ಸಿರುಗುಪ್ಪ. ಡಿ. 05 ). ನಗರದ ನೂರು ಹಾಸಿಗೆಗಳ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಮುಖ್ಯ ಆಡಳಿತ ವೈದ್ಯಾಧಿಕಾರಿ ಡಾ. ಈರಣ್ಣ ಆಸ್ಪತ್ರೆಯಲ್ಲಿಯೇ ಕುಡಿದು ಬಂದು ತಮ್ಮ ಸಿಬ್ಬಂದಿಯೊಂದಿಗೆ ವಾಗ್ವಾದ ನಡೆಸಿ ಟೇಬಲ್ ಅನ್ನು ಪುಡಿಪುಡಿಯಾಗುವಂತೆ ಕೈಯಿಂದ ಕುಟ್ಟಿ ಗಲಾಟೆ ಮಾಡಿದ ವಿಡಿಯೋ ಕಳೆದ ಮೂರು ದಿನಗಳಿಂದ ತಾಲೂಕಿನಲ್ಲಿ ಫುಲ್ ವೈರಲ್ ಆಗುತ್ತಿದ್ದು, ಮುಖ್ಯ ಆಡಳಿತ ವೈದ್ಯಾಧಿಕಾರಿಯ ಈ ವರ್ತನೆಯನ್ನು ಸಾರ್ವಜನಿಕರೊಬ್ಬರು ಮೊಬೈಲ್ ನಲ್ಲಿ ಸೆರೆಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು ಈ ವಿಡಿಯೋ ಈಗ ಎಲ್ಲೆಡೆ ವ್ಯಾಪಕ ಚರ್ಚೆಗೆ ಕಾರಣವಾಗಿದ್ದು, ಡಾ. ಈರಣ್ಣ ಅವರ ವರ್ತನೆಯನ್ನು ಖಂಡಿಸಿದ್ದು, ಇಂತಹ ವೈದ್ಯರು ನಮ್ಮ ಆಸ್ಪತ್ರೆಗೆ ಬೇಡ ಎಂದು ಜಾಲತಾಣಗಳಲ್ಲಿ ಸಾರ್ವಜನಿಕರು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಸಿರುಗುಪ್ಪ ಸರ್ಕಾರಿ ಆಸ್ಪತ್ರೆಯ ಮುಖ್ಯ ಆಡಳಿತ ವೈದ್ಯಾಧಿಕಾರಿ ಡಾ.ಈರಣ್ಣ ಅವರ ಕಾರ್ಯ ವೈಖರಿಯ ಬಗ್ಗೆ ಈಗಾಗಲೇ ಸಮಗ್ರವಾಗಿ ಪರಿಶೀಲನೆ ನಡೆಸಿ ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ವರದಿ ಸಲ್ಲಿಸಲಾಗಿದೆ.
ಮುಖ್ಯ ಆಡಳಿತ ವೈದ್ಯಾಧಿಕಾರಿಯ ಗಲಾಟೆಯ ವಿಡಿಯೋ ಫುಲ್ ವೈರಲ್, ಸಾರ್ವಜನಿಕರಿಂದ ವ್ಯಾಪಕ ಖಂಡನೆ.
ಅಲ್ಲದೆ ಈ ವೈದ್ಯರನ್ನು ಹಚ್ಚೋಳ್ಳಿಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವರ್ಗಾವಣೆ ಮಾಡಲಾಗಿದೆ, ಆರೋಗ್ಯ ಇಲಾಖೆಯ ಪ್ರಿನ್ಸಿಪಲ್ ಸೆಕ್ರೆಟರಿ ಅವರಿಗೆ ಘಟನೆಯ ಬಗ್ಗೆ ವಿವರವಾದ ಮಾಹಿತಿಯನ್ನು ಸಲ್ಲಿಸಲಾಗುವುದು ಎಂದು ತಾಲೂಕು ಆರೋಗ್ಯ ಅಧಿಕಾರಿ ಡಾ. ವೀರೇಂದ್ರ ಕುಮಾರ್ ತಿಳಿಸಿದ್ದಾರೆ.