Ad image

ಜು.21 ರಂದು ಹಡಪದ ಅಪ್ಪಣ್ಣ ಜಯಂತಿ ಅರ್ಥಪೂರ್ಣ ಅಚರಣೆಗೆ ನಿರ್ಧಾರ: ಎಡಿಸಿ ಮೊಹಮ್ಮದ್ ಝುಬೇರ್

Vijayanagara Vani
ಜು.21 ರಂದು ಹಡಪದ ಅಪ್ಪಣ್ಣ ಜಯಂತಿ ಅರ್ಥಪೂರ್ಣ ಅಚರಣೆಗೆ ನಿರ್ಧಾರ: ಎಡಿಸಿ ಮೊಹಮ್ಮದ್ ಝುಬೇರ್
ಬಳ್ಳಾರಿ,
ಜಿಲ್ಲಾಡಳಿತದಿಂದ ಶಿವಶರಣ ಶ್ರೀ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮವನ್ನು ಜು.21 ರಂದು ಅರ್ಥಪೂರ್ಣ ಆಚರಿಸಲಾಗುವುದು ಎಂದು ಅವರು ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರ್ ಅವರು ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ವಿಡಿಯೋ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಹಡಪದ ಅಪ್ಪಣ್ಣ ಜಯಂತಿ ಪೂರ್ವಭಾವಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.
ಅಂದು ಬೆಳಿಗ್ಗೆ 10.30 ಕ್ಕೆ ನಗರದ ಹೆಚ್.ಆರ್.ಗವಿಯಪ್ಪ ವೃತ್ತದಿಂದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದ ವೇದಿಕೆ ಕಾರ್ಯಕ್ರಮದವರೆಗೆ ಮೆರವಣಿಗೆ ನಡೆಯಲಿದೆ. ಇದಕ್ಕೆ ಬೇಕಾದ ಅಗತ್ಯ ಸಿದ್ದತೆ ಮಾಡಿಕೊಳ್ಳಬೇಕು ಎಂದು ಅವರು ತಿಳಿಸಿದರು.
ವೇದಿಕೆ ಕಾರ್ಯಕ್ರಮ ನಡೆಯುವ ಸ್ಥಳ ಸ್ವಚ್ಛತೆ, ಕುಡಿಯುವ ನೀರಿನ ವ್ಯವಸ್ಥೆ, ಮೆರವಣಿಗೆಗೆ ವಾಹನ ವ್ಯವಸ್ಥೆ ಕಲ್ಪಿಸಿಕೊಡಬೇಕು ಎಂದು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.
ಶಿಷ್ಠಾಚಾರದಂತೆ ಆಹ್ವಾನ ಪತ್ರಿಕೆ ಮುದ್ರಿಸಿ ಗಣ್ಯರನ್ನು ಆಹ್ವಾನಿಸಬೇಕು. ಶಿವಶರಣರ ಕುರಿತು ವಿಷಯ ತಜ್ಞರಿಂದ ವಿಶೇಷ ಉಪನ್ಯಾಸ ಮತ್ತು ಕಲಾವಿದರಿಂದ ವಚನ ಗಾಯನವನ್ನು ಆಯೋಜಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಸಮಾಜದ ಮುಖಂಡರು ಜಯಂತಿ ಆಚರಣೆಗೆ ಸಂಬಂಧಿಸಿದಂತೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ, ಜಿಪಂ ಸಹಾಯಕ ಕಾರ್ಯದರ್ಶಿ ಬಸವರಾಜ್ ಹಿರೇಮಠ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವಿಜಯ್ಕುಮಾರ್ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಉಪಸ್ಥಿತರಿದ್ದರು.
——–

Share This Article
error: Content is protected !!
";