ಹೊಸಪೇಟೆ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶ ಆರಂಭ

Vijayanagara Vani
ಹೊಸಪೇಟೆ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶ ಆರಂಭ
ಹೊಸಪೇಟೆ (ವಿಜಯನಗರ) ಮೇ.29 ): 2024-25ನೇ ಸಾಲಿನಲ್ಲಿ ಹೊಸಪೇಟೆ ತಾಲೂಕಿನಲ್ಲಿರುವ ವಿವಿಧ ಸಮಾಜ ಕಲ್ಯಾಣ ಇಲಾಖೆಯ ಪರಿಶಿಷ್ಟ ಜಾತಿಯ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ಖಾಲಿ ಇರುವ ಸ್ಥಾನಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹೊಸಪೇಟೆ ತಾಲೂಕು ವ್ಯಾಪ್ತಿಯ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಾದ ಡಾ. ಬಿ.ಆರ್ ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ ಹೊಸಪೇಟೆ, ಡಾ. ಬಿ.ಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ ಮರಿಯಮ್ಮನಹಳ್ಳಿ, ಡಾ. ಬಿ.ಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ ಕಮಲಾಪುರ, ಡಾ. ಬಿ.ಆರ್. ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯ ಹೊಸಪೇಟೆ, ಡಾ. ಬಿ.ಆರ್ ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯ ಕಮಲಾಪುರ ಇಲ್ಲಿ ಪ್ರವೇಶ ಪಡೆಯಲು ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು ಅರ್ಜಿಯನ್ನು ಜೂನ್ 15 ರೊಳಗಾಗಿ ಆನ್‌ಲೈನ್ ಮೂಲಕ ಸಮಾಜ ಕಲ್ಯಾಣ ಇಲಾಖಾ ವೆಬ್‌ಸೈಟ್  www.sw.kar.nic.in ನಲ್ಲಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸಿದ ಅಂತಿಮ ಪ್ರತಿಯನ್ನು ಪ್ರವೇಶ ಪಡೆದ ಶಾಲಾ ಮುಖ್ಯಗುರುಗಳ ಸಹಿ ಪಡೆದು ಸಮಾಜ ಕಲ್ಯಾಣ ಇಲಾಖೆಗೆ ಸಲ್ಲಿಸಬೇಕು. ಅಂತಿಮ ಪ್ರತಿಯ ಜೊತೆಗೆ ವಿದ್ಯಾರ್ಥಿಯ ಆಧಾರ್ ಕಾರ್ಡ್, ವಿದ್ಯಾರ್ಥಿಯ ಎಸ್‌ಎಟಿಎಸ್ ಸಂಖ್ಯೆ, ವಿದ್ಯಾರ್ಥಿಯ ಜಾತಿ ಪ್ರಮಾಣ ಪತ್ರ, ವಿದ್ಯಾರ್ಥಿಯ ಆದಾಯ ಪ್ರಮಾಣ ಪತ್ರ, ಮೊಬೈಲ್ ಸಂಖ್ಯೆ, ವಿದ್ಯಾರ್ಥಿಯ ಪೋಟೋ, ವಿದ್ಯಾರ್ಥಿಯ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಸಂಖ್ಯೆ, ಹಿಂದಿನ ವರ್ಷದ ಅಂಕಪಟ್ಟಿಯನ್ನು ಜೊತೆಗೆ ವಿದ್ಯಾರ್ಥಿಗಳು ಪ್ರವೇಶ ಪಡೆದ ಶಾಲೆಯ ಹೆಸರನ್ನು ನಮೂದಿಸಿ ಎಲ್ಲ ದಾಖಲೆಗಳನ್ನು ಸಹ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಹೊಸಪೇಟೆ 9480843076ಗೆ ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಪ್ರಕಟಣೆ ತಿಳಿಸಿದೆ.
WhatsApp Group Join Now
Telegram Group Join Now
Share This Article
error: Content is protected !!