡ್ಸ್ ವಾಹನ ಇತ್ಯಾದಿ ನಾಲ್ಕು ಚಕ್ರಗಳ ವಾಹನ) ಖರೀದಿಸಲು ಬ್ಯಾಂಕ್, ಹಣಕಾಸು ಸಂಸ್ಥೆಗಳು ಮಂಜೂರು ಮಾಡಿದ ಸಾಲದ ಶೇ.50ರಷ್ಟು ಅಥವಾ ಗರಿಷ್ಟ ರೂ.3 ಲಕ್ಷಗಳವರೆಗೆ ಇವುಗಳಲ್ಲಿ ಯಾವುದು ಕಡಿಮೆಯೋ ಅಷ್ಟು ಸಹಾಯಧನ ನಿಗಮದಿಂದ ಮಂಜೂರು ಮಾಡುವುದು.
ಉಳಿದ ಮೊತ್ತವನ್ನು ಬ್ಯಾಂಕ್, ಹಣಕಾಸು ಸಂಸ್ಥೆಗಳಿ0ದ ಸಾಲದ ರೂಪದಲ್ಲಿ ಪಡೆಯುವುದು ಈ ಸಾಲಕ್ಕೆ ಬ್ಯಾಂಕ್, ಹಣಕಾಸು ಸಂಸ್ಥೆಗಳು ನಿಗದಿಪಡಿಸುವ ಬಡ್ಡಿಯನ್ನು ಪಾವತಿಸಬೇಕು.
ಸ್ವಾತಂತ್ರ್ಯಯ ಅಮೃತ್ ಮಹೋತ್ಸವ ಮುನ್ನಡೆ ಯೋಜನೆ:
ಮರಾಠ ಸಮುದಾಯದ ಯುವಜನತೆಯನ್ನು ಕೌಶಲ್ಯ ಅಭಿವೃದ್ಧಿಪಡಿಸಿ ಉದ್ಯೋಗಮುಖಿಗಳನ್ನಾಗಿಸಲು ಸರ್ಕಾರದ ಸಂಸ್ಥೆಗಳಾದ ಐಟಿಐ, ಜಿಟಿಟಿಸಿ, ಕೆಜಿಟಿಟಿಐ ಇತ್ಯಾದಿಗಳಲ್ಲಿ ಅಲ್ಪಾವಧಿ ಕೋಸ್ರ್ಗಳ ಮೂಲಕ ಕೌಶಲ್ಯ ಅಭಿವೃದ್ಧಿ ತರಬೆತಿ ನೀಡಲು ಕೌಶಲ್ಯ ಕರ್ನಾಟಕ ತಂತ್ರಾoಶದ (hಣಣಠಿs://ತಿತಿತಿ.ಞಚಿushಚಿಟಞಚಿಡಿ.ಛಿom) ಮೂಲಕ ಅರ್ಜಿಗಳನ್ನು ಅಹ್ವಾನಿಸಿದೆ.
ಸೂಚನೆ:
ನಿರ್ದೇಶಕರ ಮಂಡಳಿಯ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯಬಯಸುವವರೂಸಹ ಆನ್ಲೈನ್ ನಲ್ಲಿ ಪ್ರತ್ಯೇಕವಾಗಿ ಅರ್ಜಿಯನ್ನು ಸಲ್ಲಿಸುವುದು, ಒಂದು ಕುಟುಂಬದ ಒಬ್ಬ ಸದಸ್ಯರು ಮಾತ್ರ ಮೇಲ್ಕಂಡ ಯಾವುದಾದರೂ ಒಂದು ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸುವುದು.
2023-24 ನೇ ಸಾಲಿನ ನಿಗದಿತ ಯೋಜನೆಗೆ ಅರ್ಜಿ ಸಲ್ಲಿಸಿ ಆಯ್ಕೆಯಾಗದವರು ಈ ವರ್ಷ ಅರ್ಜಿ ಹಾಕಬಾರದು. ಸರ್ಕಾರ ಮತ್ತು ನಿಗಮ ಕಾಲಕಾಲಕ್ಕೆ ವಿಧಿಸುವ ಇನ್ನಿತರ ಅರ್ಹತೆ ಮತ್ತು ನಿಬಂಧನೆಗಳನ್ನು ಹೊಂದಿದವರಾಗಿರಬೇಕು.
ಹೆಚ್ಚಿನ ಮಾಹಿತಿಗಾಗಿ ನಗರದ ಕ್ಲಬ್ ರಸ್ತೆಯ ಕುಮಾರಸ್ವಾಮಿ ಗುಡಿ ಎದುರು ವೀರನಗೌಡ ಕಾಲೋನಿಯ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಅಥವಾ ದೂ.08392-267038 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.