ಬಳ್ಳಾರಿ,ಅ,03:ವಸತಿ ಮತ್ತು ಶಿಕ್ಷಣ ಶಾಲೆಗಳಲ್ಲಿ ಮೇರಿಟ್ ಆಧಾರದ ಮೇಲೆ ಪ್ರವೇಶಾತಿ ಕಲ್ಪಿಸಿಕೊಟ್ಟಿರುವುದಿಲ್ಲ ಸಮಗ್ರ ತನಿಖೆ ಮಾಡಿ ಸೂಕ್ತ ಕ್ರಮ ಜರುಗಿಸ ಬೇಕೆಂದು ಜಿಲ್ಲಾಧಿಕಾರಿಗಳ ಮುಖಾಂತರ ಸಮಾಜ ಕಲ್ಯಾಣ ಸಚಿವರಿಗೆ ಭೀಮವಾದ ದಲಿತ ಸಂಘರ್ಷ ಸಮಿತಿ ಒತ್ತಾಯಿಸುತ್ತದೆ.
ವಸತಿ ಮತ್ತು ಶಿಕ್ಷಣ ಶಾಲೆಗಳಲ್ಲಿ ಸಮಾಜ ಕಲ್ಯಾಣ ಇಲಾಖೆ,ಬಳ್ಳಾರಿ ಉಪನಿರ್ದೇಶಕರು,ಜಿಲ್ಲೆಯಲ್ಲಿ ವಸತಿ ಮತ್ತು ಶಿಕ್ಷಣ ಶಾಲೆಗಳಲ್ಲಿ KEA (ಕರ್ನಾಟಕ ಪರೀಕ್ಷಾ ಪ್ರಾಧಿಕಾರ) ಮೇರಿಟ್ ಆಧಾರದ ಮೇಲೆ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸೀಟ್ ಹಂಚಿಕೆಯನ್ನು ಮಾಡದೆ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ ಹಾಗೂ ತಮಗೆ ಬೇಕಾದವರಿಗೆ ಮೇರಿಟ್ ಇಲ್ಲದಿದ್ದರೂ ಸಹ ತಮ್ಮ ಲೇಟರ್ ಹೆಡ್ನಲ್ಲಿ ಕೆಲವು ವಿದ್ಯಾರ್ಥಿಗಳಿಗೆ ಪ್ರವೇಶಾತಿಯನ್ನು ಕಲ್ಪಿಸಿಕೊಟ್ಟಿರುತ್ತಾರೆ.
ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ,ಸಮಾಜ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಜಿಲ್ಲಾಧಿಕಾರಿಗಳು,ವಿಶೇಷ ತಂಡವನ್ನು ರಚನೆಮಾಡಿ ಕಾನೂನಾತ್ಮಕವಾಗಿ ತನಿಕೆಮಾಡಿ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನ್ಯಾಯವನ್ನು ದೊರಕಿಸಿಕೊಡಬೇಕೆಂದು ಹಾಗೂ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಯಾರೇ ಇದ್ದರೂ ಅವರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಭೀಮವಾದ ದಲಿತ ಸಂಘರ್ಷ ಸಮಿತಿ ಒತ್ತಾಯಿಸುತ್ತದೆ.
ಒಂದು ವಾರದ ಒಳಗೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯಾನಿರ್ವಾಹಕಾಧಿಕಾರಿಗಳ ತಂಡದೊಂದಿಗೆ ಬೇಟಿ ಮಾಡಿ ಉಪನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ತನಿಖೆಯನ್ನು ಮಾಡಿಸಿ ವರದಿಯನ್ನು ನೀಡಬೇಕೆಂದು ಈ ಮೂಲಕ ಕೋರುತ್ತೇವೆ. ಒಂದು ವೇಳೆ ತನಿಖೆಯಾಗದಿದ್ದ ಪಕ್ಷದಲ್ಲಿ ಮುಂದಿನ ದಿನಗಳಲ್ಲಿ ಹೋರಾಟವನ್ನು ಮಾಡಲಾಗುವುದು ಎಂದು ಜಿಲ್ಲಾ ಸಂಚಾಲಕ ಗಾದಿಲಿಂಗ ತಿಳಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಸಂಘಟನಾ ಸಂಚಾಲಕರಾದ ಜೆ.ಎಸ್.ಶ್ರೀನಿವಾಸುಲು,ಮುಖಂಡರಾದ ಸಿದ್ದೇಶ, ಉಳೂರು,ಜಿಲ್ಲಾ ಸಂಘಟನಾ ಸಂಚಾಲಕರಾದ ಪ್ರಸಾದ್,ಕುಡತಿನಿ ಗಿರೀಶ್ ಸೇರಿದಂತೆ ಇನ್ನಿತರರಿದ್ದರು