Ad image

ಫೆ.07 ರಂದು ವಿಶೇಷ ಅಂಚೆ ಲಕೋಟೆ ಬಿಡುಗಡೆ ಕಾರ್ಯಕ್ರಮ

Vijayanagara Vani
ಫೆ.07 ರಂದು ವಿಶೇಷ ಅಂಚೆ ಲಕೋಟೆ ಬಿಡುಗಡೆ ಕಾರ್ಯಕ್ರಮ
ಬಳ್ಳಾರಿ,ಫೆ.06
ಅಂಚೆ ಇಲಾಖೆಯಿಂದ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳ ಸುವರ್ಣ ಮಹೋತ್ಸವದ ನೆನಪಿನಲ್ಲಿ ಅಖಿಲ ಭಾರತ ಗ್ರಾಮೀಣ ಬ್ಯಾಂಕ್ ಗಳ ನೌಕರರ ಒಕ್ಕೂಟದ ಸಹಯೋಗದಲ್ಲಿ ಫೆ.07 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಕರ್ನಾಟಕ ಗ್ರಾಮೀಣ ಬ್ಯಾಂಕಿನ ನೌಕರರ ಸಹಕಾರಿ ಸಂಘದ ಸಮುದಾಯ ಭವನದಲ್ಲಿ ವಿಶೇಷ ಅಂಚೆ ಲಕೋಟೆ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬಳ್ಳಾರಿ ಅಂಚೆ ವಿಭಾಗದ ಅಂಚೆ ಅಧೀಕ್ಷಕ ಪಿ.ಚಿದಾನಂದ ಅವರು ತಿಳಿಸಿದ್ದಾರೆ.
ಕರ್ನಾಟಕ ವೃತ್ತದ ಮುಖ್ಯ ಪೋಸ್ಟ್ ಮಾಸ್ಟರ್ ಜನರಲ್ ಎಸ್.ರಾಜೇಂದ್ರ ಕುಮಾರ್, ಉತ್ತರ ಕರ್ನಾಟಕ ವಲಯದ ಪೋಸ್ಟ್ ಮಾಸ್ಟರ್ ಜನರಲ್ ಕರ್ನಲ್ ಸುಶೀಲ್ ಕುಮಾರ್, ಕರ್ನಾಟಕ ಗ್ರಾಮೀಣ ಬ್ಯಾಂಕಿನ ಚೇರ್‌ಮನ್ ಡಿ.ಆರ್.ದಿಲ್ಲಿಬಾಬು, ಅಖಿಲ ಭಾರತ ಗ್ರಾಮೀಣ ಬ್ಯಾಂಕ್ ನೌಕರರ ಸಂಘದ ಕಾರ್ಯದರ್ಶಿ ಎಸ್.ವೆಂಕಟೇಶ್ವರ ರೆಡ್ಡಿ, ಅಧ್ಯಕ್ಷರಾದ ಹೆಚ್.ನಾಗಭೂಷಣ ರಾವ್, ವಿ.ಕೆ.ಬನ್ನಿಗೊಳ್, ಸಿ.ರಾಜೀವನ್ ಹಾಗೂ ಇತರರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಸಾರ್ವಜನಿಕರು, ಅಂಚೆ ಚೀಟಿ ಸಂಗ್ರಹಕರು ಮತ್ತು ಆಸಕ್ತರು ಹೆಚ್ಚಿನ ಸಂಖೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Share This Article
error: Content is protected !!
";