Ad image

ಆಗಸ್ಟ್ 27: ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮ

Vijayanagara Vani
ಶಿವಮೊಗ್ಗ, ಆಗಸ್ಟ್ 26:  ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ವತಿಯಿಂದ ನಿಧಿ ಆಪ್ಕೆ ನಿಕಟ್ 2.0 ಕಾರ್ಯಕ್ರಮವನ್ನು ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಆಗಸ್ಟ್ 27 ರಂದು ಆಯೋಜಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ ಜೋಗ್, ಕರ್ನಾಟಕ ಪವರ್ ಕಾರ್ಪೋರೇಷನ್ ಲಿಮಿಟೆಡ್ ಕಚೇರಿಯಲ್ಲಿ ಹಾಗೂ ದಾವಣಗೆರೆ ಜಿಲ್ಲೆಯ ಶ್ರೀ ಬಸವ ವಿದ್ಯಾಪೀಠ, ಬೀರೂರು ರಸ್ತೆ, ಎಂಎನ್.ಹಳ್ಳಿ, ಟಿ.ಜಿ.ಹಳ್ಳಿ, ಚನ್ನಗಿರಿ ತಾಲೂಕು ಇಲ್ಲಿ ಕಾರ್ಯಕ್ರಮ ನಡೆಯಲಿದೆ.
ಉದ್ಯೋಗದಾತರು ಮತ್ತು ಉದ್ಯೋಗಿಗಳಿಗೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆ ಹಾಗೂ ಪಿಂಚಣಿದಾರರಿಗೆ ಮಧ್ಯಾಹ್ನ 2.30 ರಿಂದ ಸಂಜೆ 4 ಗಂಟೆವರೆಗೆ ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮ ನಡೆಯಲಿದ್ದು, ಉದ್ಯೋಗದಾತರು ಮತ್ತು ಉದ್ಯೋಗಿಗಳು ಮತ್ತು ಪಿಂಚಣಿದಾರರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಪ್ರಾದೇಶಿಕ ಕಚೇರಿಯ ಸಹಾಯಕ ಭವಿಷ್ಯ ನಿಧಿ ಆಯುಕ್ತರು ತಿಳಿಸಿದ್ದಾರೆ.
Share This Article
error: Content is protected !!
";