ಶಿವಮೊಗ್ಗ : ಡಿಸೆಂಬರ್ 18; : ಜಿಲ್ಲಾ ನ್ಯಾಯಾಂಗ, ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಹಿಳಾ ಸಬಲೀಕರಣ ಘಟಕ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಹಾಗೂ ದಿ. ಶಿವಮೊಗ್ಗ ಮಲ್ಟಿಪರ್ಪಸ್ ಸೋಶಿಯಲ್ ಸರ್ವಿಸ್ ಸೊಸೈಟಿ, ಶಿವಮೊಗ್ಗ ಇವರುಗಳ ಸಂಯುಕ್ತಾಶ್ರಯದಲ್ಲಿ ಡಿ. 19 ಮತ್ತು 20 ರಂದು ಬೆಳಗ್ಗೆ 10.00 ಕ್ಕೆ ಆಲ್ಕೋಳದ ದಿ ಶಿವಮೊಗ್ಗ ಮಲ್ಟಿಪರ್ಪಸ್ ಸೋಶಿಯಲ್ ಸರ್ವಿಸ್ ಸೊಸೈಟಿ, (ಚೈತನ್ಯ)ದಲ್ಲಿ ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆ-2005ರ ಅನುಷ್ಠಾನದಲ್ಲಿ ಭಾಗಿದಾರ ಇಲಾಖೆಗಳ ಪಾತ್ರದ ಕುರಿತಂತೆ ಎರಡು ದಿನಗಳ ಜಿಲ್ಲಾ ಮಟ್ಟದ ಓರಿಯಂಟೇಷನ್ ತರಬೇತಿ ಕಾರ್ಯಾಗಾರವನ್ನು ಏರ್ಪಡಿಸಲಾಗಿದೆ.
ಕಾರ್ಯಗಾರದ ಉದ್ಘಾಟನೆಯನ್ನು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿ.ಕಾ.ಸೇ.ಪ್ರಾ.ದ ಸದಸ್ಯ ಕಾರ್ಯದರ್ಶಿ ಸಂತೋಷ್ ಎಂ.ಎಸ್. ನೆರವೇರಿಸಲಿದ್ದಾರೆ. ಜಿಲ್ಲಾಧಿಕಾರಿ ಹೇಮಂತ್ ಎನ್. ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಪೊಲೀಸ್ ಅಧೀಕ್ಷಕ ಜಿ.ಕೆ. ಮಿಥುನ್ ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಬಿ.ಹೆಚ್. ಕೃಷ್ಣಪ್ಪ, ಎಸ್.ಎಂ.ಎಸ್.ಎಸ್.ಎಸ್. ನಿರ್ದೇಶಕ ಫಾಕರ್ ಪಿಯುಸ್ ಡಿ’ಸೋಜ ಇವರುಗಳು ಉಪಸ್ಥಿತರಿರುತ್ತಾರೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಟರಾಜ್ ಕೆ.ಎಸ್. ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಶಶಿರೇಖಾ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಗಳಾಗಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿ.ಕಾ.ಸೇ.ಪ್ರಾ.ದ ಸದಸ್ಯ ಕಾರ್ಯದರ್ಶಿ ಸಂತೋಷ್ ಎಂ.ಎಸ್., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಬಿ.ಹೆಚ್. ಕೃಷ್ಣಪ್ಪ, ಕಟೀಲು ಅಶೋಕ್ ಪೈ ಕಾಲೇಜಿನ ಪ್ರಾಂಶುಪಾಲೆ ಡಾ. ಸಂಧ್ಯಾ ಕಾವೇರಿ, ಶ್ರೀಧರ್ ನರ್ಸಿಂಗ್ ಹೋಂನ ಮಾನಸಿಕ ವೈದ್ಯಾಧಿಕಾರಿ ಡಾ. ಕೆ.ಎಸ್. ಶುಭ್ರತಾ, ಮೆಗ್ಗಾನ್ ಬೋಧನಾ ಆಸ್ಪತ್ರೆ ಫೋರೆನ್ಸಿಕ್ ಮೆಡಿಸಿನ್ ವಿಭಾಗದ ಹಿರಿಯ ತಜ್ಞ ವೈದ್ಯ ಡಾ. ಗಿರೀಶ್ ಹೆಚ್.ಎಸ್., ಶಿವಮೊಗ್ಗ ನಗರದ ಡಿ.ಎಸ್.ಪಿ. ಬಾಬು ಆಂಜನಪ್ಪ, ಸಖಿ ಒನ್ ಸ್ಟಾಪ್ ಸೆಂಟರ್‌ನ ಕಾನೂನು ಸಲಹೆಗಾರರು ಶ್ರೀ ನಿಲಾಕ್ಷಿ ಜಿ.ಎನ್. ಇವರುಗಳು ಭಾಗವಹಿಸಲಿದ್ದಾರೆ.
——–