ಕೊಟ್ಟೂರು : ಪಟ್ಟಣದ ಪೊಲೀಸ್ ಠಾಣೆಯ ಆವರಣದಲ್ಲಿ ಭಾನುವಾರದಂದು  ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಪ್ರಯುಕ್ತ ಶಾಂತಿ ಸಭೆ ನಡೆಯಿತು.

Vijayanagara Vani
ಕೊಟ್ಟೂರು : ಪಟ್ಟಣದ ಪೊಲೀಸ್ ಠಾಣೆಯ ಆವರಣದಲ್ಲಿ ಭಾನುವಾರದಂದು  ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಪ್ರಯುಕ್ತ ಶಾಂತಿ ಸಭೆ ನಡೆಯಿತು.
ಸರ್ಕಾರ ನಿಗದಿಪಡಿಸಿದ  ಮಾರ್ಗಸೂಚಿ ಹಾಗು ನಿಯಮಾವಳಿಯೊಂದಿಗೆ   ಶಾಂತಿಯುತವಾಗಿ ಗಣೇಶೋತ್ಸವ ಮತ್ತು ಈದ್ ಮಿಲಾದ್ ಹಬ್ಬಗಳನ್ನು ಆಚರಿಸಲು ಡಿವೈಎಸ್ಪಿ ಮಲ್ಲೇಶ್ ಮಲ್ಲಾಪುರ  ಶಾಂತಿ ಸಭೆಯಲ್ಲಿ ಸಾರ್ವಜನಿಕರಿಗೆ ಸೂಚಿಸಿದರು.
 ಈ ಸಂದರ್ಭದಲ್ಲಿ  ತಾಲೂಕಿನ ವಿವಿಧ ಸಮುದಾಯ, ಧರ್ಮಗಳ ಮುಖಂಡರು, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಭಾಗವಹಿಸಿ ಅಭಿಪ್ರಾಯ ವ್ಯಕ್ತಪಡಿಸಿದರು.
ಡಿವೈಎಸ್ಪಿ ಮಲ್ಲೇಶ್ ಮಲ್ಲಾಪುರ ಮಾತನಾಡಿ, ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ಸಾಮರಸ್ಯದಿಂದ ಆಚರಿಸಬೇಕು. ಯಾವುದೇ ಅಡಚಣೆ ಆಗದಂತೆ ಎಚ್ಚರಿಕೆ ವಹಿಸಬೇಕು . ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲು ಸ್ಥಳೀಯ ಆಡಳಿತದಿಂದ ಕಡ್ಡಾಯವಾಗಿ ಪೂರ್ವಾನುಮತಿ ಪಡೆಯಬೇಕು. ಅನುಮತಿ ಪಡೆಯಲು ಪಟ್ಟಣ ಪಂಚಾಯಿತಿ,ಕೆಇಬಿ, ಅಗ್ನಿಶಾಮಕ ದಳ ಪೊಲೀಸ್ ಇಲಾಖೆ ಕಚೇರಿಯಲ್ಲಿ ಏಕಗವಾಕ್ಷಿ ವ್ಯವಸ್ಥೆಯಡಿ ಅವಕಾಶ ಕಲ್ಪಿಸಿ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಒಂದೆಡೆ ಅನುಮತಿಯನ್ನು ನೀಡುವರು. ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ಯಾವುದೇ ಅಡ್ಡಿಯಾಗದಂತೆ ಗಣೇಶ ಪ್ರತಿಷ್ಠಾಪನೆ ಮಾಡಬೇಕು. ಸರ್ಕಾರದ ನಿಯಮದಂತೆ ಮೂರು, ಐದು, ಅನ್ನೊಂದು ದಿನಗಳ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶವಿದೆ ಎಂದು ತಿಳಿಸಿದರು.
ಸರ್ಕಲ್ ಇನ್ಸ್ ಪೆಕ್ಟರ್ ವೆಂಕಟಸ್ವಾಮಿ, ಪಿಎಸ್ಐ ಗೀತಾಂಜಲಿ ಶಿಂಧೆ ಮಾತನಾಡಿ, ದೇವಸ್ಥಾನ ಹಾಗೂ ತಮ್ಮ ತಮ್ಮ ಮನೆಗಳಲ್ಲಿ, ಖಾಸಗಿ ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ಕನಿಷ್ಠ ಸಂಖ್ಯೆಯೊಂದಿಗೆ ಗಣೇಶ ಹಬ್ಬ ಆಚರಿಸಬೇಕು. ಗುಂಪು ಗೂಡಲು ಅವಕಾಶವಿರುವುದಿಲ್ಲ. ನಿಯಮದಂತೆ ಸಾರ್ವಜನಿಕ ಸ್ಥಳಗಳಲ್ಲಿ ನಾಲ್ಕು ಅಡಿ ಹಾಗೂ ಮನೆಯೊಳಗೆ ಎರಡು ಅಡಿ ಮೀರದಂತೆ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಬೇಕು ಎಂದು ತಿಳಿಸಿದರು.ಗಣೇಶೋತ್ಸವ ಹಬ್ಬವನ್ನು ಸರ್ಕಾರದ ಮಾರ್ಗಸೂಚಿಯಂತೆ ಸರಳವಾಗಿ ಆಚರಿಸಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಜೆಸ್ಕಾಂ ಎ ಇ  ಚೇತನ್ ಕುಮಾರ್,ಪಟ್ಟಣ ಪಂಚಾಯಿತಿ ಅಧಿಕಾರಿಗಳು, ಅಗ್ನಿಶಾಮಕ ದಳ ಅಧಿಕಾರಿಗಳು, ಪೊಲೀಸ್ ಇಲಾಖೆ ಸಿಬ್ಬಂದಿ ವರ್ಗದವರು ಸಾರ್ವಜನಿಕರು ಹಾಜರಿದ್ದರು 
WhatsApp Group Join Now
Telegram Group Join Now
Share This Article
error: Content is protected !!