Ad image

*ಜೂ.29 ರಂದು ಕೃಷಿ – ಶಿಕ್ಷಣ ಸುಗ್ಗಿ*

Vijayanagara Vani
*ಜೂ.29 ರಂದು ಕೃಷಿ – ಶಿಕ್ಷಣ ಸುಗ್ಗಿ*
ಶಿವಮೊಗ್ಗ ಜೂನ್.27)
ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಶಿವಮೊಗ್ಗ, ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಶಿವಮೊಗ್ಗ ಇವರ ಸಂಯುಕ್ತ್ರಾಯದಲ್ಲಿ ಜೂನ್ 29 ರ ಬೆಳಗ್ಗೆ 9.30 ಕ್ಕೆ ನಗರದ ಕುವೆಂಪು ರಂಗಮಂದಿರದಲ್ಲಿ ಕೃಷಿ ಶಿಕ್ಷಣ ಸುಗ್ಗಿ-2024 ಕಾರ್ಯಕ್ರಮ ಏರ್ಪಡಿಸಲಾಗಿದೆ.
ಈ ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಇವರು ನೆರವೇರಿಸುವರು. ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಆರ್.ಸಿ ಜಗದೀಶ ಅಧ್ಯಕ್ಷತೆ ವಹಿಸುವರು. ಮುಖ್ಯ ಅಥಿತಿಗಳಾಗಿ ಜಿಲ್ಲಾಧಿಕಾರಿಗಳಾದ ಗುತುದತ್ತ ಹೆಗಡೆ, ವಿವಿ ಆಡಳಿತ ಮಂಡಳಿಯ ಸದಸ್ಯರುಗಳಾದ ಜಿ.ಹೆಚ್.ಶ್ರೀನಿವಾಸ್, ಡಾ.ಪಿ.ಕೆ ಬಸವರಾಜ, ಡಾ.ಬಿ.ಕೆ ಕುಮಾರಸ್ವಾಮಿ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕೃಷ್ಣಪ್ಪ.ಬಿ ಮತ್ತು ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಅಧಿಕಾರಿಗಳು, ಮಂಡಳಿಯ ಸದಸ್ಯರು ಹಾಗೂ ಸಿಬ್ಬಂದಿವರ್ಗದವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.
Share This Article
error: Content is protected !!
";