ಬಳ್ಳಾರಿ, ನವೆಂಬರ್ 23: ಸಂಡೂರು ಕ್ಷೇತ್ರದ ಉಪ ಚುನಾವಣೆ-2024ರ ಮತ ಎಣಿಕೆ ನಡೆಯುತ್ತಿದೆ. ಉಪ ಚುನಾವಣಾ ಕಣದಲ್ಲಿ 6 ಅಭ್ಯರ್ಥಿಗಳಿದ್ದು ಸದ್ಯದ ಮಾಹಿತಿಯಂತೆ ಕಾಂಗ್ರೆಸ್ ಮುನ್ನಡೆಯನ್ನು ಕಾಯ್ದುಕೊಂಡಿದೆ. ಬಿಜೆಪಿ-ಜೆಡಿಎಸ್ ಅಭ್ಯರ್ಥಿ ಬಂಗಾರ ಹನುಮಂತ ಮತ್ತು ಕಾಂಗ್ರೆಸ್‌ನ ಇ. ಅನ್ನಪೂರ್ಣ. ಸಂಡೂರು ಕ್ಷೇತ್ರದಲ್ಲಿ 2023ರ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿತ್ತು.
ಶನಿವಾರ ಬಳ್ಳಾರಿ ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಕಟ್ಟಡದಲ್ಲಿ ಮತ ಎಣಿಕೆ ನಡೆಯುತ್ತಿದೆ. ಸಮಯ 10.17ರ ಮಾಹಿತಿಯಂತೆ ಕಾಂಗ್ರೆಸ್‌ನ ಇ. ಅನ್ನಪೂರ್ಣ 38,373 ಮತಗಳನ್ನು ಪಡೆದಿದ್ದಾರೆ. ಬಿಜೆಪಿಯ ಬಂಗಾರ ಹನುಮಂತ 38,340 ಮತಗಳನ್ನು ಪಡೆದ್ದಾರೆ.
ಸಂಡೂರು ಕ್ಷೇತ್ರದಲ್ಲಿ ನವೆಂಬರ್ 13ರಂದು 253 ಮತಗಟ್ಟೆಗಳಲ್ಲಿ ಮತದಾನ ನಡೆದಿತ್ತು. ಶೇ 76.24 ರಷ್ಟು ಮತದಾನವಾಗಿತ್ತು. ಅಂಚೆ ಮತಗಳ ಎಣಿಕೆಯಿಂದಲೂ ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಇ. ಅನ್ನಪೂರ್ಣ ಮುನ್ನಡೆ ಕಾಯ್ದುಕೊಂಡಿದ್ದರು.
ಇಗಾಗಲೆ 17ನೇ ಸುತ್ತಿನ ಮತ ಏಣಿಕೆ ಮುಕ್ತಾಯ ಗೋಂಡಿದ್ದು
ಕಾಂಗ್ರೇಸ್ ಮುನ್ನಡೆ ಕಾಯ್ದುಕೋಂಡು ಬಂದಿದೆ
ಇ. ತುಕಾರಾಂ ಸಂಡೂರು ಕ್ಷೇತ್ರದಲ್ಲಿ 5 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ನಾಯಕರ ಬಳಿ ಉಪ ಚುನಾವಣೆಗೆ ಪತ್ನಿಗೆ ಟಿಕೆಟ್ ಕೊಡಿಸುವಲ್ಲಿ ಅವರು ಸಫಲವಾಗಿದ್ದಾರೆ. ಗೆಲ್ಲಿಸಿಕೊಂಡು ಬರುವ ಜವಾಬ್ದಾರಿಯನ್ನು ಅವರೇ ತೆಗೆದುಕೊಂಡಿದ್ದರು. ಕಾರ್ಮಿಕ ಸಚಿವ ಸಂತೋಷ್ ಲಾಡ್ ಸಹ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವಿಗೆ ತಂತ್ರ ರೂಪಿಸಿ ಪ್ರಚಾರವನ್ನು ನಡೆಸಿದ್ದಾರೆ. ಜನಾರ್ದನ ರೆಡ್ಡಿ, ಬಿ. ಶ್ರೀರಾಮುಲು ಸಂಡೂರು ಉಪ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ. ಆದ್ದರಿಂದ ಸಂಡೂರು ಕದನ ಕುತೂಹಲಕ್ಕೆ ಕಾರಣವಾಗಿದೆ. ಇವಿಎಂ ಮತಗಳ ಎಣಿಕೆ ಕಾರ್ಯ ನಡೆಯುತ್ತಿದ್ದು, 6 ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದೆ. ಬಿಜೆಪಿಯ ಬಂಗಾರ ಹನುಮಂತ ಪರವಾಗಿ ಬಿ. ಶ್ರೀರಾಮುಲು, ಜನಾರ್ದನ ರೆಡ್ಡಿ ಅಬ್ಬರದ ಪ್ರಚಾರ ನಡೆಸಿದ್ದಾರೆ. ಶನಿವಾರ ಬಿಗಿ ಪೊಲೀಸ್ ಬಂದೋಬಸ್ತ್‌ನಲ್ಲಿ ಮತ ಎಣಿಕೆ ನಡೆಯುತ್ತಿದೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ 2023 ರ ಕಲಂ 163 ರಡಿ ಜಿಲ್ಲೆಯಾದ್ಯಂತ ಪ್ರತಿಬಂಧಕಾಜ್ಞೆ ವಿಧಿಸಲಾಗಿದೆ.
16ನೇ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ 8881 ಮತಗಳ ಮುನ್ನಡೆ ಕಾಂಗ್ರೇಸ್- 83368 ಬಿಜೆಪಿ- 74487
ಸಂಡೂರು ಕ್ಷೇತ್ರದಲ್ಲಿ ಯಾರಿಗೆ ಎಷ್ಟು ಮತಗಳು? * ಕಾಂಗ್ರೆಸ್‌ನ ಇ. ಅನ್ನಪೂರ್ಣ – 50692 * ಬಿಜೆಪಿಯ ಬಂಗಾರ ಹನುಮಂತ – 47204 * ಕರ್ನಾಟಕ ಜನತಾ ಪಕ್ಷದ ಅಂಜಿನಪ್ಪ – 298 * ಪಕ್ಷೇತರ ಎನ್. ವೆಂಕಣ್ಣ – 219 * ಪಕ್ಷೇತರ ಟಿ. ಎರ್ರಿಸ್ವಾಮಿ – 117 * ಪ್ಷೇತರ ಟಿ. ಎಂ. ಮಾರುತಿ – 106 ಮತಗಳು