ವಿಜಯನಗರ(ಹೊಸಪೇಟೆ), ಜು.02: 2025-26 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಮರುವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು ಅನುಷ್ಠಾನಗೊಳಿಸಲು ಅಗ್ರಿಕಲ್ಚರ್ ಇನ್ಸುರೆನ್ಸ್ ಕಂಪನಿಯನ್ನು ಜಿಲ್ಲೆಯಲ್ಲಿ ಆಯ್ಕೆ ಮಾಡಲಾಗಿದ್ದು, ತೋಟಗಾರಿಕೆ ಬೆಳೆಗಾರರು ತಮ್ಮ ಬೆಳೆಗಳಿಗೆ ವಿಮೆ ನೊಂದಾಯಿಸಿಕೊಳ್ಳಲು ಗ್ರಾಮ ಓನ್ ಮತ್ತು ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ಜುಲೈ 31ರೊಳಗೆ ಅರ್ಜಿಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಕೆ.ಎಮ್.ರಮೇಶ ತಿಳಿಸಿದ್ದಾರೆ.
ತೋಟಗಾರಿಕೆ ಬೆಳೆಗಳಾದ ದಾಳಿಂಬೆ ಹಾಗೂ ಹಸಿ ಮೆಣಿಸಿನಕಾಯಿ ಬೆಳೆಗಳಿಗೆÀ ಬೆಳೆ ವಿಮೆ ಮಾಡಿಸಬಹುದಾಗಿದೆ. ವಿಮಾ ಮೊತ್ತ ಮತ್ತು ರೈತರ ವಿಮಾ ಕಂತಿನ ವಿವರ : ಪ್ರತಿ ಹೆಕ್ಟೇರ್‌ಗೆ ದಾಳಿಂಬೆ ವಿಮಾ ಮೊತ್ತ ರೂ.1,27,000 ರೈತರ ವಿಮಾ ಕಂತು ಶೇ.5 ರಂತೆ 6,350 ಹಾಗೂ ಹಸಿ ಮೆಣಸಿನಕಾಯಿ ಬೆಳೆ ವಿಮಾ ಮೊತ್ತ ರೂ.71,000 ರೈತರ ವಿಮಾ ಕಂತು ಶೇ.5 ರಂತೆ 3,550 ಆಗಿದೆ. ಬೆಳೆ ವಿಮಾ ಮೊತ್ತವು ಬೆಳೆ ಸಾಲ ಪಡೆಯುವ ಮತ್ತು ಸಾಲ ಪಡೆಯದ ರೈತರಿಗೆ ಒಂದೇ ಆಗಿರುತ್ತದೆ, ಬೆಳೆ ವಿಮಾ ಮೊತ್ತವನ್ನು ಪಾವತಿಸಲು ಹತ್ತಿರದ ರಾಷ್ಟಿçÃಕೃತ ಬ್ಯಾಂಕ್ ಶಾಖೆಗಳಲ್ಲಿ ಸಹಕಾರಿ ಸಂಘಗಳನ್ನು ಮತ್ತು ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ಸಂಪರ್ಕಿಸಿ ಮಾಹಿತಿಯನ್ನು ಪಡೆಯಬಹುದಾಗಿದೆ.
ಅಗತ್ಯ ದಾಖಲಾತಿ ವಿವರ : ಭೂಮಿ ಹೊಂದಿರುವುದಕ್ಕೆ ದಾಖಲೆಗಳಾದ ಪಹಣಿ, ಬ್ಯಾಂಕ್ ಪಾಸ್ ಪುಸ್ತಕ, ಆಧಾರ ಸಂಖ್ಯೆ ಹಾಗೂ ಸ್ವಯಂ ಘೋಷಿತ ಬೆಳೆ ವಿವರಗಳನ್ನು ನೀಡತಕ್ಕದ್ದು. ಕಂಪನಿಯ ಪ್ರತಿನಿಧಿಯನ್ನು ಸಂಪರ್ಕಿಸಲು ಮೊ.7406490045 ಗೆ ಕರೆ ಮಾಡಬಹುದು.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ತೋಟಗಾರಿಕೆ ಅಧಿಕಾರಿ ರೈತ ಸಂಪರ್ಕ ಕೇಂದ್ರ ಹೊಸಪೇಟೆ ಮೊ.9164297220, ಮರಿಯಮ್ಮನಹಳ್ಳಿ ಮೊ.7204888978, ಕಮಲಾಪುರ ಮೊ.8123465548 ಹಾಗೂ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು ಹೊಸಪೇಟೆ ಮೊ.8310291867 ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ