Ad image

ಕನ್ನಡ ಸಾಹಿತ್ಯ ಮತ್ತು ಸಾಂವಿಧಾನಿಕ ಮೌಲ್ಯಗಳು ಕುರಿತು 3 ದಿನಗಳ ಕಮ್ಮಟ: ಅರ್ಜಿ ಆಹ್ವಾನ

Vijayanagara Vani
ಕನ್ನಡ ಸಾಹಿತ್ಯ ಮತ್ತು ಸಾಂವಿಧಾನಿಕ ಮೌಲ್ಯಗಳು ಕುರಿತು 3 ದಿನಗಳ ಕಮ್ಮಟ: ಅರ್ಜಿ ಆಹ್ವಾನ

ಕನ್ನಡ ಸಾಹಿತ್ಯ ಮತ್ತು ಸಾಂವಿಧಾನಿಕ ಮೌಲ್ಯಗಳು ಕುರಿತು 3 ದಿನಗಳ ಕಮ್ಮಟ: ಅರ್ಜಿ ಆಹ್ವಾ

ಚಿತ್ರದುರ್ಗ()ಮಾರ್ಚ್18:
ಕರ್ನಾಟಕ ಸಾಹಿತ್ಯ ಅಕಾಡೆಮಿಯು ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಗೊಟಗೋಡಿ, ಹಾವೇರಿ ಜಿಲ್ಲೆ ಇವರ ಸಹಯೋಗದಲ್ಲಿ ಗಿರಿಜನ ಉಪಯೋಜನೆಯಡಿ ಕನ್ನಡ ಸಾಹಿತ್ಯ ಮತ್ತು ಸಾಂವಿಧಾನಿಕ ಮೌಲ್ಯಗಳು ಎಂಬ ಹೆಸರಿನಲ್ಲಿ 3 ದಿನಗಳ ಕಮ್ಮಟವನ್ನು 2025ರ ಏಪ್ರಿಲ್ 21, 22 ಮತ್ತು 23ರಂದು ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಗೊಟಗೋಡಿ, ಹಾವೇರಿ ಜಿಲ್ಲೆಯಲ್ಲಿ ನಡೆಸಲು ಉದ್ದೇಶಿಸಿದ್ದು, ಈ ಸಂಬಂಧ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತಿಯಿರುವ 20 ರಿಂದ 45 ವರ್ಷ ವಯಸ್ಸುಳ್ಳ ಪರಿಶಿಷ್ಟ ಪಂಗಡಕ್ಕೆ ಸೇರಿದ ರಾಜ್ಯದ ಎಲ್ಲಾ ಭಾಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಏಪ್ರಿಲ್ 05 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಸಾಹಿತ್ಯ ಅಕಾಡೆಮಿಯ ವೆಬ್‍ಸೈಟ್ http://karnatakasahithyaacademy.org ಇಂದ ಅರ್ಜಿ ನಮೂನೆ ಹಾಗೂ ವಿವರಗಳನ್ನು ಪಡೆದುಕೊಳ್ಳಬಹುದಾಗಿದೆ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ರಿಜಿಸ್ಟ್ರಾರ್ ಎನ್.ಕರಿಯಪ್ಪ ತಿಳಿಸಿದ್ದಾರೆ.
=========

Share This Article
error: Content is protected !!
";