Ad image

ಮುಂಗಾರು ಆರಂಭ: ರೈತರಿಗೆ ಸಮಸ್ಯೆಗಳಾಗದಂತೆ ಕ್ರಮ ಕೈಗೊಳ್ಳಿ: ಎ.ಸಿ ಎಸ್.ಎಸ್ ಸಂಪಗಾವಿ

Vijayanagara Vani
ಮುಂಗಾರು ಆರಂಭ: ರೈತರಿಗೆ ಸಮಸ್ಯೆಗಳಾಗದಂತೆ ಕ್ರಮ ಕೈಗೊಳ್ಳಿ: ಎ.ಸಿ ಎಸ್.ಎಸ್ ಸಂಪಗಾವಿ
filter: 0; fileterIntensity: 0.0; filterMask: 0; captureOrientation: 0; module: photo; hw-remosaic: false; touch: (0.34444445, 0.55390626); modeInfo: ; sceneMode: 8; cct_value: 0; AI_Scene: (-1, -1); aec_lux: 72.0; aec_lux_index: 0; hist255: 0.0; hist252~255: 0.0; hist0~15: 0.0; albedo: ; confidence: ; motionLevel: 0; weatherinfo: null; temperature: 47;

ಮುಂಗಾರು ಆರಂಭವಾಗುವ ಹಿನ್ನಲೆಯಲ್ಲಿ ರೈತರಿಗೆ ಸಮರ್ಪಕ ರಸಗೊಬ್ಬರ ಮತ್ತು ಬಿತ್ತನೆ ಬೀಜಗಳನ್ನು ಒದಗಿಸಲು ಸರಬರಾಜು ಕಂಪನಿಗಳು ಸಿದ್ದತೆಗಳನ್ನು ಮಾಡಿಕೊಳ್ಳಬೇಕು ಮತ್ತು ರೈತರಿಗೆ ಮುಂಗಾರುವಿನಲ್ಲಿ ಯಾವುದೇ ರೀತಿಯ ಸಮಸ್ಯೆಗಳಾಗದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸಹಾಯಕ ಆಯುಕ್ತ ಎಸ್.ಎಸ್ ಸಂಪಗಾವಿ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಅವರು ಮೇ.21ರ(ಮಂಗಳವಾರ) ದಂದು ನಗರದ ಜಂಟಿ ಕೃಷಿ ನಿರ್ದೇಶಕರ ಕಚೇರಿ ಸಭಾಂಗಣದಲ್ಲಿ 2024-25ನೇ ಸಾಲಿನ ಮುಂಗಾರು ಸಿದ್ದತೆ ಕುರಿತು ಹಮ್ಮಿಕೊಂಡಿದ್ದ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಪರವಾನಿಗೆ ಪಡೆಯದೇ ಬಿತ್ತನೆ ಬೀಜ ಮತ್ತು ರಸಗೊಬ್ಬರ ಮಾರುವಂತವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ಕಳಪೆ ಬಿತ್ತನೆ ಬೀಜ ಮಾರಾಟ ಕಂಡುಬAದಲ್ಲಿ ಬಿತ್ತನೆ ಬೀಜಗಳನ್ನು ಪ್ರಯೋಗಾಲಯ ಪರೀಕ್ಷಗೆ ಒಳಪಡಿಸಿ ವರದಿಯನ್ನಾಧರಿಸಿ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಇದೇ ವೇಳೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಆರ್.ದೇವಿಕಾ ಮಾತನಾಡಿ, ಜಿಲ್ಲೆಯಲ್ಲಿ 2024-25ನೇ ಸಾಲಿಗೆ ಒಟ್ಟು 556, 276ಹೆಕ್ಟರ್ ಪ್ರದೇಶವನ್ನು ಮುಂಗಾರು ಹಂಗಾಮಿನ ಕ್ಷೇತ್ರದ ಗುರಿಯನ್ನು ಹೊಂದಿದ್ದು, ಅದರಲ್ಲಿ  291467 ಹೆಕ್ಟರ್ ಖುಷ್ಕಿ ಹಾಗೂ 264809ನೀರಾವರಿ ಪ್ರದೇಶದ ಗುರಿಯನ್ನು ಹೊಂದಲಾಗಿದೆ ಎಂದರು.

ಭತ್ತ 185322ಹೆಕ್ಟರ್ ಭತ್ತ , 587ಹೆಕ್ಟೆರ್ ಮೆಕ್ಕೆ ಜೋಳ,   40000ಹೆಕ್ಟರ್ ಸಜ್ಜೆ,  145890 ಹೆಕ್ಟರ್ ತೊಗರಿ, 178 ಹೆಕ್ಟರ್ ಹೆಸರು ಹಾಗೂ 19562 ಹೆಕ್ಟರ್ ಸೂರ್ಯಕಾಂತಿ ಬೆಳೆಗಳು ಸೇರಿದಂತೆ ಇನ್ನಿತರ ಮುಂಗಾರು ಬೆಳೆಗಳ ಗುರಿಯನ್ನು ಹೊಂದಲಾಗಿದೆ ಎಂದು ಮಾಹಿತಿ ನೀಡಿದರು.

2024–25ನೇ ಸಾಲಿನಲ್ಲಿ ಜಿಲ್ಲೆಯ ರಾಯಚೂರು, ಮಾನವಿ, ದೇವದುರ್ಗ, ಲಿಂಗಸುಗೂರು ಹಾಗೂ ಸಿಂಧನೂರಿನಿAಭತ್ತ, ತೊಗರಿ, ಹೆಸರು, ಸಜ್ಜೆ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿದಂತೆ ವಿವಿಧ ಬೆಳೆಗಳ ಒಟ್ಟು  5228.8 ಕ್ವಿಂಟಾಲ್‌ನಷ್ಟು ಬಿತ್ತನೆ ಬೀಜಗಳ ಅವಶ್ಯಕತೆ ಇದ್ದು,   5437.8ಕ್ವಿಂಟಾಲ್‌ನಷ್ಟು ಯೋಜನೆಯನ್ನು ರೂಪಿಸಲಾಗಿದೆ.

ಜಿಲ್ಲೆಯಲ್ಲಿ ಮುಂಗಾರು ಹಂಗಾಮಿಗಾಗಿ ಒಟ್ಟು  235428 ಮೆಟ್ರಿಕ್ ಟನ್ ನಷ್ಟು ರಸಗೊಬ್ಬರದ ಬೇಡಿಕೆಯಿದೆ. ರಸಗೊಬ್ಬರ ಸೇರಿದಂತೆ ಮುಂಗಾರಿನಲ್ಲಿ ಬಿತ್ತನೆ ಬೀಜದ ಸಮಸ್ಯೆಗಳಾಗದಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಸಂದರ್ಭದಲ್ಲಿ ಉಪ ಕೃಷಿ ನಿರ್ದೇಶಕ ಜಯಪ್ರಕಾಶ, ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಬೀಜ ಘಟಕದ ವಿಜ್ಞಾನಿ ನಿಡಗುಂದಿ, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಮಹ್ಮದ್ ಅಲಿ ಸೇರಿದಂತೆ ವಿವಿಧ ರಸಗೊಬ್ಬರ, ಬಿತ್ತನೆ ಬೀಜಗಳ ಕಂಪನಿಗಳ ಮುಖ್ಯಸ್ಥರು, ರೈತರು, ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.

Share This Article
error: Content is protected !!
";