Ad image

ಸಂಡೂರು ವಿಧಾನಸಭೆ ಉಪಚುನಾವಣೆ: ಸ್ಪರ್ಧೆಯಲ್ಲಿನ ಅಭ್ಯರ್ಥಿಗಳಿಗರ ಚಿಹ್ನೆ ಹಂಚಿಕೆ

Vijayanagara Vani
ಸಂಡೂರು ವಿಧಾನಸಭೆ ಉಪಚುನಾವಣೆ: ಸ್ಪರ್ಧೆಯಲ್ಲಿನ ಅಭ್ಯರ್ಥಿಗಳಿಗರ ಚಿಹ್ನೆ ಹಂಚಿಕೆ

 

- Advertisement -
Ad imageAd image

ಬಳ್ಳಾರಿ,ಅ.31
95-ಸಂಡೂರು (ಪ.ಪಂ) ವಿಧಾನಸಭೆ ಉಪಚುನಾವಣೆ ಹಿನ್ನಲೆಯಲ್ಲಿ ಸಂಡೂರು ಮತಕ್ಷೇತ್ರಕ್ಕೆ ಸ್ಪರ್ಧಿಸಿರುವ ಅಭ್ಯರ್ಥಿಗಳಿಗೆ ಚುನಾವಣಾ ಆಯೋಗದ ನಿಯಮಗಳ ಅನ್ವಯ ಚಿಹ್ನೆ ಹಂಚಿಕೆ ಮಾಡಲಾಗಿದೆ ಎಂದು ಸಂಡೂರು ವಿಧಾನಸಭೆ ಉಪಚುನಾವಣಾಧಿಕಾರಿ ರಾಜೇಶ್.ಹೆಚ್.ಡಿ ಅವರು ತಿಳಿಸಿದ್ದಾರೆ.
ಮಾನ್ಯತೆ ಪಡೆದ ರಾಷ್ಟ್ರೀಯ ಮತ್ತು ರಾಜ್ಯ ರಾಜಕೀಯ ಪಕ್ಷಗಳಾದ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಈ.ಅನ್ನಪೂರ್ಣ ಅವರಿಗೆ ಕೈ ಚಿಹ್ನೆ, ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಬಂಗಾರ ಹನುಮಂತ ಅವರಿಗೆ ಕಮಲ ಚಿಹ್ನೆ ನೀಡಲಾಗಿದೆ.
ಅದರಂತೆ ನೋಂದಾಯಿತ ರಾಜಕೀಯ ಪಕ್ಷಗಳಾದ ಕರ್ನಾಟಕ ಜನತಾ ಪಕ್ಷದ ಅಭ್ಯರ್ಥಿ ಅಂಜಿನಪ್ಪ.ಎನ್ ಅವರಿಗೆ ವಜ್ರ ಮತ್ತು ಪಕ್ಷೇತರ ಅಭ್ಯರ್ಥಿಗಳಾದ ಟಿ.ಎಂ.ಮಾರುತಿ ಅವರಿಗೆ ಬ್ಯಾಟರಿ ಚಾರ್ಜ್, ಟಿ.ರ‍್ರಿಸ್ವಾಮಿ ಅವರಿಗೆ ಟ್ರಕ್, ಎನ್.ವೆಂಕಣ್ಣ ಅವರಿಗೆ ಉಂಗುರ ಚಿಹ್ನೆ ನೀಡಲಾಗಿದ್ದು, ನ.13 ರಂದು ಮತದಾನ ನಡೆಯಲಿದೆ ಎಂದು ಸಂಡೂರು ವಿಧಾನಸಭೆ ಉಪಚುನಾವಣಾಧಿಕಾರಿ ರಾಜೇಶ್.ಹೆಚ್.ಡಿ ಅವರು ತಿಳಿಸಿದ್ದಾರೆ.

Share This Article
error: Content is protected !!
";