Ad image

ಸಂಡೂರಿನಲ್ಲಿ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ವಿವಿಧ ಯೋಜನೆಗಳಿಗೆ ಉದ್ಘಾಟನೆ ನೆರವೇರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಗ್ಯಾರಂಟಿಗಳಿ0ದ ರಾಜ್ಯದ ಅಭಿವೃದ್ಧಿ; ಕಾಮಗಾರಿಗಳಿಗೆ ಅನುದಾನದ ಕೊರತೆಯಿಲ್ಲ

Vijayanagara Vani
ಸಂಡೂರಿನಲ್ಲಿ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ವಿವಿಧ ಯೋಜನೆಗಳಿಗೆ ಉದ್ಘಾಟನೆ ನೆರವೇರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಗ್ಯಾರಂಟಿಗಳಿ0ದ ರಾಜ್ಯದ ಅಭಿವೃದ್ಧಿ; ಕಾಮಗಾರಿಗಳಿಗೆ ಅನುದಾನದ ಕೊರತೆಯಿಲ್ಲ
ಬಳ್ಳಾರಿ,ಅ.14 ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಯಾಗುತ್ತಿದ್ದು, ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಯಾವುದೇ ರೀತಿಯ ಅನುದಾನದ ಕೊರತೆಯಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದರು.
ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಇವರ ಸಂಯುಕ್ತಾಶ್ರಯದಲ್ಲಿ ಸಂಡೂರು ಪಟ್ಟಣದ ಅಗ್ನಿಶಾಮಕದಳ ಮುಂಭಾಗದ ವಿಶ್ವಾಸ್ ಯು.ಲಾಡ್ ಮೈದಾನದ ಆವರಣದಲ್ಲಿ ಸೋಮವಾರ ಆಯೋಜಿಸಿದ್ದ ಸಂಡೂರು ತಾಲ್ಲೂಕಿನ ಸಾಧನಾ ಸಮಾವೇಶ, ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ವಿವಿಧ ಯೋಜನೆಗಳಿಗೆ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಸಂಡೂರು ಭಾಗದಲ್ಲಿ 280 ಕೋಟಿ ರೂ. ವೆಚ್ಚದಲ್ಲಿ ವಿವಿಧ ಯೋಜನೆಗಳ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. 2004 ರಿಂದ 2024 ರವರೆಗೆ 1,216 ಕೋಟಿ ರೂ. ಅನುದಾನ ನೀಡಲಾಗಿದೆ. ರೂ.160.00 ಕೋಟಿ ವೆಚ್ಚದಲ್ಲಿ ನಿಡುಗುರ್ತಿ ಸೇರಿದಂತೆ 58 ಹಳ್ಳಿಗಳಿಗೆ ಬಹುಗ್ರಾಮ ಕುಡಿಯುವ ನೀರಿನ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದರು.
2013 ರ ನಮ್ಮ ಸರಕಾರದ ಅವಧಿಯಲ್ಲಿ ರಾಜ್ಯದಲ್ಲಿ ಸುಮಾರು 15 ಲಕ್ಷ ಮನೆಗಳನ್ನು ಕಟ್ಟಲು ಗುರಿ ಹೊಂದಲಾಗಿತ್ತು. ಸಂಡೂರು ಭಾಗದಲ್ಲಿಯೇ 12,000 ಮನೆಗಳನ್ನು ನೀಡಲಾಗಿತ್ತು. ಸಂಡೂರು ತಾಲ್ಲೂಕಿನ ಸಮಗ್ರ ಅಭಿವೃದ್ಧಿಗಾಗಿ ನಮ್ಮ ಸರ್ಕಾರವು 1216.38 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡುವುದರ ಮೂಲಕ ಸರ್ವರ ಏಳಿಗೆಗಾಗಿ ಶ್ರಮಿಸುವ ಸರ್ಕಾರ ನಮ್ಮದು ಎಂದು ಹೇಳಿದರು.
ಜನಸಂಖ್ಯೆಗೆ ಅನುಗುಣವಾಗಿ ಪ.ಜಾತಿ ಮತ್ತು ಪ.ವರ್ಗದವರ ಅಭಿವೃದ್ಧಿಗಾಗಿ ಹಣ ಮೀಸಲಿಟ್ಟು, ಖರ್ಚು ಮಾಡುತ್ತಿದ್ದೇವೆ, ದೇಶದಲ್ಲಿಯೇ ಎಸ್‌ಸಿ, ಎಸ್‌ಟಿ ಕಾಯ್ದೆಯನ್ನು ಜಾರಿಗೊಳಿಸಿದ ರಾಜ್ಯ ನಮ್ಮದಾಗಿದೆ. ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡವರ ಅಭಿವೃದ್ಧಿಗಾಗಿಯೇ 33,182 ಕೋಟಿ ರೂ. ಮೀಸಲಿರಿಸಲಾಗಿದೆ ಎಂದರು.
ಗ್ಯಾರ0ಟಿ ಯೋಜನೆಗಳಿಂದ ರಾಜ್ಯ ಅಭಿವೃದ್ಧಿ:
ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ನಮ್ಮ ಸರ್ಕಾರ ರಚನೆಯಾದ 8 ತಿಂಗಳಲ್ಲಿಯೇ ಐದು ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಲಾಗಿದೆ. ಪಂಚ ಗ್ಯಾರಂಟಿಗಳಿ0ದ ರಾಜ್ಯವು ಅಭಿವೃದ್ಧಿ ಕಾಣುತ್ತಿದೆ. ರಾಜ್ಯದಲ್ಲಿ ಶಕ್ತಿ ಯೋಜನೆಯಡಿ ಸುಮಾರು 300 ಕೋಟಿ ಮಹಿಳೆಯರು ಬಸ್‌ಗಳಲ್ಲಿ ಪ್ರಯಾಣಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಯಡಿ 1.21 ಮಹಿಳೆಯರು ಪ್ರತಿ ತಿಂಗಳು 2000 ರೂ. ಹಣ ಪಡೆಯುತ್ತಿದ್ದಾರೆ. ಗೃಹಜ್ಯೋತಿ ಯೋಜನೆಯಡಿ ರಾಜ್ಯದ 1.60 ಕೋಟಿ ಮನೆಗಳಿಗೆ 200 ಯೂನಿಟ್ ವಿದ್ಯುತ್ ನೀಡಲಾಗಿದೆ. ಎರಡು ವರ್ಷಗಳ ಕಾಲ ನಿರುದ್ಯೋಗ ಪದವೀಧರ ಮತ್ತು ಡಿಪ್ಲೋಮಾ ಪದವೀಧರರಿಗೆ ಪ್ರತಿ ತಿಂಗಳು ಕ್ರಮವಾಗಿ 3 ಸಾವಿರ ಹಾಗೂ 2 ಸಾವಿರ ಹಣ ನೀಡಲಾಗುತ್ತಿದೆ ಎಂದರು.
ಕೇ0ದ್ರದಿ0ದ ನಮ್ಮ ರಾಜ್ಯಕ್ಕೆ ಬರಬೇಕಾದ ತೆರಿಗೆ ಹಣದ ಪಾಲಿನಲ್ಲಿ ನಮಗೆ ಅನ್ಯಾಯವಾಗುತ್ತಿದ್ದು, ಇದಕ್ಕಾಗಿಯೇ ನಮ್ಮ ತೆರಿಗೆ ನಮ್ಮ ಹಕ್ಕು ಎಂಬುದಾಗಿ ಹೋರಾಟ ಮಾಡುತ್ತಿದ್ದೇವೆ. ದೇಶದಲ್ಲಿಯೇ ಅತಿ ಹೆಚ್ಚು ತೆರಿಗೆ ಹಣ ಕಟ್ಟುವುದರಲ್ಲಿ ನಮ್ಮ ರಾಜ್ಯ ಎರಡನೆ ರಾಜ್ಯವಾಗಿದೆ, ಆದರೆ ನಮಗೆ ಸಿಗಬೇಕಾದ ಪಾಲು ಸಮರ್ಪಕವಾಗಿ ದೊರೆಯುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಈ ಹಿಂದೆ 2013-18 ರಲ್ಲಿ ನಮ್ಮ ಸರ್ಕಾರದಿಂದ 15 ಲಕ್ಷ ಮನೆಗಳನ್ನು ಕಟ್ಟಿದ್ದೆವು, ಸಂಡೂರಿನಲ್ಲಿಯೇ ಸುಮಾರು 12 ಸಾವಿರ ಮನೆಗಳನ್ನು ಕಟ್ಟಿದ್ದೇವೆ, ಇದಕ್ಕೆ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಹಾಗೂ ಆಗ ಸಂಡೂರಿನ ಶಾಸಕರಾಗಿದ್ದ, ಈಗಿನ ಸಂಸದ ಈ. ತುಕಾರಾಂ ಅವರೇ ಕಾರಣ, ಇದರ ಕೀರ್ತಿ ಇವರಿಗೆ ಸಲ್ಲಬೇಕು, ಆದರೆ ಕಳೆದ ಬಾರಿ ಇದ್ದ ಸರ್ಕಾರ ವಸತಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿ ಮಾಡಿಲ್ಲ ಎಂದು ಆರೋಪಿಸಿದರು.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಾತನಾಡಿ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಒಂದಾದ ಸಂಡೂರು ತಾಲ್ಲೂಕು 371 ಜೆ ಸೌಲಭ್ಯವೂ ಒಳಗೊಂಡಿದೆ. ಈ ಅನುಷ್ಠಾನದ ಸದುಪಯೋಗವಾಗಬೇಕು. ಈ ಭಾಗದ ಅಭಿವೃದ್ಧಿಗೆ ನಮ್ಮ ಸರ್ಕಾರವು ರೂ.1216 ಕೋಟಿ ನೀಡಿದೆ, ನನ್ನ ಕ್ಷೇತ್ರವಾದ ಕನಕಪುರಕ್ಕಿಂತಲೂ ಹೆಚ್ಚಿನ ಅನುದಾನವನ್ನು ಈ. ತುಕಾರಾಂ ಅವರು ಪಡೆದಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಹೆಚ್ಚಿನ ಶ್ರಮ ಪಟ್ಟಿದ್ದಾರೆ ಎಂದರು.
ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಮಾತನಾಡಿ, ಸಂಡೂರು ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ಸಾಕಷ್ಟು ಅನುದಾನವನ್ನು ವಿವಿಧ ಯೋಜನೆಗಳಡಿ ನೀಡಿದೆ. ಬಳ್ಳಾರಿ ಜಿಲ್ಲೆಯಲ್ಲಿ ಹೆಚ್ಚು ಅನುದಾನ ಪಡೆದಿರುವ ಕ್ಷೇತ್ರ ಇದಾಗಿದೆ ಎಂದು ಅವರು ಹೇಳಿದರು.
ಸಂಸದ ಈ.ತುಕಾರಾಂ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಸಂಡೂರು ಭಾಗದಲ್ಲಿ ಸುಮಾರು 1216 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಸಂಡೂರು ಪಟ್ಟಣಕ್ಕೆ ಅಮೃತ 2.0 ಯೋಜನೆ ಅಡಿ ನಾರಿಹಳ್ಳ ಜಲಾಶಯದಿಂದ ಸುಧಾರಿತ ನೀರು ಸರಬರಾಜು ಯೋಜನೆ ಕೈಗೆತ್ತಿಕೊಳ್ಳುವ ಕಾಮಗಾರಿ ರೂ. 54.45 ಕೋಟಿ ವೆಚ್ಚದಲ್ಲಿ ಪ್ರಾರಂಬಿಸಲಾಗಿದೆ. ರೂ.2.50 ಕೋಟಿ ವೆಚ್ಚದಲ್ಲಿ ಕನಕಭವನ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗುವುದು ಎಂದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ವೀರಶೈವ ಲಿಂಗಾಯತ, ವಿಶ್ವಕರ್ಮ, ಕುರುಬ, ಮೇದಾರ, ಯಾದವ, ಗೊಲ್ಲರು, ಮಡಿವಾಳ ಮತ್ತು ಮುಂತಾದ 13 ಸಮುದಾಯಗಳಿಗೆ ರೂ. 07.50 ಕೋಟಿ ವೆಚ್ಚದಲ್ಲಿ ಸಮುದಾಯ ಭವನಗಳ ನಿರ್ಮಾಣ, ಚೋರನೂರು ಹೋಬಳಿಯ ಚೋರನೂರು ಗ್ರಾಮದಲ್ಲಿ ರೂ.2.58 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಪೊಲೀಸ್ ಠಾಣೆ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದರು.
ಸಂಡೂರು ಪಟ್ಟಣದಲ್ಲಿ 01 ಸೆಪ್ಟೆಂಬರ್ 2024 ರಿಂದ ಸ್ವತಂತ್ರವಾಗಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎ.ಪಿ.ಎಂ.ಸಿ)ಯಾಗಿ ಘೋಷಿಸಲಾಗಿದೆ. ತೋರಣಗಲ್ಲು ಗ್ರಾಮದಲ್ಲಿ ರೂ.2 ಕೋಟಿ ವೆಚ್ಚದೊಂದಿಗೆ ಸ್ವತಂತ್ರ ಪದವಿ ಪೂರ್ವ ಕಾಲೇಜ್ ಮಂಜೂರು ಮಾಡಲಾಗಿದೆ.
ಸಂಡೂರು ಪಟ್ಟಣದಲ್ಲಿ 200 ಹಾಸಿಗೆಗಳ ಮಲ್ಟಿಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ರೂ.180 ಕೋಟಿ ವೆಚ್ಚದಲ್ಲಿ ನಿರ್ಮಾಣ, ಸಂಡೂರು ಪಟ್ಟಣ ಮತ್ತು ಡಿ.ಅಂತಾಪುರ ಗ್ರಾಮದಲ್ಲಿ ರೂ.56 ಕೋಟಿ ವೆಚ್ಚದಲ್ಲಿ ವಿದ್ಯುತ್ ಉಪಕೇಂದ್ರಗಳ ನಿರ್ಮಾಣ. ಸಂಡೂರು ಪಟ್ಟಣದ ಮಧ್ಯ ಭಾಗದಲ್ಲಿ ಸುಸಜ್ಜಿತವಾದ ಬಸ್ ನಿಲ್ದಾಣವನ್ನು ರೂ.30 ಕೋಟಿ ವೆಚ್ಚದಲ್ಲಿ ನಿರ್ಮಾಣ ಸೇರಿದಂತೆ ಹಲವು ಕಾಮಗಾರಿಗಳಿಗೆ ಅನುಮೋದನೆಯಾಗಿದ್ದು, ಎಲ್ಲವೂ ಟೆಂಡರ್ ಹಂತದಲ್ಲಿವೆ ಎಂದು ಅವರು ವಿವರಿಸಿದರು.
ವಸತಿ, ವಕ್ಫ್, ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಮಾತನಾಡಿ, ರಾಜೀವ್ ಗಾಂಧಿ ವಸತಿ ನಿಗಮದಿಂದ ಬಳ್ಳಾರಿ ಮತ್ತು ಸಂಡೂರಿನಲ್ಲಿ 135 ಕೋಟಿ ವೆಚ್ಚದಲ್ಲಿ ಕಳೆದ ಬಾರಿ 2173 ಮನೆಗಳ ನಿರ್ಮಾಣಕ್ಕೆ ಚಾಲನೆ ನೀಡಲಾಗಿತ್ತು. ಹಲವು ಅಡೆ ತಡೆಗಳಿಂದ ಮನೆಗಳ ನಿರ್ಮಾಣ ಕಾರ್ಯ ವಿಳಂಬವಾಗಿತ್ತು. ಸದ್ಯಕ್ಕೆ ನಿರ್ಮಾಣ ಕಾರ್ಯದಲ್ಲಿ ಪೂರ್ಣಗೊಂಡಿರುವ 500 ಮನೆಗಳನ್ನು ಫಲಾನುಭವಿಗಳಿಗೆ ಹಸ್ತಾಂತರಿಸಲಾಗಿದೆ. ಉಳಿದ ಮನೆಗಳ ನಿರ್ಮಾಣ ಕಾರ್ಯ ಕೂಡ ನಡೆಯುತ್ತಿದ್ದು, ತ್ವರಿತವಾಗಿ ಪೂರ್ಣ ಗೊಳಿಸಿ ಹಸ್ತಾಂತರಿಸಲಾಗುವುದು ಎಂದು ಹೇಳಿದರು.
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಮಾತನಾಡಿ, ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ರಚನೆಯಾದ ಬಳಿಕ ಸಾಕಷ್ಟು ಜನಪರ ಕಾರ್ಯ ಯೋಜನೆಗಳನ್ನು ಜಾರಿಗೊಳಿಸಿದ್ದೇವೆ, ಅವುಗಳನ್ನು ಅನುಷ್ಠಾನವೂ ಮಾಡಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಅಸಂಘಟಿತ ವಲಯಗಳಡಿ ನೋಂದಾಯಿಸಿಕೊAಡ ಕಾರ್ಮಿಕರಿಗೆ ಸ್ಮಾರ್ಟ್ ಲಾರ್ಡ್ ವಿತರಣೆ ಮಾಡಲಾಯಿತು. ಗೃಹಲಕ್ಷಿö್ಮ ಯೋಜನೆಯಡಿ ಸೌಲಭ್ಯ ಪಡೆದಿರುವ ಮಹಿಳಾ ಫಲಾನುಭವಿಗಳಿಗೆ ಮಂಜೂರಾತಿ ಪತ್ರ ವಿತರಣೆ ಮಾಡಲಾಯಿತು.
ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಸ್ವಾಗತಿಸಿದರು. ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಅವರು ವಂದಿಸಿದರು.
ಕಾರ್ಯಕ್ರಮಕ್ಕೂ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವರೂ ಆದ ಡಿ.ಕೆ.ಶಿವಕುಮಾರ ಅವರು ನಾರಿಹಳ್ಳ ಜಲಾಶಯಕ್ಕೆ ಬಾಗಿನ ಅರ್ಪಿಸಿದರು.
ಈ ವೇಳೆ ರಾಜ್ಯ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಶಾಸಕ ಜೆ.ಎನ್.ಗಣೇಶ್, ಇತರೆ ಶಾಸಕರುಗಳಾದ ಬಿ.ಎಂ.ನಾಗರಾಜ, ನಾರಾ ಭರತ್ ರೆಡ್ಡಿ, ಡಾ.ಶ್ರೀನಿವಾಸ, ಲತಾ ಮಲ್ಲಿಕಾರ್ಜುನ, ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ, ಡಾ.ಬಾಬು ಜಗನ್ ಜೀವನ ರಾಮ್ ಚರ್ಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷ ಮೆಹರೋಜ್ ಖಾನ್, ಪುರಸಭೆ ಅಧ್ಯಕ್ಷ ಸಿರಾಜ್ ಹುಸೇನ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ತ್ರಿಲೋಕಚಂದ್ರ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಬಳ್ಳಾರಿ ವಲಯ ಐಜಿಪಿ ಬಿ.ಎಸ್.ಲೋಕೇಶ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭರಾಣಿ.ವಿ.ಜೆ., ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಉಪವಿಭಾಗಾಧಿಕಾರಿ ಪ್ರಮೋದ್ ಸೇರಿದಂತೆ ಚುನಾಯಿತ ಪ್ರತಿನಿಧಿಗಳು, ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಾರ್ವಜನಿಕರು ಹಾಗೂ ಇತರರು ಉಪಸ್ಥಿತರಿದ್ದರು.

Share This Article
error: Content is protected !!
";