ಬಳ್ಳಾರಿ,ಜ.26
76ನೇ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ನಗರದ ಹೆಚ್.ಆರ್.ಗವಿಯಪ್ಪ ವೃತ್ತದ ಪಕ್ಕದಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ಉದ್ಯಾನವನದಲ್ಲಿ ಆಂಗ್ಲ ಮತ್ತು ಕನ್ನಡ ಭಾಷೆಗಳಲ್ಲಿ ಗ್ರೆನೇಟ್ ಕಲ್ಲಿನಲ್ಲಿ ಕೆತ್ತನೆ ಮಾಡಲಾದ 10*7 ಅಡಿಯ “ಭಾರತದ ಸಂವಿಧಾನ ಪೀಠಿಕೆ”ಯನ್ನು ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಮ್ ಖಾನ್ ಅವರು ಭಾನುವಾರ ಅನಾವರಣಗೊಳಿಸಿದರು.
ಇದೇ ವೇಳೆ ಮಹಾತ್ಮ ಗಾಂಧೀಜಿ ಮತ್ತು ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಗಣ್ಯರು ಪೂಜೆ ಸಲ್ಲಿಸಿ ಪುಷ್ಪನಮನ ಮಾಡಿದರು.
ಬಳಿಕ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಬಿ.ಮಲ್ಲಿಕಾರ್ಜುನ ಅವರು ಭಾರತ ಸಂವಿಧಾನದ ಪ್ರಸ್ತಾವನೆಯನ್ನು ಭೋದಿಸಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯುಲು, ಪಾಲಿಕೆಯ ಉಪಮೇಯರ್ ಡಿ.ಸುಕುಂ, ಬಳ್ಳಾರಿ ವಲಯ ಪೊಲೀಸ್ ಮಹಾನೀರಿಕ್ಷಕರಾದ ಬಿ.ಎಸ್.ಲೋಕೇಶ್ ಕುಮಾರ್, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಇತರೆ ಸರ್ಕಾರೇತರ ಸಂಸ್ಥೆಗಳು, ಸಂಘ ಸಂಸ್ಥೆಗಳು, ಕನ್ನಡ ಪರ ಸಂಘಟನೆಗಳು, ಡಾ.ಬಿ.ಆರ್.ಅಂಬೇಡ್ಕರ್ ಅನುಯಾಯಿಗಳು ಮತ್ತು ಸಾರ್ವಜನಿಕರು ಇದ್ದರು.
———-



 
		 
		

 
                     
                    
 
    