ಬಳ್ಳಾರಿ,ಜು.08
ಬೆಳೆ ವಿಮೆಗೆ ಹೆಚ್ಚು ರೈತರು ನೋಂದಾಯಿಸಿಕೊಳ್ಳುವಂತೆ ಕ್ರಮ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರ್ ಅವರು ಕೃಷಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಶನಿವಾರ ನಡೆದ ಪ್ರಸ್ತಕ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯ ಅರಿವು ಮೂಡಿಸುವ ಹಾಗೂ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಮಾತನಾಡಿದರು.
ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಉತ್ತಮ ಮಳೆ ಆಗುತ್ತಿದ್ದು ಈಗಾಗಲೇ ಕೃಷಿ ಚಟುವಟಿಕೆಗಳು ಬರದಿಂದ ಸಾಗುತ್ತಿವೆ. ಎಲ್ಲಾ ಅಧಿಕಾರಿಗಳು ಜಿಲ್ಲೆಯಲ್ಲಿ ಬೆಳೆ ವಿಮೆ ಕುರಿತು ವ್ಯಾಪಕ ಪ್ರಚಾರ ನೀಡಿ ಹೆಚ್ಚಿನ ಸಂಖ್ಯೆಯಲ್ಲಿ ಬೆಳೆ ವಿಮೆ ಯೋಜನೆಯಡಿ ರೈತರನ್ನು ನೋಂದಾಯಿಸಿಕೊಳ್ಳುವಂತೆ ಅರಿವು ಮೂಡಿಸುವ ಕಾರ್ಯವಾಗಬೇಕು ಎಂದು ಸೂಚಿಸಿದರು.
ಬೆಳೆ ವಿಮೆ ವಿಷಯವನ್ನು ಆದ್ಯತೆಯ ವಿಷಯವನ್ನಾಗಿ ಪರಿಗಣಿಸಬೇಕು. ವಿಸ್ತøತವಾಗಿ ವ್ಯಾಪಕ ಪ್ರಚಾರ ನೀಡಬೇಕು ಎಂದು ತಿಳಿಸಿದರು.
ರೈತರು ಬೆಳೆ ನೋಂದಾಯಿಸಿಕೊಳ್ಳಲು ಬ್ಯಾಂಕ್, ಗ್ರಾಮ ಒನ್ ಹಾಗೂ ಸಿಎಸ್ಸಿ ಕೇಂದ್ರಗಳಿಗೆ ಸಂಪರ್ಕಿಸಬಹುದಾಗಿದ್ದು, ರೈತರಿಗೆ ಅಗತ್ಯ ಮಾಹಿತಿ ಒದಗಿಸಬೇಕು ಎಂದರು.
ಸಭೆಯಲ್ಲಿ ಜಂಟಿ ಕೃಷಿ ನಿರ್ದೇಶಕ ಕೆ.ಮಲ್ಲಿಕಾರ್ಜುನ, ಉಪ ಕೃಷಿ ನಿರ್ದೇಶಕ ಕೆಂಗೇಗೌಡ, ಸಹಾಯಕ ಕೃಷಿ ನಿರ್ದೇಶಕ ದಯಾನಂದ ಸೇರಿದಂತೆ ಜಿಲ್ಲಾ ಬ್ಯಾಂಕ್ ವ್ಯವಸ್ಥಾಪಕರು, ಸಹಕಾರ ಸಂಘದ ಪ್ರತಿನಿಧಿಗಳು ಹಾಗೂ ಜಿಲ್ಲೆಯ ಗ್ರಾಮ ಒನ್ ಮತ್ತು ಸಿಎಸ್ಸಿ ಕೇಂದ್ರಗಳ ಅಪರೇಟರ್ಗಳು ಉಪಸ್ಥಿತರಿದ್ದರು.