ಸಂಸದರ ನೂತನ ಕಚೇರಿ ಉದ್ಘಾಟಿಸಿದ ಈ.ತುಕಾರಾಂ

Vijayanagara Vani
ಸಂಸದರ ನೂತನ ಕಚೇರಿ ಉದ್ಘಾಟಿಸಿದ ಈ.ತುಕಾರಾಂ

 

- Advertisement -
Ad imageAd image

ಬಳ್ಳಾರಿ,ಜ.17
ನಗರದ ರೈಲ್ವೇ ನಿಲ್ದಾಣ ರಸ್ತೆಯ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಸಂಸದರ ನೂತನ ಕಚೇರಿಯನ್ನು ಬಳ್ಳಾರಿ ಲೋಕಸಭಾ ಕ್ಷೇತ್ರದ ಸಂಸದ ಈ.ತುಕಾರಾಂ ಅವರು ಶುಕ್ರವಾರ ಉದ್ಘಾಟಿಸಿದರು.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನರ ಅಹವಾಲು, ಕುಂದು ಕೊರತೆ ಆಲಿಸಲು ಮತ್ತು ಜನರ ಜೊತೆ ನೇರ ಸಂಪರ್ಕಕ್ಕೆ ಅಧಿಕೃತ ಕಚೇರಿ ಆರಂಭಿಸಲಾಗಿದೆ ಎಂದು ತಿಳಿಸಿದರು.
ಕಚೇರಿಯಲ್ಲಿ ಅಗತ್ಯ ಸಿಬ್ಬಂದಿಗಳ ನಿಯೋಜನೆ ಮಾಡಲಾಗುವುದು. ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗಿ ರೈಲ್ವೆ ಮೇಲ್ಸೇತುವೆ ಕಾಮಗಾರಿ ಸೇರಿದಂತೆ ಇತರೆ ಕಾಮಗಾರಿಗಳಿಗೆ ವೇಗಗೊಳಿಸಲಾಗುವುದು ಎಂದರು.
ಯಾವುದೇ ಅವೈಜ್ಞಾನಿಕ ಕಾಮಗಾರಿಗಳಿಗೆ ಅವಕಾಶ ನೀಡುವುದಿಲ್ಲ. ಜನರಿಗೆ ತೊಂದರೆ ನೀಡುವಂತಹ ಯಾವುದೇ ರೈಲ್ವೆ ಅಭಿವೃದ್ಧಿಗೆ ಭೂಮಿ ವಶಪಡಿಸಿಕೊಳ್ಳುವುದಿಲ್ಲ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಂಡೂರು ಶಾಸಕರಾದ ಈ.ಅನ್ನಪೂರ್ಣ, ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್ ಮುಲ್ಲಂಗಿ ನಂದೀಶ್ ಸೇರಿದಂತೆ ಹಿರಿಯ ಮುಖಂಡರು, ಪಾಲಿಕೆಯ ಸದಸ್ಯರು ಹಾಗೂ ಸಾರ್ವಜನಿಕರು ಇದ್ದರು.
————

Share This Article
error: Content is protected !!
";