ವಿಶ್ವ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ

Vijayanagara Vani
ವಿಶ್ವ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ
ಮಡಿಕೇರಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ, ಇವರ ಸಹಯೋಗದೊಂದಿಗೆ 2024-25 ನೇ ಸಾಲಿನ ಮಿಷನ್ ಶಕ್ತಿ ಯೋಜನೆಯಡಿ “ಬೇಟಿ ಪಡಾವೋ-ಬೇಟಿ ಬಚಾವೋ” ಜಿಲ್ಲಾ ಮಟ್ಟದ ಕಾರ್ಯಕ್ರಮದ ಪ್ರಯುಕ್ತ ನಗರದ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಕಟ್ಟಡ ಕಾರ್ಮಿಕರಿಗೆ “ವಿಶ್ವ ಮಾನವ ಕಳ್ಳ ಸಾಗಾಣಿಕೆ’ ತಡೆ ದಿನಾಚರಣೆ ಕಾರ್ಯಕ್ರಮವು ಶುಕ್ರವಾರ ನಡೆಯಿತು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಅವರು ಉದ್ಘಾಟಿಸಿ ಮಾತನಾಡಿ ಮಾನವ ಕಳ್ಳ ಸಾಗಾಣಿಕೆ ಎಂಬುವುದು ಸಾಮಾನ್ಯ ಮಹಿಳೆಯರಿಗೆ ಸಮಾಜದಲ್ಲಿ ಸಾಮಾನ್ಯಯುತವಾಗಿ ಜೀವನ ನಡೆಸಲು ಸಮಸ್ಯೆಯಾಗುತ್ತಿದ್ದು, ಮಹಿಳೆಯರನ್ನು ಕಳ್ಳ ಸಾಗಾಣಿಕೆಯಿಂದ ಅವರನ್ನು ಬೇರೆ ಬೇರೆ ಕೆಲಸ ಕಾರ್ಯಗಳಿಗೆ ಬಳಸಿಕೊಳ್ಳುತ್ತಿದ್ದು, ಕೆಲವು ಮಾರಕ ಕಾಯಿಲೆಗಳಿಗೆ ತುತ್ತಾಗುತ್ತಿದ್ದು ಅವರಿಗೆ ನೆರವು ನೀಡುವುದು, ಉತ್ತಮ ಸೌಲಭ್ಯವನ್ನು ಕಲ್ಪಿಸುವುದಾಗಿದೆ. ಶಿಕ್ಷಣದಿಂದ ವಂಚಿತರಾಗದಂತೆ ಕಾಪಾಡುವುದು, ವಿಶ್ವವೇ ಒಂದು ಕುಟುಂಬವಾಗಿರುವಾಗ ಶ್ರೀ ಕೃಷ್ಣ ಪರಮಾತ್ಮನಾ ಘೋಷವಾಕ್ಯದಂತೆ “ವಸುಧೈವಕ ಕುಟುಂಬಕಂ” ಎಂಬಂತೆ ಪ್ರತಿಯೊಬ್ಬರು ಪರಸ್ಪರ ಸಹಕಾರ ಮನೋ ಬಾಳ್ವೆಯಿಂದ ಒಳಿತನ್ನು ಬಯಸುತ್ತಾ ಬದುಕು ನಡೆಸಬೇಕು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ನಟರಾಜ್ ಅವರು ‘ಮನುಷ್ಯನೇ ಮನುಷ್ಯರನ್ನು ಕಳ್ಳ ಸಾಗಾಣಿಕೆ ಮಾಡುವುದು ಬೇರೆ ಬೇರೆ ಉದ್ದೇಶಗಳಿಗೆ ಅವರನ್ನು ಮಾರಾಟಮಾಡುವುದು” ಅವರನ್ನು ಬಲವಂತವಾಗಿ ದುಡಿಮೆಗಳಲ್ಲಿ ದುಡಿಸಿಕೊಳ್ಳುವುದು, ಅಥವಾ ಅಪಾಯದ ಸ್ಥಳಗಳಲ್ಲಿ ಕೆಲಸ ಮಾಡುವಂತದ ಬಾಲ ಕಾರ್ಮಿಕರಾಗಿ ದುಡಿಸುವಂತದ್ದು, ಬಿಕ್ಷಾಟಣೆಗೆ ಮಕ್ಕಳನ್ನು ಅಥವಾ ಹಿರಿಯ ಜೀವಗಳನ್ನು ಬಿಡುವಂತದ್ದು, ಮನುಷ್ಯನೇ ಮನುಷ್ಯರನ್ನು ಕಳ್ಳ ಸಾಗಾಣಿಕೆ ಮಾಡಿ, ಬೇರೆ ಬೇರೆ ಉದ್ದೇಶಗಳಿಗೆ ಅವರನ್ನು ಮಾರಾಟಮಾಡಲಾಗುತ್ತಿದೆ ಎಂದು ತಿಳಿಸಿದರು.
ನೆರೆದಿರುವ ಎಲ್ಲರಿಂದಲೂ ಮಾನವ ಕಳ್ಳ ಸಾಗಾಣಿಕೆ ತಡೆ ಕುರಿತ ಪ್ರತಿಜ್ಞಾ ವಿಧಿಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ನಟರಾಜ್ ಅವರು ಬೋಧಿಸಿದರು. ಹೇಳಿದರು.
ಈ ಕಾರ್ಯಕ್ರಮದ ಮುಖ್ಯ ಅಥಿತಿಗಳಾದ ಬಾಲ ಕಾರ್ಮಿಕ ಸೊಸೈಟಿಯ ಯೋಜನಾ ನಿರ್ದೇಶಕರಾದ ಸಿರಾಜ್ ಅವರು ಮಾತನಾಡಿ ಪ್ರಸ್ತುತ ದಿನಗಳಲ್ಲಿ ಸಾರ್ವಜನಿಕರು ಜಾಗೃತರಾಗಬೇಕು ಎಂದರು. ಇಂದು ಬಾಲ ಕಾರ್ಮಿಕ ಪದ್ಧ್ದತಿ ನಿರ್ಮೂಲನೆಗೆ ಹಲವಾರು ಕಾರ್ಯಕ್ರಮ ಆಯೋಜಿಸುವುದರ ಜೊತೆಗೆ ಕ್ರಿಯಾಯೋಜನೆಗಳನ್ನು ರೂಪಿಸಿದ್ದು, ತಂಡಗಳನ್ನು ರಚಿಸಿ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಪಣತೊಟ್ಟಿದ್ದು. ಸಾರ್ವಜನಿಕರು ಈ ಕುರಿತು ಜಾಗೃತರಾಗಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮಕ್ಕಳ ರಕ್ಷಣಾ ಘಟಕದ ಸಮಾಜ ಕಾರ್ಯಕರ್ತರಾದ ಕಿರಣ್, ಕಾರ್ಮಿಕ ಮಂಡಳಿಯ ಎಕ್ಸಿಕ್ಯೂಟಿವ್ ಪ್ರಸನ್ನ ಅವರು ಹಾಜರಿದ್ದರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕರಾದ ಜಯಪ್ಪ ನಿರೂಪಿಸಿದರು, ಕೇಶಿನಿ ಎಸ್.ಆರ್ ಪ್ರಾರ್ಥಸಿದರು ಹಾಗೂ ಸ್ವಾಗತಿಸಿದರು.
WhatsApp Group Join Now
Telegram Group Join Now
Share This Article
error: Content is protected !!