Ad image

ಬಳ್ಳಾರಿ: ‘ಸಂವಿಧಾನ ದಿನಾಚರಣೆ’ ಕಾರ್ಯಕ್ರಮದಲ್ಲಿ ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜ ಪ್ರತಿಯೊಬ್ಬರೂ ಸಂವಿಧಾನದ ಆಶೋತ್ತರ ಅರಿಯಬೇಕು

Vijayanagara Vani
ಬಳ್ಳಾರಿ: ‘ಸಂವಿಧಾನ ದಿನಾಚರಣೆ’ ಕಾರ್ಯಕ್ರಮದಲ್ಲಿ ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜ ಪ್ರತಿಯೊಬ್ಬರೂ ಸಂವಿಧಾನದ ಆಶೋತ್ತರ ಅರಿಯಬೇಕು

ಬಳ್ಳಾರಿ,ನ.26
ಭಾರತವು ವಿವಿಧತೆಯಲ್ಲಿ ಏಕತೆ ಹೊಂದಿದ ದೇಶವಾಗಿದ್ದು, ಬಾಬಾ ಸಾಹೇಬ ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದ ಪೀಠಿಕೆ, ಆಶಯಗಳನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕು ಎಂದು ಡಾ.ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ನಲ್ಲಚೇರುವು ಪ್ರದೇಶದ ಮಹರ್ಷಿ ವಾಲ್ಮೀಕಿ ಭವನದಲ್ಲಿ ಮಂಗಳವಾರ ಏರ್ಪಡಿಸಿದ್ದ ‘ಸಂವಿಧಾನ ದಿನಾಚರಣೆ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನ ರಚಿಸಲು 2 ವರ್ಷ, 11 ತಿಂಗಳು, 18 ದಿನ ಅವಧಿ ತೆಗೆದುಕೊಂಡಿದ್ದರು. ಭಾರತದ ಸಂವಿಧಾನವು ರಚನಾ ಸಭೆಯಲ್ಲಿ ಅಂಗೀಕೃತಗೊ0ಡು ಇಂದಿಗೆ 75 ವರ್ಷವಾಗಿದ್ದು, ನಾವೆಲ್ಲರೂ ಬಾಬಾ ಸಾಹೇಬರನ್ನು ಗೌರವದಿಂದ ಸ್ಮರಿಸಬೇಕು ಎಂದು ಅವರು ತಿಳಿಸಿದರು.
ಸಂವಿಧಾನ ಪುಸ್ತಕವನ್ನು ಪ್ರತಿಯೊಬ್ಬರೂ ಓದಬೇಕು. ಸಂವಿಧಾನದ ಪೀಠಿಕೆ, ಆಶೋತ್ತರಗಳನ್ನು ಜನರಿಗೆ ತಿಳಿಸಲು ಗ್ರಾಪಂ ಮಟ್ಟದಲ್ಲಿಯೂ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಸರ್ಕಾರವು ‘ಸಂವಿಧಾನ ಓದು’ ಕಿರು ಪುಸ್ತಕಗಳನ್ನು ಮುದ್ರಿಸಿ ಮನೆ ಬಾಗಿಲಿಗೆ ವಿತರಿಸುವ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದರು.
ಬಳ್ಳಾರಿ ನಗರದ ಡಾ.ರಾಜ್‌ಕುಮಾರ್ ಉದ್ಯಾನವನದಲ್ಲಿ ಕನ್ನಡ ಮತ್ತು ಆಂಗ್ಲ ಮಾಧ್ಯಮದಲ್ಲಿ ಸರ್ಕಾರದಿಂದ ಅನುಮೋದಿತ (ಅಂದಾಜು 10*12 ಅಡಿ ಆಳತೆಯ) ಭಾರತ ಸಂವಿಧಾನ ಪೀಠಿಕೆಯನ್ನು ಗ್ರಾನೈಟ್ ಕಲ್ಲಿನಲ್ಲಿ ಕೆತ್ತಿಸಿ 26ನೇ ಜನವರಿ 2025ರಂದು ಉದ್ಘಾಟಿಸಲಾಗುವುದು ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಮಾತನಾಡಿ, ದೇಶದಲ್ಲಿ ಸಂವಿಧಾನವು ಸವೋಚ್ಛ ಕಾನೂನು ಆಗಿದೆ. ಸಂವಿಧಾನವು ಮಹಾನ್ ವ್ಯಕ್ತಿಗಳ ಪರಿಶ್ರಮದಿಂದ ಲಭಿಸಿದೆ. ಸಂವಿಧಾನದಲ್ಲಿ ಎಲ್ಲಾ ಸಿದ್ಧಾಂತ ಅಡಗಿದ್ದು, ನಮಗೆ ಎಲ್ಲಾ ಬಗೆಯ ಸ್ವಾತಂತ್ರö್ಯ ಸಿಕ್ಕಿದೆ ಎಂದರೆ ಅದು ಸಂವಿಧಾನದಿ0ದ ಮಾತ್ರ. ಹಾಗಾಗಿ ಪ್ರತಿದಿನ ಸಂವಿಧಾನವನ್ನು ನೆನಪಿಸಿಕೊಳ್ಳಬೇಕು ಎಂದು ಹೇಳಿದರು.

- Advertisement -
Ad imageAd image


ಸಸಅ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತç ಸ್ನಾತಕೋತ್ತರ ಅಧ್ಯಯನ ವಿಭಾಗದ ಮುಖ್ಯಸ್ಥರು ಹಾಗೂ ಸಹ ಪ್ರಾಧ್ಯಾಪಕರಾದ ಡಾ.ಹೊನ್ನೂರು ಆಲಿ.ಐ ಅವರು ವಿಶೇಷ ಉಪನ್ಯಾಸದಲ್ಲಿ ಮಾತನಾಡಿ, ಭಾರತವು ಸರ್ವಧರ್ಮೀಯರನ್ನು ಒಳಗೊಂಡ ದೇಶವಾಗಿದೆ. ಸಂವಿಧಾನದಡಿ ಸಾಮಾಜಿಕವಾಗಿ, ಆರ್ಥಿಕವಾಗಿ, ರಾಜಕೀಯವಾಗಿ ನಾವೆಲ್ಲರೂ ಸಮಾನರು ಎಂದು ಸಂವಿಧಾನದ ಪ್ರಸ್ತಾವನೆ ಬಿಂಬಿಸುತ್ತದೆ ಎಂದು ತಿಳಿಸಿದರು.
ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು ಹುಟ್ಟಿನಿಂದ ಸಾಯುವವರೆಗೂ ಎಲ್ಲಾ ರಂಗಗಳಲ್ಲಿ ಸಮಾನತೆಗಾಗಿ ಹೋರಾಡಿದವರಾಗಿದ್ದರು ಎಂದರು.
ಮತ್ತೋರ್ವ ಕಲ್ಯಾಣ ಕರ್ನಾಟಕ ಇತಿಹಾಸ ರಚನಾ ಸಮಿತಿಯ ತಜ್ಞರು ಹಾಗೂ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಸಮಾಜಶಾಸ್ತç ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ರಾಜೇಂದ್ರ ಪ್ರಸಾದ್.ಎನ್.ಎಲ್ ಅವರು ಸಂವಿಧಾನ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು ಸಂವಿಧಾನದ ಪೀಠಿಕೆ ಭೋದಿಸಿದರು. ಇದೇ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ ‘ಸಂವಿಧಾನ ಓದು’ ಪುಸ್ತಕಗಳನ್ನು ಗಣ್ಯರು ವಿತರಿಸಿದರು.
ಕಾರ್ಯಕ್ರಮಕ್ಕೂ ಮುನ್ನ ನಗರದ ಮೊದಲ ರೈಲ್ವೆ ಗೇಟ್ ಬಳಿಯ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ನಲ್ಲಚೇರುವು ಪ್ರದೇಶದ ಡಾ.ಬಾಬು ಜಗನಜೀವನ ರಾಂ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಪುಷ್ಪನಮನ ಸಲ್ಲಿಸಿದರು. ಬಳಿಕ ವಾಲ್ಮೀಕಿ ಮುಂಭಾಗ ಬಸ್‌ಗಳಿಗೆ ಸಂವಿಧಾನದ ಪ್ರಸ್ತಾವನೆಯ ಭಿತ್ತಿಚಿತ್ರ ಅಂಟಿಸಿದರು. ಸಂವಿಧಾನ ದಿನಾಚರಣೆ ಕಾರ್ಯಕ್ರಮ ಅಂಗವಾಗಿ ಸಹಿ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಚಿದಾನಂದಪ್ಪ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಬಿ.ಮಲ್ಲಿಕಾರ್ಜುನ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಮಮತಾ.ಪಿ., ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಎಂ.ಶಿವಾಜಿರಾವ್ ಸೇರಿದಂತೆ ಮಹಾನಗರ ಪಾಲಿಕೆಯ ಸದಸ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು, ವಸತಿ ನಿಲಯಗಳ ಪಾಂಶುಪಾಲರು, ನಿಲಯ ಪಾಲಕರು, ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳು ಹಾಗೂ ಇನ್ನಿತರರು ಉಪಸ್ಥಿತರಿದ್ದರು.

                                                                                                                                                                                                       

Share This Article
error: Content is protected !!
";