ಗಣೇಶನ ಮೂರ್ತಿ ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಗೆ ಲಾರಿ ಡಿಕ್ಕಿ

Vijayanagara Vani
ಗಣೇಶನ ಮೂರ್ತಿ ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಗೆ ಲಾರಿ ಡಿಕ್ಕಿ

ಕೊಪ್ಪಳ: ಗಣೇಶನ ಮೂರ್ತಿಯನ್ನು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಗೆ ಹಿಂಬದಿಯಿಂದ ಬಂದ ಲಾರಿ ಒಂದು ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್ ಪಲ್ಟಿಯಾಗಿ ನಾಲ್ಕು ಜನರಿಗೆ ಗಾಯಗಳಾದ ಘಟನೆ ಸಂಭವಿಸಿದೆ.
ಕೊಪ್ಪಳ ನಗರದಿಂದ ಕುಕನೂರು ತಾಲೂಕಿನ ಮಸಬ ಹಂಚಿನಾಳ ಗ್ರಾಮದ ಯುವಕರು ಗಣೇಶ ಪ್ರತಿಷ್ಠಾಪನೆಗೆಂದು ಗಣೇಶ ಮೂರ್ತಿಯನ್ನು ಟ್ರ್ಯಾಕ್ಟರ್ ನಲ್ಲಿ ತೆಗೆದುಕೊಂಡು ಹೋಗುತ್ತಿದ್ದ ವೇಳೆ ನಗರದ ಬೈಪಾಸ್ ರಸ್ತೆಯಲ್ಲಿನ ಕೋಳೂರು ಕ್ರಾಸ್ ಬಳಿ ಹಿಂಬಯಿಂದ ಬಂದ ಲಾರಿ ಒಂದು ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್ ಪಲ್ಟಿ ಹೊಡೆದು ನಾಲ್ಕು ಜನರಿಗೆ ಗಾಯಗೊಂಡ ಘಟನೆ ಸಂಭವಿಸಿದ್ದು. ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
Ad imageAd image
Share This Article
error: Content is protected !!
";