ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಜೋಡಣೆ ಕಡ್ಡಾಯ*

Vijayanagara Vani
ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಜೋಡಣೆ ಕಡ್ಡಾಯ*
ಶಿವಮೊಗ್ಗ 
ರೈತರು ತಮ್ಮ ಜಮೀನಿನ ಪಹಣಿ ಪತ್ರಕ್ಕೆ ಆಧಾರ್ ಕಾರ್ಡ್ ಸಂಖ್ಯೆಯನ್ನು ಜೋಡಣೆ ಮಾಡುವುದು ಕಡ್ಡಾಯವಾಗಿರುತ್ತದೆ.
ರೈತರು ಸರ್ಕಾರದ ಯಾವುದೇ ಸೌಲಭ್ಯದ ಫಲಾನುಭವಿಯಾಗಲು ರೈತರು ತಮ್ಮ ಆರ್ಟಿಸಿ ಗೆ ಆಧಾರ್ ಸಂಖ್ಯೆಯನ್ನು ಜೋಡಿಸಬೇಕು. ಈ ಕುರಿತು ಸರ್ಕಾರ ಹೊಸ ತಂತ್ರಾಂಶವನ್ನು ಅಭಿವೃದ್ದಿಪಡಿಸಿದ್ದು ಇದನ್ನು ರೈತರು ತಮ್ಮ ಮೊಬೈಲ್ ಮೂಲಕ ಅಥವಾ ಸಂಬಂಧಿಸಿದ ಗ್ರಾಮ ಆಡಳಿತ ಅಧಿಕಾರಿಗಳನ್ನು ಭೇಟಿ ಮಾಡಿ ಸದರಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದಾಗಿರುತ್ತದೆ.
ಆರ್ಟಿಸಿ ಗೆ ಆಧಾರ್ ಸಂಖ್ಯೆ ಜೋಡಣೆ ಮಾಡಲು ಉದಾಸೀನ ಮಾಡಿದರೆ ಮುಂದಿನ ದಿನಗಳಲ್ಲಿ ಅಂತಹ ರೈತರಿಗೆ ಸರ್ಕಾರದಿಂದ ದೊರೆಯಬಹುದಾದ ಸೌಲಭ್ಯಕ್ಕೆ ತೊಂದರೆ ಉಂಟಾಗಲಿದೆ.
ಆರ್ಟಿಸಿ ಗೆ ಆಧಾರ್ ಜೋಡಣೆ ಮಾಡುವುದರಿಂದ ಜಮೀನಿನ ದಾಖಲೆ ಮತ್ತಷ್ಟು ಸುರಕ್ಷಿತವಾಗಿರುತ್ತದೆ. ಭೂ ದಾಖಲೆ ಪಡೆಯುವುದು ಸುಲಭ. ಸರ್ಕಾರಿ ಯೋಜನೆಗೆ ಅರ್ಜಿ ಸಲ್ಲಿಕೆ ಸರಳವಾಗುತ್ತದೆ. ಖಾತಾ ವಿವಾದವನ್ನು ತಪ್ಪಿಸಲು ಅನುಕೂಲ, ಸಾಲ ಪ್ರಕ್ತಿಯೆ ಸುಲಭ ಹಾಗೂ ಜಮೀನು ಮಾರಾಟ ಸಮಯದಲ್ಲಿ ಹೆಚ್ಚಿನ ಪಾರದರ್ಶಕತೆ ಇರುತ್ತದೆ ಆದ್ದರಿಂದ ತಮ್ಮ ಆರ್ಟಿಸಿ ಗೆ ಆಧಾರ್ ಜೋಡಣೆ ಮಾಡಬೇಕೆಂದು ಸಾರ್ವಜನಿಕರಲ್ಲಿ ಶಿವಮೊಗ್ಗ ತಾಲ್ಲೂಕು ತಹಶೀಲ್ದಾರ್ ಬಿ.ಎನ್.ಗಿರೀಶ್ ತಿಳಿಸಿದ್ದಾರೆ.
WhatsApp Group Join Now
Telegram Group Join Now
Share This Article
error: Content is protected !!