Ad image

ಡ್ರೋನ್ ತರಬೇತಿಗಾಗಿ ಅರ್ಜಿ ಆಹ್ವಾನ

Vijayanagara Vani

ಬಳ್ಳಾರಿ,ಡಿ.03

- Advertisement -
Ad imageAd image

ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ಡ್ರೋನ್ ಆಧಾರಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಉದ್ಯೋಗ ಪಡೆಯಲು ಇಚ್ಚಿಸುವ ಪರಿಶಿಷ್ಟ ಪಂಗಡದ ಯುವಕ ಮತ್ತು ಯುವತಿಯರಿಂದ ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾಗಿರಬೇಕು, 18 ರಿಂದ 45 ವರ್ಷ ವಯೋಮಾನದವರಾಗಿರಬೇಕು, ಕುಟುಂಬದ ಆದಾಯ ರೂ.2.50 ಲಕ್ಷ ಒಳಗಿರಬೇಕು, ಅಲೆಮಾರಿ, ಅರೆ-ಅಲೆಮಾರಿ, ಸೂಕ್ಷö್ಮ, ಅತೀ ಸೂಕ್ಷö್ಮ ಪರಿಶಿಷ್ಟ ವರ್ಗದ ಸಮುದಾಯದ ಯುವಕ ಮತ್ತು ಯುವತಿಯರಿಗೆ ಆದ್ಯತೆ ನೀಡಲಾಗುವುದು.
ಅರ್ಜಿಗಳನ್ನು ಬಳ್ಳಾರಿ, ಸಂಡೂರು, ಸಿರುಗುಪ್ಪ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಪಡೆಯಬಹುದು. ಅರ್ಜಿ ಸಲ್ಲಿಸಲು ಡಿ.10 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಲ್ಲಚೇರುವು ಪ್ರದೇಶದ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ದಿವಾಕರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
————-

Share This Article
error: Content is protected !!
";