ಜುಲೈ 6ರಂದು ವಸತಿ ಶಾಲೆಗಳ ಖಾಲಿ ಸ್ಥಾನಗಳ ದಾಖಲಾತಿಗೆ ಪ್ರವೇಶ ಪರೀಕ್ಷೆ

Vijayanagara Vani
ಜುಲೈ 6ರಂದು ವಸತಿ ಶಾಲೆಗಳ ಖಾಲಿ ಸ್ಥಾನಗಳ ದಾಖಲಾತಿಗೆ ಪ್ರವೇಶ ಪರೀಕ್ಷೆ
ಚಿತ್ರದುರ್ಗಜುಲೈ.04:
ಚಿತ್ರದುರ್ಗ ಜಿಲ್ಲೆಯಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ, ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಏಕಲವ್ಯ, ಡಾ. ಬಿ.ಆರ್.ಅಂಬೇಡ್ಕರ್, ಶ್ರೀಮತಿ ಇಂದಿರಾಗಾಂದಿ ವಸತಿ ಶಾಲೆಗಳ 2024-25ನೇ ಸಾಲಿನ 7, 8 ಮತ್ತು 9ನೇ ತರಗತಿಗಳ ಖಾಲಿ ಸ್ಥಾನಗಳ ದಾಖಲಾತಿಗೆ ಇದೇ ಜುಲೈ 6ರಂದು ಬೆಳಿಗ್ಗೆ 11 ರಿಂದ 12.30 ರವರೆಗೆ ಪ್ರವೇಶ ಪರೀಕ್ಷೆ ನಡೆಯಲಿದೆ.
ಪರೀಕ್ಷಾ ಕೇಂದ್ರಗಳ ವಿವರ ಇಂತಿದೆ. ಚಿತ್ರದುರ್ಗ ತಾಲ್ಲೂಕಿನ ಗೂಳಯ್ಯನಹಟ್ಟಿ ಮೊರಾರ್ಜಿ ದೇಸಾಯಿ ವಸತಿ ಶಾಲೆ (ಸಾಮಾನ್ಯ-24), ಚಳ್ಳಕೆರೆ ತಾಲ್ಲೂಕಿನ ಚಳ್ಳಕೆರೆ ನಗರದ ಪಾವಗಡ ರಸ್ತೆಯಲ್ಲಿನ ಮೊರಾರ್ಜಿ ದೇಸಾಯಿ ವಸತಿ ಶಾಲೆ (ಪ.ವರ್ಗ-26), ಹಿರಿಯೂರು ತಾಲ್ಲೂಕಿನ ದೇವರಕೊಟ್ಟ ಮೊರಾರ್ಜಿ ದೇಸಾಯಿ ವಸತಿ ಶಾಲೆ (ಪ.ಜಾತಿ-33), ಹೊಳಲ್ಕೆರೆ ತಾಲ್ಲೂಕಿನ ಚಿತ್ರಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆ(ಪ.ವರ್ಗ-100), ಹೊಸದುರ್ಗ ತಾಲ್ಲೂಕಿನ ನಾಗೇನಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ(ಹಿಂ.ವರ್ಗ-30), ಮೊಳಕಾಲ್ಮೂರು ತಾಲ್ಲೂಕಿನ ಸೂಲೇನಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ (ಪ.ವರ್ಗ-28) ಕೇಂದ್ರಗಳಲ್ಲಿ ಪರೀಕ್ಷೆ ಜರುಗಲಿದೆ.
ಅರ್ಜಿ ಸ್ವೀಕರಿಸಿದ ಎಲ್ಲಾ ವಸತಿ ಶಾಲೆಗಳಲ್ಲಿ ಪ್ರವೇಶ ಪತ್ರಗಳನ್ನು ವಿತರಿಸಲಾಗುತ್ತಿದೆ. ಪ್ರವೇಶ ಪತ್ರಗಳು ತಲುಪದೇ ಇರುವ ಅಭ್ಯರ್ಥಿಗಳು ಪರೀಕ್ಷಾ ದಿನದಂದು ತಮ್ಮ ತಾಲ್ಲೂಕಿನ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಿ ತಮ್ಮ ಪ್ರವೇಶ ಪತ್ರಗಳನ್ನು ಪಡೆದು ಪರೀಕ್ಷೆ ಬರೆಯಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
WhatsApp Group Join Now
Telegram Group Join Now
Share This Article
error: Content is protected !!