ಬಳ್ಳಾರಿ,ಡಿ.02
ರೀಡ್ಸ್ ಸಂಸ್ಥೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ಸಿಎಸಿಎಲ್-ಕೆ ಇವರ ಸಂಯುಕ್ತಾಶ್ರಯದಲ್ಲಿ ಡಿ.04 ರಂದು ಬೆಳಿಗ್ಗೆ 10.30 ಗಂಟೆಗೆ ಜಿಪಂ ಅಬ್ದುಲ್ ನಜೀರ್‌ಸಾಬ್ ಸಭಾಂಗಣದಲ್ಲಿ ‘ಬಾಲ್ಯವಿವಾಹ ನಿಷೇಧ ಕಾಯ್ದೆ-2006 ಹಾಗೂ ಬಾಲ್ಯವಿವಾಹ ತಡೆಗಟ್ಟುವಲ್ಲಿ ಸವಾಲುಗಳು ಸವಾಲುಗಳು ಮತ್ತು ಪರಿಹಾರಗಳು’ ಕುರಿತು ಒಂದು ದಿನದ ರಾಜ್ಯಮಟ್ಟದ ಕಾರ್ಯಾಗಾರ ಏರ್ಪಡಿಸಲಾಗಿದೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಆದ ಕೆ.ಜಿ.ಶಾಂತಿ ಅವರು ಕಾರ್ಯಾಗಾರ ಉದ್ಘಾಟಿಸುವರು.
ರೀಡ್ಸ್ ಸಂಸ್ಥೆಯ ಅಧ್ಯಕ್ಷ ಬಿ.ಸಿದ್ದರಾಮಯ್ಯ ಅವರು ಅಧ್ಯಕ್ಷತೆ ವಹಿಸುವರು.
ಬೆಂಗಳೂರಿನ ಮಕ್ಕಳ ರಕ್ಷಣಾ ನಿರ್ದೇಶನಾಯಲದ ನಿರ್ದೇಶಕರಾದ ಡಾ.ಎಂ.ಆರ್.ರವಿ, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶಶಿಧರ ಕೋಸಂಬೆ, ಬಳ್ಳಾರಿ ವಲಯ ಪೊಲೀಸ್ ಮಹಾ ನಿರೀಕ್ಷಕರಾದ ಬಿ.ಎಸ್.ಲೋಕೇಶ್ ಕುಮಾರ್, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್.ಎನ್.ಹೊಸಮನೆ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ.ವಿ.ಜೆ., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವಿಜಯ್‌ಕುಮಾರ್.ಕೆ.ಹೆಚ್., ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ವಿಜಯಲಕ್ಷಿö್ಮ ಮೈದೂರು, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಎಳೆ ನಾಗಪ್ಪ, ಮೈಸೂರಿನ ಆರ್‌ಎಲ್‌ಎಚ್‌ಪಿಯ ಕಾರ್ಯನಿರ್ವಾಹಕ ನಿದೇರ್ಶಕರು ಹಾಗೂ ಸಿಎಸಿಎಲ್‌ಕೆ ಸಂಚಾಲಕರಾದ ಸರಸ್ವತಿ, ಸಂಪನ್ಮೂಲ ವ್ಯಕ್ತಿಗಳಾಗಿ ಕೊಪ್ಪಳದ ಯುನಿಸೆಫ್ ಮಕ್ಕಳ ಸಂರಕ್ಷಣಾ ಯೋಜನೆಯ ಪ್ರಾದೇಶಿಕ ಸಂಯೋಜಕರಾದ ರಾಘವೇಂದ್ರ ಭಟ್, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ನಿಕಟಪೂರ್ವ ಸದಸ್ಯರಾದ ಹೆಚ್.ಸಿ.ರಾಘವೇಂದ್ರ, ರೀಡ್ಸ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಸಿ.ತಿಪ್ಪೇಶಪ್ಪ, ಸಂಯೋಜಕ ಕೆ.ಎಂ.ತಿಪ್ಪೇಸ್ವಾಮಿ, ಯೋಜನಾ ವ್ಯವಸ್ಥಾಪಕರಾದ ಕೆ.ಸೀತಾಮಹಾಲಕ್ಷಿö್ಮ, ಡಿ.ಆರ್.ಜಗತಾಪ್ ಸೇರಿದಂತೆ ಇತರರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.
——–