ಗ್ರಾಮ ಆಡಳಿತ ಅಧಿಕಾರಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ; ಆಕ್ಷೇಪಣೆ ಸಲ್ಲಿಸಲು ಜ.23 ರವರೆಗೆ ಅವಕಾಶ.

Vijayanagara Vani
ಗ್ರಾಮ ಆಡಳಿತ ಅಧಿಕಾರಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ; ಆಕ್ಷೇಪಣೆ ಸಲ್ಲಿಸಲು ಜ.23 ರವರೆಗೆ ಅವಕಾಶ.

ಧಾರವಾಡ  ಜನವರಿ 17: ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮುಖಾಂತರ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗಿತ್ತು.

- Advertisement -
Ad imageAd image

ಧಾರವಾಡ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಹುದ್ದೆಗಳ ಪೈಕಿ 12 ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆಯಲ್ಲಿ ನಿಗದಿಯಾಗಿರುವ ಹುದ್ದೆಗಳ ಎದುರಾಗಿ 1:1 ಅನುಪಾತದಲ್ಲಿ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಹಾಗೂ ಹೆಚ್ಚುವರಿ ಆಯ್ಕೆ ಪಟ್ಟಿಯನ್ನು ಧಾರವಾಡ ಜಿಲ್ಲಾ ವೆಬ್ ಸೈಟ್ http://dharwad.nic.in ನಲ್ಲಿ ಜನವರಿ 16, 2025 ರಂದು ಪ್ರಕಟಿಸಲಾಗಿದೆ.

ತಾತ್ಕಾಲಿಕ 1:1 ಆಯ್ಕೆ ಪಟ್ಟಿ ಹಾಗೂ ಹೆಚ್ಚುವರಿ ಆಯ್ಕೆ ಪಟ್ಟಿಯಲ್ಲಿರುವ ಅಭ್ಯರ್ಥಿಗಳು ಆಕ್ಷೇಪಣೆಗಳೇನಾದರೂ ಇದ್ದಲ್ಲಿ ಲಿಖಿತವಾಗಿ ದಾಖಲೆಗಳೊಂದಿಗೆ ಜನವರಿ 23, 2025 ರೊಳಗಾಗಿ ಜಿಲ್ಲಾಧಿಕಾರಿಗಳ ಕಛೇರಿಗೆ ಸಲ್ಲಿಸಬಹುದಾಗಿದೆ ಎಂದು ಗ್ರಾಮ ಆಡಳಿತ ಅಧಿಕಾರಿಗಳ ನೇರ ನೇಮಕಾತಿ ಆಯ್ಕೆ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿಗಳಾದ ದಿವ್ಯ ಪ್ರಭು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
**

Share This Article
error: Content is protected !!
";