Ad image

ಫೆ.09 ಮತ್ತು 10ರಂದು ಶಾಂತಿಸಾಗರ ನೀರು ಸರಬರಾಜು ತಾತ್ಕಾಲಿಕ ಸ್ಥಗಿತ….

Vijayanagara Vani

ಚಿತ್ರದುರ್ಗ()ಫೆ.07:
ಚಿತ್ರದುರ್ಗ ನಗರಕ್ಕೆ ಕುಡಿಯುವ ನೀರು ಸರಬರಾಜಾಗುವ ಶಾಂತಿಸಾಗರ ನೀರು ಸರಬರಾಜು ಯೋಜನೆಯ ಶಾಂತಿಸಾಗರ ಜಾಕ್‍ವೆಲ್ ವಿದ್ಯುತ್ ಸ್ಥಾವರದಲ್ಲಿ ಬ್ರೇಕರ್ ಅಳವಡಿಸುವ ಕೆಲಸ ಕೈಗೊಳ್ಳಬೇಕಾಗಿರುವುದರಿಂದ ಶಾಂತಿ ಸಾಗರ ನೀರು ಸರಬರಾಜು ವ್ಯವಸ್ಥೆಯನ್ನು ತಾತ್ಕಾಲಿಕವಾಗಿ ಇದೇ ಫೆ.09 ಮತ್ತು 10ರಂದು ಸ್ಥಗಿತಗೊಳಿಸಲಾಗುತ್ತಿದೆ.
ಸಾರ್ವಜನಿಕರು ತಮ್ಮ ತಮ್ಮ ಪ್ರದೇಶದಲ್ಲಿನ ಕೊಳವೆ ಬಾವಿಗಳ ನೀರನ್ನು ಮತ್ತು ಶುದ್ಧ ಕುಡಿಯುವ ನೀರನ್ನು ಉಪಯೋಗಿಸಲು ಕೋರಿದೆ. ನೀರನ್ನು ಮಿತವಾಗಿ ಬಳಸಿ ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸಬೇಕು ಎಂದು ಚಿತ್ರದುರ್ಗ ನಗರಸಭೆ ಪೌರಾಯುಕ್ತೆ ಎಂ.ರೇಣುಕಾ ತಿಳಿಸಿದ್ದಾರೆ.
==========

Share This Article
error: Content is protected !!
";