ಬಳ್ಳಾರಿ,ಮಾ.16
ಬರುವ ಏಪ್ರಿಲ್ 05 ರಂದು ಮಾಜಿ ಉಪ ಪ್ರಧಾನಮಂತ್ರಿ ಹಾಗೂ ಹಸಿರು ಕ್ರಾಂತಿ ಹರಿಕಾರರಾದ ಡಾ.ಬಾಬು ಜಗಜೀವನ ರಾಂ ಅವರ 118 ನೇ ಜಯಂತೋತ್ಸವ ಮತ್ತು ಏ.14 ರಂದು ಭಾರತ ರತ್ನ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜಯಂತೋತ್ಸವ ಆಚರಣೆ ಕುರಿತು ಚರ್ಚಿಸಲು ಮಾ.18 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್ ನ ನೂತನ ನಜೀರ್ ಸಭಾಂಗಣದಲ್ಲಿ ಪೂರ್ವಭಾವಿ ಸಿದ್ಧತಾ ಸಭೆ ನಿಗದಿಪಡಿಸಲಾಗಿದೆ.
ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಅಧ್ಯಕ್ಷತೆ ವಹಿಸುವರು.
ಸಭೆಗೆ ಎಲ್ಲಾ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಮುಖಂಡರು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ತಪ್ಪದೇ ಹಾಜರಾಗಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ ಅವರು ತಿಳಿಸಿದ್ದಾರೆ.