Ad image

ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕ ಜೆ.ಎನ್.ಗಣೇಶ್ ಅಭಿಮತ ವಿಕಲಚೇತನರು ಶಕ್ತಿ ಮೀರಿ ಜೀವನ ಕಟ್ಟಿಕೊಳ್ಳಲು ಸಬಲರು

Vijayanagara Vani
ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕ ಜೆ.ಎನ್.ಗಣೇಶ್ ಅಭಿಮತ ವಿಕಲಚೇತನರು ಶಕ್ತಿ ಮೀರಿ ಜೀವನ ಕಟ್ಟಿಕೊಳ್ಳಲು ಸಬಲರು

ಬಳ್ಳಾರಿ,ಡಿ.03

- Advertisement -
Ad imageAd image

ಸಮಾಜದಲ್ಲಿ ವಿಕಲಚೇತನರು ತಮ್ಮ ಶಕ್ತಿ ಮೀರಿ ಜೀವನ ಕಟ್ಟಿಕೊಳ್ಳಲು ಸಬಲರಾಗಿದ್ದು, ಇತರರಂತೆ ಉನ್ನತ ಸ್ಥಾನಕ್ಕೇರುವ ಛಲ ಹೊಂದಿರುತ್ತಾರೆ ಎಂದು ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಗಳ ಪ್ರಾಧಿಕಾರ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ, ವಿಕಲಚೇತನರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು ಇವರ ಸಂಯುಕ್ತಾಶ್ರಯದಲ್ಲಿ ನಗರದ ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಮಂಗಳವಾರ ಏರ್ಪಡಿಸಿದ್ದ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ದೈಹಿಕ-ಮಾನಸಿಕವಾಗಿ ಸದೃಢ ಇರುವ ಮನುಷ್ಯರೇ ಬೇಸತ್ತು, ಕಷ್ಟಕರ ಜೀವನ ನಡೆಸುತ್ತಾರೆ. ಆದರೆ ವಿಕಲಚೇತನರು ಕಷ್ಟ-ನೋವು, ಅಸಹಾಯಕತೆಯ ಸಂದರ್ಭದಲ್ಲಿಯೂ ಯಾವುದೇ ಬೆಂಬಲವಿಲ್ಲದೆ ಜೀವನ ನಡೆಸಲು ಶಕ್ತರಾಗಿರುತ್ತಾರೆ ಎಂದರು.
ವಿಕಲಚೇತನರಲ್ಲಿ ಒಗ್ಗಟ್ಟು-ಒಮ್ಮತದ ಭಾವನೆಯಿದ್ದು, ಸರ್ಕಾರ ರೂಪಿಸಿರುವ ಯೋಜನೆ ಅಥವಾ ಕಾರ್ಯಕ್ರಮಗಳ ಸದುಪಯೋಗ ಪಡೆದುಕೊಂಡು, ಆರ್ಥಿಕವಾಗಿ ಸಬಲರಾಗಬೇಕು ಎಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್ ಅವರು ಮಾತನಾಡಿ, ಸಮಾಜದಲ್ಲಿ ಅಂಗವೈಕಲ್ಯತೆಯಿಂದ ಕೂಡಿದ ಜನರನ್ನು ಕಾಣುವ ದೃಷ್ಠಿ ಬದಲಾಯಿಸುವ ಕಾರ್ಯವಾಗಬೇಕು. ಕರುಣೆ ತೋರದೇ ಅವರನ್ನು ಸಮಾನತೆಯಿಂದ ಕಾಣಬೇಕು ಎಂದು ಹೇಳಿದರು.


ಅಂಗವಿಕಲರೂ ಸಹ ಸಾಧನೆ ಮಾಡಲು ಅರ್ಹರಾಗಿದ್ದು, ವಿಜ್ಞಾನಿ ಸ್ಟೀಫೆನ್ ಹಾಕಿಂಗ್ ಅವರು ತಮ್ಮ ಅಂಗ ವೈಕಲ್ಯತೆಯನ್ನು ಮೆಟ್ಟಿ ನಿಂತು ಸಾಧನೆ ಶಿಖರ ಏರಿದ್ದರು. ಅದರಂತೆ ಎಲ್ಲಾ ವಿಶೇಷಚೇತನರು ಕಲೆ, ನೃತ್ಯ, ಆಟ ಸೇರಿದಂತೆ ಪ್ರತಿಯೊಂದು ಕ್ಷೇತ್ರದಲ್ಲಿ ಸಾಧನೆ ಮಾಡಿ, ಹಸನ್ಮುಖ-ಲವಲವಿಕೆಯಿಂದ ಜೀವನ ನಡೆಸಬೇಕು ಎಂದು ಹುರಿದುಂಬಿಸಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಧೀಶರಾದ ರಾಜೇಶ್.ಎನ್ ಹೊಸಮನೆ ಅವರು ಮಾತನಾಡಿ, ಅಂಗವೈಕಲ್ಯ ಶಾಪವಲ್ಲ. ವಿಕಲಚೇತನರು ಹತಾಶೆಗೊಳಗಾಗದೆ ಆತ್ಮಸ್ಥೆöರ್ಯದಿಂದ ತಮ್ಮ ಹಕ್ಕುಗಳನ್ನು ಪಡೆದುಕೊಂಡು ಮುನ್ನಡೆಯಬೇಕು ಎಂದು ಹೇಳಿದರು.
ಅಂಗವಿಕಲತೆಯಿಂದ ಬಳಲುತ್ತಿರುವವರು ನ್ಯೂನತೆಗಳ ಬಗ್ಗೆ ಚಿಂತಿಸದೆ, ಇಚ್ಚಾಶಕ್ತಿಯಿಂದ ಜೀವಿಸಬೇಕು. ವಿಕಲಚಚೇತನರನ್ನು ಮುಖ್ಯ ವಾಹಿನಿಗೆ ತರುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ತಿಳಿಸಿದರು.
ಇದೇ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ವಿಕಲಚೇತನರಿಗೆ ಸನ್ಮಾನಿಸಿ ಗೌರವಿಸಲಾಯಿತು ಹಾಗೂ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿಜೇತರಾದ ವಿಕಲಚೇತನರಿಗೆ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಪುಟ್ಟರಾಜ ಗವಾಯಿ ಅವರ ತಂಡವು ಸುಗಮ ಸಂಗೀತ ನೀಡಿದರು. ವಿಕಲಚೇತನರ, ಮಕ್ಕಳ ನೃತ್ಯಗಳು ಕಾರ್ಯಕ್ರಮದ ವಿಶೇಷವಾಗಿತ್ತು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಮೇಯರ್ ಮುಲ್ಲಂಗಿ ನಂದೀಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವಿಜಯ್ ಕುಮಾರ್ ಕೆ.ಹೆಚ್., ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಕಲ್ಯಾಣಾಧಿಕಾರಿ ಗೋವಿಂದಪ್ಪ ಹೆಚ್.ಎಂ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸ್ವಯಂ ಸೇವಕರು, ವಿಕಲಚೇತನರು ಹಾಗೂ ಇತರರು ಉಪಸ್ಥಿತರಿದ್ದರು.
———-

Share This Article
error: Content is protected !!
";