ಶಿವಮೊಗ್ಗ, ಡಿಸೆಂಬರ್ 19() ಶಿವಮೊಗ್ಗ ವಿಭಾಗದಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರ ಪ್ರತಿನಿಧಿಗಳನ್ನು ನಿಯುಕ್ತಿಗಳೊಳಿಸಲು ನೇರ ಸಂದರ್ಶನ ಏರ್ಪಡಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ತಮ್ಮ ಇತ್ತೀಚಿನ ಭಾವಚಿತ್ರದೊಂದಿಗೆ ಸ್ವವಿವರ, ಶೈಕ್ಷಣಿಕ ಪ್ರಮಾಣಪತ್ರ ನಕಲುಗಳೊಂದಿಗೆ ದಿ: 07-01-2025 ಮತ್ತು 08-01-2025 ರಂದು ಬೆಳಿಗ್ಗೆ 11 ಗಂಟೆಗೆ ಅಂಚೆ ಅಧೀಕ್ಷಕರ ಕಚೇರಿ, ಕೋಟೆ ರಸ್ತೆ, ಶಿವಮೊಗ್ಗ ವಿಭಾಗ, ಶಿವಮೊಗ್ಗ-2 ಇಲ್ಲಿ ನಡೆಯಲಿರುವ ನೇರ ಸಂದರ್ಶನಕ್ಕೆ ಹಾಜರಾಗಬೇಕು.
ಅಭ್ಯರ್ಥಿಗಳು 10 ನೇ ತರಗತಿ ಉತ್ತೀರ್ಣರಾಗಿರಬೇಕು. ಕನಿಷ್ಟ 18 ವರ್ಷ ಮತ್ತು ಗರಿಷ್ಟ ಮಿತಿ ಇರುವುದಿಲ್ಲ. ನಿರುದ್ಯೋಗಿ ಹಾಗೂ ಸ್ವಯಂ ಉದ್ಯೋಗನಿರತ ಯುವಕರು, ವಿಮಾ ಕಂಪನಿಗಳ ಮಾಜಿ ಏಜೆಂಟರು ಹಾಗೂ ಸಲಹೆಗಾರರು, ಮಾಜಿ ಸೈನಿಕರು, ಅಂಗನವಾಡಿ ಕಾರ್ಯಕರ್ತೆಯರು, ಮಹಿಳಾ ಮಂಡಳದ ಕಾರ್ಯಕರ್ತೆಯರು, ನಿವೃತ್ತ ಪ್ರಧಾನ ಮತ್ತು ಗ್ರಾಮ ಪಂಚಾಯಿತಿಯ ಸದಸ್ಯರು ಹಾಗೂ ಅಂಚೆ ವಿಭಾಗದ ಮುಖ್ಯಸ್ಥರಿಗೆ ಸಮಂಜಸ ವೆಂದು ಕಂಡುಬಂದ ಯಾವುದೇ ಅಭ್ಯರ್ಥಿಗಳಿಗೆ ಆಯ್ಕೆಯಾದ ಪಕ್ಷದಲ್ಲಿ ಅವಕಾಶ ನೀಡಲಾಗುವುದು.
ಆಯ್ಕೆಯಾದ ಅಭ್ಯರ್ಥಿಗಳು ರೂ.5000/- ಗಳನ್ನು ರಾಷ್ಟ್ರೀಯ ಉಳಿತಾಯ ಪತ್ರ ಅಥವಾ ಕಿಸಾನ್ ವಿಕಾಸ ಪತ್ರದ ರೂಪದಲ್ಲಿ ಭದ್ರತಾ ಠೇವಣಿಯನ್ನು ಇಡಬೇಕಾಗುತ್ತದೆ. ಆಯ್ಕೆಯಾದ ನೇರ ಪ್ರತಿನಿಧಿಗಳಿಗೆ ಅವರು ಮಾಡಿದ ವ್ಯವಹಾರಕ್ಕೆ ತಕ್ಕಂತೆ ಇಲಾಖೆಯಿಂದ ಕಾಲಕಾಲಕ್ಕೆ ನಿಗದಿಪಡಿಸಿದ ಪ್ರೋತ್ಸಾಹಧನ ನೀಡಲಾಗುವುದು. ಇತರೆ ಟಿಎ/ಡಿಎ ಇತ್ಯಾದಿ ಭತ್ಯೆ ಇರುವುದಿಲ್ಲ.
ಹೆಚ್ಚಿನ ಮಾಹಿತಿಗೆ ಅಂಚೆ ಜೀವ ವಿಮಾ ಅಭಿವೃದ್ದಿ ಅಧಿಕಾರಿ ಮೊ.ಸಂ: 9620455929 ನ್ನು ಸಂಪರ್ಕಿಸಬಹುದೆಂದು ಶಿವಮೊಗ್ಗ ವಿಭಾಗದ ಅಂಚೆ ಅಧೀಕ್ಷಕರು ತಿಳಿಸಿದ್ದಾರೆ.