ಬಳ್ಳಾರಿ,ಡಿ.03
ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ಎಸ್‌ಎಮ್‌ಇ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ವೈಯಕ್ತಿಕ ಫಲಾನುಭವಿ, ಪಾಲುದಾರಿಕೆ ಸಂಸ್ಥೆ, ಕಂಪನಿ, ಜವಳಿ ಸಹಕಾರಿ ಸಂಘ-ಸಂಸ್ಥೆಗಳು ಜವಳಿ ಕ್ಷೇತ್ರಕ್ಕೆ ಸಂಬಂಧಿಸಿದ ಸಣ್ಣ ಮತ್ತು ಅತಿಸಣ್ಣ (ಎಸ್‌ಎಮ್‌ಇ) ಘಟಕ ಪ್ರಾರಂಭಿಸಲು ಆಸಕ್ತ ಉದ್ದಿಮೆದಾರರಿಂದ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಗೆ ವಿಶೇಷ ಘಟಕ ಯೋಜನೆಯಡಿ ಭೌತಿಕ 03 ಹಾಗೂ ಗಿರಿಜನ ಉಪ ಯೋಜನೆಯಡಿ ಭೌತಿಕ 02 ಸೇರಿ ಒಟ್ಟು 05 ಭೌತಿಕ ಗುರಿಯನ್ನು ನಿಗದಿಪಡಿಸಲಾಗಿದ್ದು, ಯಂತ್ರೋಪಕರಣ ಗಳೊಂದಗೆ ಸ್ಥಾಪಿಸುವ ಜವಳಿ ಘಟಕಗಳಿಗೆ ಸರ್ಕಾರದಿಂದ ಶೇ.75 ರಷ್ಟು ಬಂಡವಾಳ ಹೂಡಿಕೆ ಸಹಾಯಧನ ನೀಡಲಾಗುತ್ತದೆ.
ಪ್ರಸ್ತಾವನೆ ಸಲ್ಲಿಸಲು ಡಿ.20 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಗರದ ಅನಂತಪುರ ರಸ್ತೆಯ ನೂತನ ಜಿಲ್ಲಾಡಳಿತ ಭವನದ ‘ಎ’ ಬ್ಲಾಕ್‌ನ ಮೊದಲನೇ ಮಹಡಿಯ ಕೊಠಡಿ ಸಂ.29ರ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರ ಕಚೇರಿ ಅಥವಾ ದೂ.08392-266075 ಗೆ ಸಂಪರ್ಕಿಸಬಹುದು ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.