ಬಳ್ಳಾರಿ,ಮಾ.17
ಜಿಲ್ಲೆಯಲ್ಲಿನ ಪರಿಶಿಷ್ಟ ವರ್ಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ 2025-26ನೇ ಸಾಲಿಗೆ ಜನಸೇವಾ ವಿದ್ಯಾಕೇಂದ್ರ (ರಿ) ಆಂಗ್ಲ ಮತ್ತು ಕನ್ನಡ ಮಾಧ್ಯಮ ಶಾಲೆ, ಮಾಗಡಿ ರಸ್ತೆ, ಚೆನ್ನನಹಳ್ಳಿ, ಬೆಂಗಳೂರು ಇಲ್ಲಿಗೆ ಪ್ರವೇಶ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
5ನೇ ತರಗತಿ ಕನ್ನಡ ಮಾಧ್ಯಮ ಮತ್ತು 8ನೇ ತರಗತಿ ಕನ್ನಡ, ಆಂಗ್ಲ ಮಾಧ್ಯಮ ತರಗತಿ ದಾಖಲಾತಿಗೆ ಏ.06 ರಂದು ಪ್ರವೇಶ ಪರೀಕ್ಷೆ ನಡೆಯಲಿದೆ.
ಪ್ರವೇಶ ಪರೀಕ್ಷೆ ಬರೆಯಲು ಇಚ್ಛಿಸುವ ಪರಿಶಿಷ್ಟ ವರ್ಗದ ಅರ್ಹ ವಿದ್ಯಾರ್ಥಿಗಳು ಅರ್ಜಿಗಳನ್ನು ಬಳ್ಳಾರಿ, ಸಂಡೂರು, ಸಿರುಗುಪ್ಪ, ತಾಲ್ಲೂಕುಗಳ ಪರಿಶಿಷ್ಟ ವರ್ಗಗಳ ಕಲ್ಯಾಣಧಿಕಾರಿಗಳ ಕಚೇರಿಯಲ್ಲಿ ಪಡೆದುಕೊಳ್ಳಬಹುದು. ಅರ್ಜಿ ಸಲ್ಲಿಸಲು ಮಾ.26 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಗರದ ನಲ್ಲಚೇರುವು ಪ್ರದೇಶದ ವಾಲ್ಮೀಕಿ ಭವನದ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಧಿಕಾರಿಗಳ ಕಚೇರಿ ಅಥವಾ ದೂ.08392-242453 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಧಿಕಾರಿ ದಿವಾಕರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
————–