Ad image

ಸೆ..15 ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಮಾನವ ಸರಪಳಿ ನಿರ್ಮಾಣ ಪ್ರತಿಯೊಬ್ಬರೂ ತಪ್ಪದೇ ಪಾಲ್ಗೊಳ್ಳುವಂತೆ ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ ಸೂಚನೆ

Vijayanagara Vani
ಸೆ..15 ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಮಾನವ ಸರಪಳಿ ನಿರ್ಮಾಣ  ಪ್ರತಿಯೊಬ್ಬರೂ ತಪ್ಪದೇ ಪಾಲ್ಗೊಳ್ಳುವಂತೆ ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ ಸೂಚನೆ

 

ಬಳ್ಳಾರಿ,ಸೆ.14
ಪ್ರಜಾ ಪ್ರಭುತ್ವದ ಆಶಯಗಳಾದ ಸಮಾನತೆ, ಏಕತೆ, ನಾವೆಲ್ಲರೂ ಒಂದೇ ಎಂಬ ಭಾವನೆಯನ್ನು ಅರಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು ಸೆ.15 ರಂದು ಬೆಳಿಗ್ಗೆ 8.30 ಗಂಟೆಯಿAದ 9.30 ಗಂಟೆಯವರೆಗೆ ಎಲ್ಲಾ ಇಲಾಖೆಗಳು ಸೇರಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಆಯೋಜಿಸುವ ಬೃಹತ್ ಮಾನವ ಸರಪಳಿ ನಿರ್ಮಾಣಕ್ಕೆ ಪ್ರತಿಯೊಬ್ಬರೂ ತಪ್ಪದೇ ಪಾಲ್ಗೊಳ್ಳುವಂತೆ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.
ಅಂತರಾಷ್ಟೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಹಮ್ಮಿಕೊಂಡ ಬೃಹತ್ ಮಾನವ ಸರಪಳಿ ನಿರ್ಮಾಣ ಕುರಿತು ನಗರದ ಜಿಲ್ಲಾಧಿಕಾರಿಗಳ ಕೆಸ್ವಾನ್ ಸಭೆಯಲ್ಲಿ ಶನಿವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ಪ್ರತಿಯೊಬ್ಬ ಪ್ರಜೆಗೂ ಪ್ರಜಾಪ್ರಭುತ್ವದ ಮಹತ್ವ ತಿಳಿಸಲು ರಾಜ್ಯ ಸರ್ಕಾರ ವಿನೂತನ ಕಾರ್ಯಕ್ರಮ ಏರ್ಪಡಿಸಲಾಗಿದೆ. ಅಂತರಾಷ್ಟೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಹಮ್ಮಿಕೊಂಡ ಮಾನವ ಸರಪಳಿ ಆಯೋಜನೆಗೆ ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಕೈಗೊಂಡಿದ್ದು, ಪ್ರತಿಯೊಬ್ಬರು ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದರು.
ಅಂತರಾಷ್ಟೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೆ.15 ರಂದು ನಡೆಯುವ ಮಾನವ ಸರಪಳಿ ಆಯೋಜನೆಯಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ವಿವಿಧ ಸಮುದಾಯಗಳ ಮುಖಂಡರು, ಎನ್.ಜಿ.ಓ.ಗಳು, ಸ್ತ್ರೀ ಶಕ್ತಿ ಸ್ವಸಹಾಯ ಸಂಘಗಳು, ರೋಟರಿ ಸಂಸ್ಥೆಗಳ ಮುಖಂಡರು ಸೇರಿದಂತೆ ಸಾರ್ವಜನಿಕರು ಭಾಗವಹಿಸುತ್ತಾರೆ ಎಂದು ಹೇಳಿದರು.
ಮಾನವ ಸರಪಳಿ ಕಾರ್ಯಕ್ರಮದಲ್ಲಿ ಸರಿ ಸುಮಾರು 32000 ಕ್ಕೂ ಹೆಚ್ಚು ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳನ್ನೊಳಗೊಂಡಂತೆ ವಿಜಯನಗರ ಜಿಲ್ಲೆಯ ಗಡಿಭಾಗದ ಭುವನಹಳ್ಳಿ- ಸಂಡೂರು ತಾಲ್ಲೂಕಿನ ಕುರೆಕುಪ್ಪ-ವಡ್ಡು-ಬನ್ನಿಹಟ್ಟಿ-ಲಿಂಗದಹಳ್ಳಿ-ಉಬ್ಬಲಗಂಡಿ-ಯು.ರಾಜಾಪುರ-ಯು.ಮಲ್ಲಾಪುರ-ಸಂತೇಗುಡ್ಡ ಮೇಲಿನಕಣಿವೆ (ಚಿತ್ರದುರ್ಗ ಜಿಲ್ಲೆಯ ಗಡಿ ಭಾಗ) ವರೆಗೆ ಸುಮಾರು 45.9 ಕಿಮೀ ಉದ್ದದ ಮಾನವ ಸರಪಳಿಯನ್ನು ನಿರ್ಮಿಸಿ, ಅತ್ಯಂತ ಉತ್ಸಾಹದಿಂದ ಪ್ರಜಾ ಪ್ರಭುತ್ವದ ಘನತೆಯನ್ನು ಎತ್ತಿ ಹಿಡಿಯುವ ಹಾಗೂ ಗೌರವಿಸುವ ಕಾರ್ಯದಲ್ಲಿ ಪ್ರತಿಯೊಬ್ಬರೂ ಭಾಗಿಯಾಗಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಅಂತರಾಷ್ಟೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ ವತಿಯಿಂದ ಬನ್ನಿಹಟ್ಟಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಮಾನವ ಸರಪಳಿ ಮಾರ್ಗ ಮಧ್ಯದಲ್ಲಿ ಪ್ರತಿ 100 ಮೀಟರ್‌ಗೆ ಒಬ್ಬರಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಶಾ ಕಾರ್ಯಕರ್ತೆ, ಅಂಗನವಾಡಿ ಶಿಕ್ಷಕಿ ಮತ್ತು ಎಡಬ್ಲೂö್ಯಡಬ್ಲೂö್ಯ ನೇಮಕ ಮಾಡಲಾಗಿದೆ.
ಪ್ರತಿ 1 ಕಿಮೀ ಗೆ ಒಬ್ಬರಂತೆ ಸಿಎಂಸಿ, ಟಿಎಂಸಿ, ತೋಟಗಾರಿಕೆ, ಎಂಡಿಆರ್‌ಎಸ್‌ನ ಶಿಕ್ಷಕರು ಮತ್ತು ಸಿಬ್ಬಂದಿ ವರ್ಗ ಮತ್ತು ಪ್ರತಿ 2.ಕಿಮೀ ಗೆ ಒಬ್ಬರಂತೆ ಬಿಸಿಎಂ, ಎಸ್‌ಟಿ, ಎಸ್‌ಬ್ಲೂಡಿ, ಪಿಡಬ್ಲೂಡಿ, ಕಾರ್ಮಿಕ ಮತ್ತು ಅರಣ್ಯ ಇಲಾಖೆ, ಸಿಎಂಸಿ, ಟಿಎಂಸಿಯ ತಾಲ್ಲೂಕು ಮಟ್ಟದ ಅಧಿಕಾರಿಗಳನ್ನು ಮತ್ತು ಸಿಬ್ಬಂದಿ ವರ್ಗದವರನ್ನು ನೇಮಿಸಲಾಗಿದೆ ಎಂದು ತಿಳಿಸಿದರು.
ಅಂತರಾಷ್ಟ್ರೀಯ ಪ್ರಜಾ ಪ್ರಭುತ್ವ ದಿನಾಚರಣೆ ಕುರಿತು ಜಿಲ್ಲೆಯಾದ್ಯಂತ ವ್ಯಾಪಕ ಪ್ರಚಾರ ಕೈಗೊಳ್ಳಲಾಗಿದ್ದು, ಬಸ್‌ಗಳು ಮತ್ತು ಮೈನಿಂಗ್ ವಾಹನಗಳು ಹಾಗೂ ಇನ್ನಿತರೆ ಕೈಗಾರಿಕೆ ಮತ್ತು ವಾಣಿಜ್ಯ ಸಂಸ್ಥೆಗಳ ವಾಹನಗಳಿಗೆ 1000 ಪೋಸ್ಟರ್‌ಗಳನ್ನು ಅಳವಡಿಸಲಾಗಿದೆ ಹಾಗೂ ಜಿಲ್ಲಾ ಹಾಲು ಉತ್ಪನ್ನ ಘಟಕ ಕೆಎಂಎಫ್ ವತಿಯಿಂದ ಸರಬರಾಜು ಮಾಡಲಾಗುತ್ತಿರುವ ಉತ್ಪನ್ನಗಳ ಪ್ಯಾಕೇಟ್‌ಗಳ ಮೇಲೆ ಪ್ರತಿದಿನ “ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮಾನವ ಸರಪಳಿ ನಿರ್ಮಿಸೋಣ” ಎಂಬ ಘೋಷ ವಾಕ್ಯ ಪ್ರಕಟಿಸಲಾಗುತ್ತಿದೆ ಎಂದರು
ಕಾರ್ಯಕ್ರಮದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಮತ್ತು ಮಕ್ಕಳ ಹಿತದೃಷ್ಟಿಯಿಂದ, ಆರೋಗ್ಯ, ಭದ್ರತೆ, ಇನ್ನಿತರೆ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು, ಮೇಲುಸ್ತುವಾರಿಗಾಗಿ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನಿಯೋಜಿಸಲಾಗಿದೆ. ಮಾನವ ಸರಪಳಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ವಿದ್ಯಾರ್ಥಿಗಳಿಗೆ 3000 ಬಾವುಟಗಳನ್ನು ಹಾಗೂ ಮಕ್ಕಳಿಗೆ ರಿಬ್ಬನ್ (ಹ್ಯಾಂಡ್ ಬ್ಯಾಂಡ್‌ಗಳ) ನೀಡಲಾಗುತ್ತದೆ ಎಂದು ಹೇಳಿದರು
ಮಾನವ ಸರಪಳಿಯ ಕಾರ್ಯಕ್ರಮದಲ್ಲಿ ಹತ್ತು ವಿವಿಧ ಸಂಸ್ಕೃತಿಗಳನ್ನು ಬಿಂಬಿಸುವ ಕಲಾತಂಡಗಳ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಮಾರ್ಗದುದ್ದಕ್ಕೂ 2000 ಸಸಿಗಳನ್ನು ನೆಡಲಾಗುತ್ತದೆ ಎಂದರು
ಹಾಗಾಗಿ ಸೆ.15 ರಂದು ಭಾನುವಾರ ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳು, ಸರ್ಕಾರಿ ಮತ್ತು ಖಾಸಗಿ ಅನುದಾನಿತ ಹಿರಿಯ, ಕಿರಿಯ ಮತ್ತು ಪ್ರಾಥಮಿಕ ಶಾಲೆಗಳು ಹಾಗೂ ಪದವಿಪೂರ್ವ, ಐಟಿಐ, ಪಾಲಿಟೆಕ್ನಿಕ್ ಕಾಲೇಜುಗಳ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಕರ್ತವ್ಯ ದಿನವೆಂದು ಪರಿಗಣಿಸಿ, ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ತಪ್ಪದೇ ಎಲ್ಲರೂ ಕಡ್ಡಾಯವಾಗಿ ಭಾಗವಹಿಸಲು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.
ಇದೇ ವೇಳೆ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಪೋಸ್ಟರ್ ಬಿಡುಗಡೆಗೊಳಿಸಲಾಯಿತು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝಬೇರ್.ಎನ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ.ಬಿ ಅವರು ಉಪಸ್ಥಿತರಿದ್ದರು.
——–

Share This Article
error: Content is protected !!
";