ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಜೂನ್ 27ರಂದು ನಾಡಪ್ರಭು ಕೆಂಪೇಗೌಡ ಜಯಂತಿ: ಅರ್ಥಪೂರ್ಣ ಆಚರಣೆ

Vijayanagara Vani
ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಜೂನ್ 27ರಂದು ನಾಡಪ್ರಭು ಕೆಂಪೇಗೌಡ ಜಯಂತಿ: ಅರ್ಥಪೂರ್ಣ ಆಚರಣೆ
ಚಿತ್ರದುರ್ಗ
ಜಿಲ್ಲಾಡಳಿತದ ವತಿಯಿಂದ ಇದೇ ಜೂನ್ 27ರಂದು ಬೆಳಿಗ್ಗೆ 11ಕ್ಕೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಮಟ್ಟದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮದ ಆಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸರ್ಕಾರದ ವತಿಯಿಂದ ಆಚರಿಸಲಾಗುವ ಕೆಂಪೇಗೌಡ ಜಯಂತಿ ಕಾರ್ಯಕ್ರಮಕ್ಕೆ ಪ್ರತಿ ತಾಲ್ಲೂಕಿಗೆ ರೂ.1 ಲಕ್ಷ ವಿಶೇಷ ಅನುದಾನವನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವತಿಯಿಂದ ಬಿಡುಗಡೆ ಮಾಡಲಾಗಿದ್ದು, ಜೂನ್ 27ರಂದು ಜಿಲ್ಲಾಮಟ್ಟದಲ್ಲಿ, ತಾಲ್ಲೂಕುಮಟ್ಟದಲ್ಲಿ ಹಾಗೂ ಎಲ್ಲ ಶಾಲಾ-ಕಾಲೇಜುಗಳಲ್ಲಿಯೂ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಹೇಳಿದರು.
ನಾಡಪ್ರಭು ಕೆಂಪೇಗೌಡರ ಜೀವನ, ಸಾಧನೆ, ಕೊಡುಗೆಗಳ ಕುರಿತು ಶಾಲಾ-ಕಾಲೇಜುಗಳಲ್ಲಿ ಚರ್ಚಾ ಸ್ಪರ್ಧೆ, ಪ್ರಬಂಧ ಸ್ಪರ್ಧೆ, ಭಾಷಣ ಸ್ಪರ್ಧೆ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಬೇಕು. ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಜಯಂತಿ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲು ಅಗತ್ಯ ಕ್ರಮವಹಿಸಬೇಕು ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಯಂತಿ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ, ಗೀತಗಾಯನ ಹಮ್ಮಿಕೊಳ್ಳಲಾಗುವುದು. ಸರ್ಕಾರಿ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು ಎಂದು ತಿಳಿಸಿದ ಅವರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಮಹನೀಯರ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.
ಸಭೆಯಲ್ಲಿ ತಹಶೀಲ್ದಾರ್ ಡಾ.ನಾಗವೇಣಿ, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಪುಟ್ಟಸ್ವಾಮಿ, ಶಾಲಾ ಶಿಕ್ಷಣ ಇಲಾಖೆ ಡಿವೈಪಿಸಿ ವೆಂಕಟೇಶ್, ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಚೇತನ್, ಉಪಾಧ್ಯಕ್ಷ ಒ.ಎಲ್.ಮಂಜುಕುಮಾರ್, ಕಾರ್ಯದರ್ಶಿ ಜಗನ್ನಾಥ್, ನಿರ್ದೇಶಕರಾದ ಪರಮೇಶ್ವರ, ಜಿ.ದ್ಯಾಮಪ್ಪ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.
ಫೋಟೋ ವಿವರ: ಚಿತ್ರದುರ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಮಟ್ಟದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮದ ಆಚರಣೆ ಅಂಗವಾಗಿ ಸೋಮವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾತನಾಡಿದರು.
WhatsApp Group Join Now
Telegram Group Join Now
Share This Article
error: Content is protected !!