ಚಿತ್ರದುರ್ಗಜೂನ್16:
ಇಸ್ರೇಲ್ ಹಾಗೂ ಇರಾನ್ ನಡುವೆ ಉದ್ವಿಗ್ನ ಪರಿಸ್ಥಿತಿ ಉಂಟಾದ್ದು, ಇರಾನ್ ದೇಶದಲ್ಲಿ ನೆಲೆಸಿರುವ ವಿದೇಶಿಗರಲ್ಲಿ ಆಂತಕ ಉಂಟುಮಾಡಿದೆ. ಕರ್ನಾಟಕ ರಾಜ್ಯದ 9 ವಿದ್ಯಾರ್ಥಿಗಳು ಇರಾನ್ ರಾಜಧಾನಿ ತೆಹರಾನ್ ಸಮೀಪದ ಶಾಹಿದ್ ಬೇಹಸ್ತಿ ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ವ್ಯಾಸಾಂಗ ಮಾಡುತ್ತಿದ್ದಾರೆ. ಸದ್ಯ ಬೆಂಗಳೂರಿನ ವಿದ್ಯಾರ್ಥಿ ನದೀಮ್ ಹುಸೇನ್ ಪೋಷಕರು, ಬೆಂಗಳೂರಿನ ಅನಿವಾಸಿ ಭಾರತೀಯ ಸಮಿತಿ ಕರೆ ನದೀಮ್ ಹುಸೇನ್ ಅವರನ್ನು ಹಿಂದಿರುಗಿ ದೇಶಕ್ಕೆ ಕರೆತರುವಂತೆ ಮನವಿ ಮಾಡಿದ್ದಾರೆ. ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ ಕರ್ನಾಟಕ ವಿದ್ಯಾರ್ಥಿಗಳನ್ನು ಇರಾನ್‌ನಿಂದ ಕರೆತರಲು ಕ್ರಮ ಕೈಗೊಳ್ಳುವಂತೆ ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಪತ್ರದ ಮುಖೇನ ಕೋರಿದ್ದಾರೆ. ಇದರೊಂದಿಗೆ ಸಂಬoದ ಪಟ್ಟದ ಅಧಿಕಾರಿಗಳೊಂದಿಗೆ ನಿರಂತರವಾಗಿ ದೂರವಾಣಿ ಸಂಪರ್ಕದಲ್ಲಿ ಇದ್ದಾರೆ. ಇಸ್ರೇಲ್ ಹಾಗೂ ಇರಾನ್ ನಡುವಿನ ಪರಿಸ್ಥಿತಿ ಅವಲೋಕಿಸಿ ವಿದ್ಯಾರ್ಥಿಗಳನ್ನು ಕರೆತರುವುದಾಗಿ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ ತಿಳಿಸಿದ್ದಾರೆ