ಬಳ್ಳಾರಿ, ನವೆಂಬರ್ 23: ಬಳ್ಳಾರಿ ಜಿಲ್ಲೆಯ ಸಂಡೂರು ಕ್ಷೇತ್ರದ ಉಪ ಚುನಾವಣೆ-2024ರ ಮತ ಎಣಿಕೆ ನಡೆಯುತ್ತಿದೆ. ಉಪ ಚುನಾವಣಾ ಕಣದಲ್ಲಿ 6 ಅಭ್ಯರ್ಥಿಗಳಿದ್ದಾರೆ. ಬಿಜೆಪಿ-ಜೆಡಿಎಸ್ ಅಭ್ಯರ್ಥಿ ಬಂಗಾರ ಹನುಮಂತ ಮತ್ತು ಕಾಂಗ್ರೆಸ್ನ ಇ. ಅನ್ನಪೂರ್ಣ ನಡುವೆ ನೇರ ಪೈಪೋಟಿ ನಿರೀಕ್ಷೆ ಮಾಡಲಾಗಿದೆ. 2023ರ ಚುನಾವಣೆಯಲ್ಲಿ ಕಾಂಗ್ರೆಸ್ ಈ ಕ್ಷೇತ್ರದಲ್ಲಿ ಗೆಲುವು ಸಾಧಿಸಿತ್ತು. ಈಗ ಉಪ ಚುನಾವಣೆ ಫಲಿತಾಂಶ ಕುತೂಹಲಕ್ಕೆ ಕಾರಣವಾಗಿದೆ.
ಶನಿವಾರ ಬಳ್ಳಾರಿ ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಕಟ್ಟಡದಲ್ಲಿ ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಿದೆ. ಸಂಡೂರು ಕ್ಷೇತ್ರದಲ್ಲಿ ನವೆಂಬರ್ 13 ರಂದು 253 ಮತಗಟ್ಟೆಗಳಲ್ಲಿ ಮತದಾನ ನಡೆದಿತ್ತು. ಶೇ 76.24 ರಷ್ಟು ಮತದಾನವಾಗಿತ್ತು. ಯಾರಿಗೆ ಜಯ ಎಂಬ ಲೆಕ್ಕಾಚಾರಗಳು ಜೋರಾಗಿದೆ.
ಸಂಡೂರು ಕ್ಷೇತ್ರದಲ್ಲಿ 4ನೇ ಸುತ್ತಿನ ಮತ ಎಣಿಕೆಯಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿ ಇ. ಅನ್ನಪೂರ್ಣ 1001 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ. 13 ಅಂಚೆ ಮತಗಳ ಎಣಿಕೆ ಮುಕ್ತಾಯಗೊಂಡಿದ್ದು, ಮಧ್ಯಾಹ್ನದ ವೇಳೆಗೆ ಇವಿಎಂ ಫಲಿತಾಂಶದ ಚಿತ್ರಣ ಲಭ್ಯವಾಗಲಿದೆ.
2023ರ ಚುನಾವಣೆಯಲ್ಲಿ ಸಂಡೂರು ಕ್ಷೇತ್ರದಲ್ಲಿ ಜಯಗಳಿಸಿದ್ದ ಕಾಂಗ್ರೆಸ್ನ ಇ. ತುಕಾರಾಂ ಲೋಕಸಭೆ ಚುನಾವಣೆಯಲ್ಲಿ ಬಳ್ಳಾರಿ ಕ್ಷೇತ್ರದಲ್ಲಿ ಗೆದ್ದ ಕಾರಣ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರ ಬೇಡಿಕೆಯಂತೆ ಕಾಂಗ್ರೆಸ್ ಅವರ ಪತ್ನಿ ಇ. ಅನ್ನಪೂರ್ಣ ಅವರನ್ನು ಉಪ ಚುನಾವಣೆ ಅಭ್ಯರ್ಥಿಯನ್ನಾಗಿ ಮಾಡಿದೆ.
ಉಪ ಚುನಾವಣೆ ಕಣದಲ್ಲಿ ಕಾಂಗ್ರೆಸ್ನಿಂದ ಇ. ಅನ್ನಪೂರ್ಣ, ಬಿಜೆಪಿಯಿಂದ ಬಂಗಾರ ಹನುಮಂತ. ಕರ್ನಾಟಕ ಜನತಾ ಪಕ್ಷದ ಅಂಜಿನಪ್ಪ. ಎನ್, ಪಕ್ಷೇತರ ಅಭ್ಯರ್ಥಿಗಳಾದ ಟಿ. ಎಂ. ಮಾರುತಿ, ಟಿ. ಎರ್ರಿಸ್ವಾಮಿ, ಎನ್. ವೆಂಕಣ್ಣ ಕಣದಲ್ಲಿದ್ದಾರೆ. ಕಾಂಗ್ರೆಸ್ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರಿಗೆ ಸಂಡೂರು ಉಪ ಚುನಾವಣೆ ಗೆಲ್ಲಿಸಿಕೊಂಡು ಬರುವ ಹೊಣೆಗಾರಿಕೆ ನೀಡಿತ್ತು.
ಸಂಡೂರು ಕ್ಷೇತ್ರದಲ್ಲಿ ಬಿಜೆಪಿ ಗೆದ್ದ ಇತಿಹಾಸವಿಲ್ಲ. ಆದ್ದರಿಂದ ಈ ಉಪ ಚುನಾವಣೆಯಲ್ಲಿ ಗೆಲ್ಲಬೇಕು ಎಂದು ಪಕ್ಷ ತಂತ್ರ ರೂಪಿಸಿತ್ತು. ಮಾಜಿ ಸಚಿವ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ, ಮಾಜಿ ಸಚಿವ ಬಿ. ಶ್ರೀರಾಮುಲು ಅಬ್ಬರದ ಪ್ರಚಾರವನ್ನು ನಡೆಸಿದ್ದರು
ಸಮಯ 9.49ರ ಮಾಹಿತಿಯಂತೆ ಬಿಜೆಪಿ ಅಭ್ಯರ್ಥಿ ಬಂಗಾರ ಹನುಮಂತ ಮುನ್ನಡೆ ಕಾಯ್ದುಕೊಂಡಿದ್ದಾರೆ. ಫಲಿತಾಂಶದ ಕುರಿತು ಸ್ಪಷ್ಟ ಚಿತ್ರಣ 12 ಗಂಟೆ ವೇಳೆಗೆ ಲಭ್ಯವಾಗುವ ನಿರೀಕ್ಷೆ ಇದೆ. ಇ. ಅನ್ನಪೂರ್ಣ ಮೊದಲ ಬಾರಿಗೆ ಚುನಾವಣೆಯನ್ನು ಎದುರಿಸುತ್ತಿದ್ದಾರೆ. ಅವರ ಪತಿ ಇ. ತುಕಾರಾಂ ಕ್ಷೇತ್ರದಲ್ಲಿ 5 ಬಾರಿ ಜಯಗಳಿಸಿದ್ದು, ಕ್ಷೇತ್ರವನ್ನು ಕಾಂಗ್ರೆಸ್ ಪಕ್ಷದ ಭದ್ರಕೋಟೆ ಮಾಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಪರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಸಹ ಪ್ರಚಾರವನ್ನು ನಡೆಸಿದ್ದರು. ಆದರೆ ಟಿಕೆಟ್ ಕೊಡುವ ವಿಚಾರದಲ್ಲಿಯೇ ಕ್ಷೇತ್ರದ ಸ್ಥಳೀಯ ನಾಯಕರಲ್ಲಿ ಅಸಮಾಧಾನವಿತ್ತು. ಇದು ಚುನಾವಣೆ ಮೇಲೆ ಹೇಗೆ ಪ್ರಭಾವ ಬೀರಿದೆ
11ನೇ ಸುತ್ತಿನಮತ ಏಣಿಕೆ ಮುಕ್ತಾಯವಾಗಿದ್ದು ಕಾಂಗ್ರೆಸ್ – 56236 ಬಿಜೆಪಿ – 51739
ಕಾಂಗ್ರೇಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ 5054ಮತಗಳ ಅಂತರದಿಂದ ಮುನ್ನಡೆ.
12ನೇ ಸುತ್ತಿನಲ್ಲಿ ಕಾಂಗ್ರೆಸ್ ಮುನ್ನಡೆ ಸಾಗುತ್ತಿದ್ದು? ಎಂಬುದು ಕುತೂಹಲಕ್ಕೆ ಕಾರಣವಾಗಿದೆ. 2023ರಲ್ಲಿ ಗೆದ್ದ ಕ್ಷೇತ್ರವನ್ನು ಕಾಂಗ್ರೆಸ್ ಉಳಿಸಿಕೊಳ್ಳಲಿದೆಯೇ? ಎಂದು ಕಾದು ನೋಡಬೇಕಿದೆ.